Kannada should not be limited to speeches; ಕನ್ನಡ ಅಭಿಮಾನ ಭಾಷಣಗಳಿಗೆ ಸೀಮಿತ ಆಗಬಾರದು: ಜಿ.ಎಸ್.ಸ್ಮಿತಾ

ದೊಡ್ಡಬಳ್ಳಾಪುರ; ಕನ್ನಡಿಗರ ಕನ್ನಡ ಅಭಿಮಾನ ಭಾಷಣಗಳಿಗೆ ಮಾತ್ರ ಸೀಮಿತ ಆಗಬಾರದು (Kannada should not be limited to speeches).‌ ಕನ್ನಡ ಭಾಷೆಯನ್ನು ಎಲ್ಲೆಡೆ ಬಳಸಿದಾಗ ಮಾತ್ರ ಕನ್ನಡವನ್ನು ಉಳಿಸಿ ಬೆಳೆಸಲು ಸಾಧ್ಯವಾಗುತ್ತದೆ ಎಂದು ದೊಡ್ಡಬಳ್ಳಾಪುರ ಉಪವಿಭಾಗದ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರಾದ ಜಿ.ಎಸ್.ಸ್ಮಿತಾ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಬಾಲಕಿಯರ ವಿದ್ಯಾರ್ಥಿನಿಲಯಲ್ಲಿ ನಡೆದ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ  ಶ್ರೀಮಂತ ಪರಂಪರೆ ಇದೆ. ಕನ್ನಡ ಸಾಹಿತ್ಯದಲ್ಲಿ ಶ್ರೇಷ್ಠ ಕೃತಿಗಳು ಬಂದಿದೆ. ಎಂದಿಗೂ ಕನ್ನಡ ಸಾಹಿತ್ಯದ ಓದುಗರು ಕಡಿಮೆಯಾಗಬಾರದು. ಕನ್ನಡ ನಾಡು ಮೊದಲಿನಿಂದಲೂ ಸರ್ವಜನಾಂಗದ ತೋಟ ಎಂಬ ಕೀರ್ತಿಗೆ ಪಾತ್ರವಾಗಿದೆ. ಬೆಂಗಳೂರು ಇಂದು ದೇಶದ ರಾಜಧಾನಿಯಂತೆ ಕಾಣುತ್ತಿದೆ. ಬೆಂಗಳೂರಿನಲ್ಲಿರುವ ಕನ್ನಡಿಗರು ಕನ್ನಡ ಭಾಷೆಯಲ್ಲೇ ಮಾತನಾಡಿದರೆ ಇತರರು ಕನ್ನಡ ಕಲಿಯಲು ಸಾಧ್ಯವಾಗುತ್ತದೆ ಎಂದರು.

ಕೇಂದ್ರ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆಗಳು ಈಗ ಕನ್ನಡದಲಿ ನಡೆಯುತ್ತಿರುವುದು ಸ್ವಾಗತಾರ್ಹ ವಿಷಯವಾಗಿದೆ. ಕನ್ನಡದಲ್ಲಿ ವ್ಯಾಸಂಗ ಮಾಡಿದವರು ಸಹ ಸ್ಪರ್ಧಾತ್ಮಕ ಪರೀಕ್ಷಗಳಿಗೆ ಸೂಕ್ತ ಸಿದ್ದತೆ ನಡೆಸಿದರೆ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ.   ಮಾಹಿತಿಗಳು ಈಗ ಕನ್ನಡ ಜಾಲತಾಣಗಳಲ್ಲೂ ದೊರೆಯುತ್ತವೆ.

ಇವುಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಕನ್ನಡಿಗರು ಸ್ಥಳೀಯ ಉದ್ಯೋಗಗಳನ್ನು ಪಡೆಯಲು ಕೌಶಲ್ಯ ಜ್ಞಾನವನ್ನು  ಅರಿಯಬೇಕೆಂದರು.

ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ಮಾತನಾಡಿ, ಕನ್ನಡ ಭಾಷೆ ಅತ್ಯಂತ ವೈಜ್ಞಾನಿಕವಾಗಿ ರೂಪಿಗೊಂಡ ಭಾಷೆಯಾಗಿದೆ. ಕನ್ನಡ ಲಿಪಿಯನ್ನು ಲಿಪಿಗಳ ರಾಣಿ ಎಂದು ಕರೆಯಲಾಗಿದೆ. ಕನ್ನಡ ಭಾಷೆಯ ಅನನ್ಯತೆಯನ್ನು ಕನ್ನಡ ಕವಿಗಳು ಹಾಡಿ ಹೊಗಳಿದ್ದಾರೆ. ಹಚ್ಚೇವು ಕನ್ನಡದ ದೀಪ’ ಗೀತೆಯನ್ನು ಕೇಳದ ಕನ್ನಡಿಗರೇ ಇಲ್ಲ.   ಕನ್ನಡತ್ವವನ್ನು ಡಿ.ಎಸ್.ಕರ್ಕಿಯವರು    ತಮ್ಮ  ಕವಿತೆಯ ಮೂಲಕ ಕಟ್ಟಿಕೊಟ್ಟಿದ್ದಾರೆ.‌ ಕನ್ನಡ ನೆಲದಲ್ಲಿ ಕನ್ನಡತನ ಎಂದಿಗೂ ಮರೆಯಾಗಬಾರದು. ಕನ್ನಡತನವನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಬೇಕು ಎಂದರು.‌

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಕನ್ನಡ ಭಾಷೆಯನ್ನು ಎಲ್ಲಾ ರಂಗದಲ್ಲೂ ಸಶಕ್ತ ಭಾಷೆಯಾಗಿ ಬಳಸಬೇಕಾಗಿದೆ. ಉನ್ನತ ಶಿಕ್ಷಣ, ವೈದ್ಯಕೀಯ ಶಿಕ್ಷಣ, ತಾಂತ್ರಿಕ ಶಿಕ್ಷಣವನ್ನು ಕನ್ನಡ ಭಾಷಾ ಮಾಧ್ಯಮದಲ್ಲಿ ಕಲಿಯುವ ವಾತಾವರಣ ನಿರ್ಮಾಣ ಆಗಬೇಕಾಗಿದೆ. ಇದಕ್ಕಾಗಿ ಕನ್ನಡ ಪದಕೋಶವನ್ನು ಕನ್ನಡ ಭಾಷಾ ತಜ್ಞರು ಸಿದ್ದಗೊಳಿಸಬೇಕು. ಕರ್ನಾಟಕ ರಾಜ್ಯದ ನ್ಯಾಯಾಲಯಗಳಲ್ಲಿ ಕನ್ನಡ ಭಾಷೆಯಲ್ಲಿ ಎಲ್ಲಾ ವ್ಯವಹಾರಗಳು ನಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಅನಿತಾದೇವಿ ನಾಯಕ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ಆಯುಕ್ತ ವೆಂಕಟರಾಜು, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ಡಿ.ದೇವರಾಜ ಅರಸು ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ಮಮತಾ, ನಿಲಯದ ಪಾಲಕರುಗಳಾದ ಚಂದ್ರಶೇಖರ್, ವೆಂಕಟೇಶ್ ಮತ್ತು ವಿದ್ಯಾರ್ಥಿನಿಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿನಿಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ರಾಜಕೀಯ

ಲೋಕಸಭೆ: ಕಾಂಗ್ರೆಸ್, ಡಿಎಂಕೆ ಮೇಲೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಲೋಕಸಭೆ: ಕಾಂಗ್ರೆಸ್, ಡಿಎಂಕೆ ಮೇಲೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಲೋಕಸಭೆ ಮತ್ತು ವಿಧಾಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇರಿಸಿರುವ ಹೆಜ್ಜೆ ಐತಿಹಾಸಿಕ ಎಂದು ಬಣ್ಣಿಸಿದ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy); ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ

[ccc_my_favorite_select_button post_id="121061"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!