MSV ಪಬ್ಲಿಕ್ ಶಾಲೆಯಲ್ಲಿ ಕ್ರೀಡೋತ್ಸವ; ಮಾನಸಿಕ, ದೈಹಿಕ ಸದೃಢತೆಗಾಗಿ ಕ್ರೀಡೆ ಸಹಾಯಕಾರಿ ಎಂದ ಸಬ್ ಇನ್ಸ್ಪೆಕ್ಟರ್

ದೊಡ್ಡಬಳ್ಳಾಪುರ: ನಗರ ಪ್ರತಿಷ್ಠಿತ MSV ಪಬ್ಲಿಕ್ ಶಾಲೆಯಲ್ಲಿ ಇಂದು (ಶನಿವಾರ) ಶಾಲಾ ವಾರ್ಷಿಕ ಕ್ರೀಡೋತ್ಸವವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕೃಷ್ಣಪ್ಪ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ದೊಡ್ಡಬಳ್ಳಾಪುರ ಶಾಖೆಯ ವ್ಯವಸ್ಥಾಪಕ ಸಂಜಯ ಕುಮಾರ್ ಸಿಂಗ್ ಭಾಗವಹಿಸಿದ್ದರು.

MSV ಪಬ್ಲಿಕ್ ಶಾಲೆಯಲ್ಲಿ ಕ್ರೀಡೋತ್ಸವ; ಮಾನಸಿಕ, ದೈಹಿಕ ಸದೃಢತೆಗಾಗಿ ಕ್ರೀಡೆ ಸಹಾಯಕಾರಿ ಎಂದ ಸಬ್ ಇನ್ಸ್ಪೆಕ್ಟರ್

ಕಾರ್ಯಕ್ರಮಕ್ಕೆ ಚಾಲನೆ‌ ನೀಡಿ ಮಾತನಾಡಿದ ಸಬ್ ಇನ್ಸ್ಪೆಕ್ಟರ್ ಕೃಷ್ಣಪ್ಪ, ಮಾನಸಿಕ ಆರೋಗ್ಯ ಉತ್ತಮವಾಗಿರಬೇಕಾದರೆ ದೈಹಿಕ ಸದೃಢತೆ ಬಹಳ ಮುಖ್ಯ. ಮಾನಸಿಕವಾಗಿ ಕುಗ್ಗಿರುವಂತಹ ಜೀವಗಳಿಗೆ ದೈಹಿಕ ಚಟುವಟಿಕೆಗಳು ಚೇತರಿಕೆ ಉಂಟು ಮಾಡುತ್ತವೆ ಎಂದರು.

MSV ಪಬ್ಲಿಕ್ ಶಾಲೆಯಲ್ಲಿ ಕ್ರೀಡೋತ್ಸವ; ಮಾನಸಿಕ, ದೈಹಿಕ ಸದೃಢತೆಗಾಗಿ ಕ್ರೀಡೆ ಸಹಾಯಕಾರಿ ಎಂದ ಸಬ್ ಇನ್ಸ್ಪೆಕ್ಟರ್

ಪಾಠದ ಜೊತೆ ಆಟವೂ ಮುಖ್ಯ. ಕಲಿಯುವಿಕೆಯಲ್ಲಿ ಮತ್ತು ಆಟದಲ್ಲಿ ಭಾಗವಹಿಸುವಿಕೆಯನ್ನು ಬೆಂಬಲಿಸಬೇಕು. ಮಕ್ಕಳಲ್ಲಿರುವ ಕ್ರೀಡಾ ಆಸಕ್ತಿಯನ್ನು ಗ್ರಹಿಸಿ, ಅಂತಹ ಪ್ರತಿಭೆಗಳನ್ನು ಗುರುತಿಸಿ, ಶಾಲಾ ಹಂತದಲ್ಲಿ ಕ್ರೀಡಾಕೂಟಗಳನ್ನು ನಡೆಸಿ, ಅವರನ್ನು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುವ ಭದ್ರ ಬುನಾದಿಯನ್ನು ಹಾಕುವುದು ಶಿಕ್ಷಕರ ಪ್ರಮುಖ ಪಾತ್ರ. ಕ್ರೀಡಾ ಮೀಸಲಾತಿಯಿಂದಲೂ ಸಹ ಉತ್ತಮ ಹುದ್ದೆ ಪಡೆಯಲು ಬಹಳಷ್ಟು ಅವಕಾಶವಿದೆ ಎಂದು ತಿಳಿಸಿದರು.

MSV ಪಬ್ಲಿಕ್ ಶಾಲೆಯಲ್ಲಿ ಕ್ರೀಡೋತ್ಸವ; ಮಾನಸಿಕ, ದೈಹಿಕ ಸದೃಢತೆಗಾಗಿ ಕ್ರೀಡೆ ಸಹಾಯಕಾರಿ ಎಂದ ಸಬ್ ಇನ್ಸ್ಪೆಕ್ಟರ್

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ದೊಡ್ಡಬಳ್ಳಾಪುರ ಶಾಖೆಯ ವ್ಯವಸ್ಥಾಪಕರಾದ ಸಂಜಯ ಕುಮಾರ್ ಸಿಂಗ್ ಮಾತನಾಡಿ, ಕ್ರೀಡೆಯಿಂದ ಶಿಸ್ತು ಬೆಳೆಯುತ್ತದೆ. ಕ್ರೀಡೆ ಮಕ್ಕಳಲ್ಲಿ ಸ್ನೇಹವನ್ನು ಗಟ್ಟಿಗೊಳಿಸಲು ಸಹಕಾರಿ ಹಾಗೂ ಪ್ರತಿ ಮಗುವೂ ಕೂಡಾ ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗುತ್ತಾರೆ ಎಂದರು.

ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಸುಬ್ರಮಣ್ಯ ಮಾತನಾಡಿ, ಕ್ರೀಡೆಯು ಶಿಕ್ಷಣದ ಅವಿಭಾಜ್ಯ ಅಂಗ, ಪಠ್ಯಗಳ ಜೊತೆಗೆ ಕ್ರೀಡಾ ಚಟುವಟಿಕೆಗಳು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಾಯ ಮಾಡುತ್ತವೆ. ಜೊತೆಗೆ ಮಕ್ಕಳಲ್ಲಿ ಆತ್ಮವಿಶ್ವಾಸ ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಮೂಡಿಸುತ್ತವೆ ಎಂದರು.

ಒಲಂಪಿಕ್ ಮಾದರಿಯಲ್ಲಿ ನಡೆದ ಪಥ ಸಂಚಲನ, ಕ್ರೀಡಾ ಜ್ಯೋತಿ ಪ್ರಜ್ವಲನ, ಪುಟಾಣಿ ಮಕ್ಕಳ ಮ್ಯಾರಾಥಾನ್, ಯೋಗ,
ಡ್ರಿಲ್ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶಾಲಾ ಕ್ರೀಡಾ ಮಹೋತ್ಸವ ವಿಜೃಂಭಣೆಯಿಂದ ಪ್ರಾರಂಭಗೊಂಡಿತು.

ವಿಜೇತರಿಗೆ ಪ್ರಶಸ್ತಿಪತ್ರ ಹಾಗೂ ಬಹುಮಾನ ವಿತರಿಸಲಾಯಿತು.

ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಮಂಜುಳಾ ಸುಬ್ರಮಣ್ಯ, ಉಪಾಧ್ಯಕ್ಷ ಸ್ವರೂಪ್‍, ನಿರ್ದೇಶಕರಾದ ನಯನಾ ಸ್ವರೂಪ್, ಪ್ರಾಂಶುಪಾಲರಾದ ರೆಮ್ಯ.ಬಿ.ವಿ., ಉಪಪ್ರಾಂಶುಪಾಲರಾದ ಪ್ರತಿಮಾ ಪೈ ಮತ್ತಿತರರಿದ್ದರು.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]