ನವದೆಹಲಿ: 2024ರ ಮಿಸ್ ಯುನಿವರ್ಸ್ (miss universe) ಸ್ಪರ್ಧೆಯಲ್ಲಿ ಡೆನ್ಮಾರ್ಕ್ 21 ವರ್ಷದ ವಿಕ್ಟೋರಿಯಾ ಕ್ಜೇರ್ ವಿಜೇತರಾಗಿ ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಮೆಕ್ಸಿಕೋ ನಗರದಲ್ಲಿ ನಡೆದ 73ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ವಿವಿಧ ದೇಶಗಳಿಂದ 130 ಸುಂದರಿಯರು ಸ್ಪರ್ಧಿಸಿದ್ದರು. ಇದೀಗ 2024ರ ಮಿಸ್ ಯೂನಿವರ್ಸ್ (miss universe) ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದ ರಿಯಾ ಸಿಂಘಾಗೆ ನಿರಾಶೆಯಾಗಿದೆ.
ಇಂಟರ್‌ನ್ಯಾಷನಲ್ ಮಿಸ್ ಯುನಿವರ್ಸ್ ಸ್ಪರ್ಧೆಯಲ್ಲಿ ಡೆನ್ಮಾರ್ಕ್ ಮೊದಲ ಬಾರಿಗೆ ಕಿರೀಟವನ್ನು ಪಡೆದುಕೊಳ್ಳುವ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸಿದೆ.
ಮೆಕ್ಸಿಕೋದ ಮರಿಯಾ ಫೆರ್ನಾಂಡಾ ಬೆಲ್ಟ್ರಾನ್ ಮೊದಲ ರನ್ನರ್ ಅಪ್ ಆಗಿ, ನೈಜೀರಿಯಾದ ಸಿನಿದಿಮ್ಮಾ ಅಡೆಟ್ಶಿನಾ ಎರಡನೇ ರನ್ನರ್ ಅಪ್ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಭಾರತವನ್ನು ಪ್ರತಿನಿಧಿಸಿದ್ದ ರಿಯಾ ಸಿಂಘಾ ಅಂತಿಮ ಸುತ್ತಿನಲ್ಲಿ ಟಾಪ್ 12 ಸ್ಥಾನ ಪಡೆಯುವಲ್ಲಿ ವಿಫಲರಾಗಿದರು.