bpl ಕಾರ್ಡ್‌ಗಳು ರದ್ದಾಗುತ್ತಿವೆ ಎನ್ನುವ ಪ್ರಶ್ನೆಯೇ ಪೂರ್ತಿ ತಪ್ಪು; ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ; ಅನರ್ಹರ ಬಿಪಿಎಲ್ (bpl) ಕಾರ್ಡ್ ಗಳು ಮಾತ್ರ ರದ್ದು, ಅರ್ಹರ ಕಾರ್ಡ್ ಗಳಿಗೆ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.

ಬಾಗಲಕೋಟೆಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಬಿಪಿಎಲ್ ಕಾರ್ಡ್ ಗಳ ರದ್ದಾಗುತ್ತಿವೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಬಿಪಿಎಲ್ ಕಾರ್ಡ್ ಗಳು ರದ್ದಾಗುತ್ತಿವೆ ಎನ್ನುವ ಪ್ರಶ್ನೆಯೇ ಪೂರ್ತಿ ತಪ್ಪು. ಪತ್ರಕರ್ತರು ಸರಿಯಾಗಿ ತಿಳಿದುಕೊಂಡು ಬರಬೇಕು. ಅನರ್ಹರ ಕಾರ್ಡ್ ಗಳನ್ನು ವಾಪಾಸ್ ಪಡೆಯಬಹುದು ಎನ್ನುವ ಆಲೋಚನೆ ಮಾತ್ರ ನಮ್ಮದಾಗಿದೆ. ಇದಿನ್ನೂ ಆಹಾರ ಇಲಾಖೆ ಪರಿಶೀಲಿಸುತ್ತಿದೆ. ಇನ್ನೂ ಅಂತಿಮ ತೀರ್ಮಾನ ಆಗಿಲ್ಲ. ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಆದಾಯ ತೆರಿಗೆ ಪಾವತಿಸುವವರಿಗೂ, ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ ಎಂದು ಮರು ಪ್ರಶ್ನಿಸಿದ ಸಿಎಂ, ಯಾವ ಕಾರ್ಡ್ ಗಳೂ ರದ್ದಾಗುವುದಿಲ್ಲ. ಅನರ್ಹರಿಂದ ವಾಪಾಸ್ ಪಡೆಯಬಹುದು. ಅರ್ಹರು ವಂಚಿತರಾಗಬಾರದು ಎಂದರು.

40% ಕಮಿಷನ್ ಆರೋಪದಿಂದ ಮುಕ್ತರಾಗಿದ್ದೇವೆ ಎನ್ನುವ ಆರ್.ಅಶೋಕ್ ಮಾತಿನ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು ಕೊಟ್ಟ ದೂರಿನ ಆಧಾರದಲ್ಲಿ ನಾವು ತನಿಖೆಗೆ ಸೂಚಿಸಿದ್ದೆವು. ಸಾಕ್ಷ್ಯಾಧಾರಗಳ ಕೊರತೆಯಿಂದ ಕೊಲೆ ಆರೋಪಿಗಳು ಬಿಡುಗಡೆ ಆಗುತ್ತಾರೆ. ಹಾಗಂತ ಕೊಲೆಯೇ ಆಗಿಲ್ಲ ಅಂದರೆ ಅದರಲ್ಲಿ ಅರ್ಥ ಇಲ್ಲ. ಕೊಲೆ ನಡೆದಿರುತ್ತದೆ. ಸಾಕ್ಷಿಗಳು ಸಾಕ್ಷ್ಯ ಹೇಳಿರುವುದಿಲ್ಲ ಅಷ್ಟೆ ಅಂದರು.

ಆಪರೇಷನ್ ಕಮಲಕ್ಕಾಗಿ ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ಆಫರ್ ನೀಡಲಾಗಿತ್ತು ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿಎಂ, ಬಿಜೆಪಿಯವರು ಆಪರೇಷನ್ ಕಮಲಕ್ಕೆ ಪ್ರಯತ್ನಿಸಿದರು, ವಿಫಲರಾದರು ಎಂದರು.

ರಾಜಕೀಯ

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಜೆಡಿಎಸ್ (JDS) ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹರೀಶ್ ಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಬಿ.ಮುನೇಗೌಡ ಅವರ ಸ್ವ ಗೃಹಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="121727"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]