Modi ಸರ್ಕಾರದಿಂದ ರಾಜ್ಯದ ರೈತರಿಗೆ ಅನ್ಯಾಯ: ಕಾನೂನು ಸಮರದ ವಾರ್ನಿಂಗ್

ಬೆಂಗಳೂರು; ಕೃಷಿ ಸಾಲಗಳಿಗಾಗಿ ಕೇಂದ್ರ ಸರ್ಕಾರದಿಂದ (Modi) ರಾಜ್ಯ ಸರ್ಕಾರಕ್ಕೆ ನೀಡಲಾಗುವ ಆರ್ಥಿಕ ಸಾಲ ಸೌಲಭ್ಯದಲ್ಲಿ ಕಡಿತವಾಗಿರುವುದನ್ನು ವಿರೋಧಿಸಿ ಕಾನೂನು ಹೋರಾಟ ನಡೆಸುವ ಎಚ್ಚರಿಕೆ ನೀಡಿರುವ ಸಚಿವರು, ರಾಜ್ಯಪಾಲರನ್ನು ಭೇಟಿ ಮಾಡುವುದಾಗಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಮತ್ತು ಕೃಷಿ ಸಚಿವ ಚೆಲುವರಾಯಸ್ವಾಮಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೃಷಿ ಸಾಲದ ಬಾಬ್ತಿನಲ್ಲಿ ರಾಜ್ಯಕ್ಕಾಗಿರುವ ಅನ್ಯಾಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ರಾಜಣ್ಣ ಮಾತನಾಡಿ, ಕಳೆದ ಬಾರಿ 5,600 ಕೋಟಿ ರೂ. ಕೃಷಿ ಕ್ಷೇತ್ರಕ್ಕೆ ಸಾಲ ನೀಡಲಾಗಿತ್ತು, ಈ ಬಾರಿ 2,340 ಕೋಟಿ ರೂ.ಗಳನ್ನು ಮಾತ್ರ ಒದಗಿಸಲಾಗಿದೆ. ಶೇ.58 ರಷ್ಟು ಕೃಷಿ ಸಾಲದ ಪ್ರಮಾಣವನ್ನು ಕಡಿತ ಮಾಡಲಾಗಿದೆ ಎಂದು ಆರೋಪಿಸಿದರು.

ಗ್ರಾಮೀಣ ಭಾಗದಲ್ಲಿ ರೈತರು ಆರ್ಥಿಕವಾಗಿ ಮುಂದುವರಿಯಬೇಕು ಎಂಬ ಕಾರಣಕ್ಕಾಗಿ ಪ್ರತಿ ವರ್ಷ ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ವಿವಿಧ ಚಟುವಟಿಕೆಗಳಿಗೆ ರಿಯಾಯಿತಿ ಬಡ್ಡಿದರದ ಸಾಲಸೌಲಭ್ಯ ನೀಡಲಾಗುತ್ತಿದೆ. ಇದಕ್ಕಾಗಿ ನಬಾರ್ಡ್ ರಾಜ್ಯಸರ್ಕಾರಕ್ಕೆ ಶೇ.4.5ರ ಬಡ್ಡಿದರದಲ್ಲಿ ಸಾಲ ರೂಪದ ಆರ್ಥಿಕ ನೆರವು ನೀಡುತ್ತಿತ್ತು. ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಮತ್ತು ರಿಯಾಯಿತಿ ಬಡ್ಡಿದರದಲ್ಲಿ ಸಾಲ ನೀಡಿ ಕೃಷಿ ಚಟುವಟಿಕೆಗಳನ್ನು ಬಲವರ್ಧನೆಗೊಳಿಸಲಾಗುತ್ತಿತ್ತು ಎಂದು ವಿವರಿಸಿದರು.

ರಾಜ್ಯ ಸರ್ಕಾರ ಮನವಿ ಸಲ್ಲಿಸಿದ ಹೊರತಾಗಿಯೂ ಸಾಲದ ಪ್ರಮಾಣವನ್ನು ಕಡಿತ ಮಾಡಲಾಗಿದೆ. ನಬಾರ್ಡ್‌ ಈ ಕ್ರಮದಿಂದ ರೈತರಿಗೆ ಕೃಷಿ ಸಾಲ ನೀಡಲು ಕಷ್ಟವಾಗುತ್ತಿದೆ. ಸಹಕಾರ ವ್ಯವಸ್ಥೆಯಲ್ಲಿ ಸಾಲ ದೊರೆಯದೇ ಇದ್ದರೆ ರೈತರು ಖಾಸಗಿ ಹಣಕಾಸು ಸಂಸ್ಥೆಗಳ ಮೊರೆ ಹೋಗುತ್ತಾರೆ ಹಾಗೂ ರೈತರು ಮತ್ತೆ ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ ಎಂದು ಎಚ್ಚರಿಸಿದರು.

ನಿರ್ಮಲಾ ಸೀತಾರಾಮನ್‌ಗೆ ಪತ್ರ

ರೈತರ ನೆರವಿಗೆ ಧಾವಿಸುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದೇವೆ. ಅಲ್ಲಿಂದ ಉತ್ತರ ಬರೆದಿದ್ದು, ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಲಾಗಿದೆ. ರಾಜ್ಯದ ಸಂಸದರು ಈ ಬಗ್ಗೆ ದನಿ ಎತ್ತಬೇಕು ಎಂದು ನಾವು ಮನವಿ ಮಾಡಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಆದರೆ ಅಲ್ಲಿಂದ ಸಕಾರಾತ್ಮಕ ಸ್ಪಂದನೆಗಳಿಲ್ಲ ಎಂದರು.

ರಾಜ್ಯಸರ್ಕಾರ 25 ಸಾವಿರ ಕೋಟಿ ರೂ.ಗಳನ್ನು ರೈತರಿಗೆ ಸಾಲದ ರೂಪದಲ್ಲಿ ನೀಡಿದೆ. ನಬಾರ್ಡ್‌ ಬಡ್ಡಿದರ ಹೆಚ್ಚಿದ್ದಾಗಿಯೂ ನಾವು ಅದರ ಹೊರೆಯನ್ನು ಭರಿಸುತ್ತಿದ್ದೇವೆ. ಕೇಂದ್ರ ಸಹಕಾರ ಸಚಿವ ಅಮಿತ್ ಷಾ, ಕೇಂದ್ರ ಹಣಕಾಸು ಸಚಿವರು ರಾಜ್ಯದ ನೆರವಿಗೆ ಬರುತ್ತಿಲ್ಲ. ಕೇಂದ್ರದ ತೀರ್ಮಾನಗಳು ರಾಜ್ಯಕ್ಕೆ ಮಾರಕವಾಗುತ್ತಿವೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ರಾಷ್ಟ್ರೀಯ ಪ್ರಕೃತಿ ವಿಕೋಪ ನಿರ್ವಹಣೆ ನಿಧಿಯಡಿ ನೀಡುವ ನೆರವನ್ನೂ ಕಡಿತ ಮಾಡಲಾಗಿದೆ. ಬರ ಹಾಗೂ ನೆರೆ ಪರಿಸ್ಥಿತಿಯಿಂದ ಸಂಕಷ್ಟದಲ್ಲಿರುವ ರೈತರು ಸಾಲಮನ್ನಾ ಮಾಡಿ ಎಂದು ಒತ್ತಡ ಹೇರುತ್ತಿದ್ದಾರೆ. ಆದರೆ ಕೇಂದ್ರದ ಅಸಹಕಾರದಿಂದ ಸಾಲ ನೀಡುವುದೇ ಕಷ್ಟವಾಗುತ್ತಿದೆ ಎಂದು ವಿಷಾದಿಸಿದರು.

ಈ ಹಿಂದೆ ಜಗದೀಶ್ ಶೆಟ್ಟ‌ರ್ರವರು ಮುಖ್ಯಮಂತ್ರಿಯಾಗಿದ್ದಾಗ 25 ಸಾವಿರ ರೂ.ಗಳವರೆಗೂ ಸಾಲಮನ್ನಾ ಮಾಡಲಾಗಿತ್ತು. 2013 ರಿಂದ 2018 ರವರೆಗೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ 50 ಸಾವಿರ ರೂ.ಗಳವರೆಗೂ 2018 ರ ನಂತರ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ 1 ಲಕ್ಷ ರೂ.ವರೆಗೂ ಕೃಷಿ ಸಾಲ ಮನ್ನಾ ಮಾಡಿದ್ದರು.

ಕೇಂದ್ರ ಸರ್ಕಾರವೂ ರೈತರ ಸಾಲಮನ್ನಾ ಮಾಡಬೇಕು ಎಂದು ರಾಜ್ಯ ಸರ್ಕಾರ ಮನವಿ ಮಾಡಿದಾಗ ಆರ್ಥಿಕವಾಗಿ ದೇಶ ದಿವಾಳಿಯಾಗುತ್ತದೆ ಎಂದು ಹೇಳಿ ಕೇಂದ್ರದ

ಬಿಜೆಪಿ ಆಡಳಿತ ಸಾಲಮನ್ನಾವನ್ನು ತಿರಸ್ಕಾರ ಮಾಡಿತ್ತು. ಆದರೆ ಶ್ರೀಮಂತರ ಮತ್ತು ಕಾರ್ಪೊರೇಟ್ ಸಂಸ್ಥೆಗಳ 14 ಲಕ್ಷ ಕೋಟಿ ರೂ.ಗಳ ಬೃಹತ್ ಮಟ್ಟದ ಸಾಲವನ್ನು ಮನ್ನಾ ಮಾಡಲಾಗಿದೆ ಎಂದು ವಿವರಿಸಿದರು.

ರೈತರ ವಿಚಾರ ಬಂದಾಗ ಆರ್ಥಿಕ ದಿವಾಳಿಯಾಗುತ್ತದೆ ಎಂದು ಹೇಳುವ ಕೇಂದ್ರ ಸರ್ಕಾರ ಕಾರ್ಪರೇಟ್ ತೆರಿಗೆಯನ್ನು ಕಡಿತ ಮಾಡಿದೆ. ಸಹಕಾರ ಕ್ಷೇತ್ರದ ಸೆಸ್ ಕಡಿಮೆ ಮಾಡಲು ಹಿಂದೇಟು ಹಾಕಿದೆ. ಜಿಎಸ್ ಟಿಯಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಪ್ರಧಾನಮಂತ್ರಿ ಅವಾಜ್ ಯೋಜನೆಯಡಿ 3.70 ಲಕ್ಷ ರೂ. ನೆರವನ್ನು ನೀಡಿ, ಮತ್ತೊಂದು ಕಡೆ ಇದೇ ಯೋಜನೆಯಿಂದ ಶೇ.28 ರಷ್ಟು ಜಿಎಸ್‌ಟಿ ಕಡಿತ ಮಾಡುವ ಮೂಲಕ ಈ ಕೈಲಿ

ಕೊಟ್ಟು, ಆ ಕೈಲಿ ಕಿತ್ತುಕೊಳ್ಳುತ್ತಿದೆ ಎಂದರು. ಸಚಿವ ಚೆಲುವರಾಯಸ್ವಾಮಿ ಮಾತನಾಡಿ, 2020-21 ರಲ್ಲಿ 5,500 ಕೋಟಿ ರೂ ., 2021-22 ರಲ್ಲಿ 5,483 ಕೋಟಿ ರೂ., 2022-23ರಲ್ಲಿ 5,500 ಕೋಟಿ ರೂ.
2023-24ರಲ್ಲಿ 5,600 ಕೋಟಿ ರೂ ನಬಾರ್ಡ್‌ ನಿಂದ ಸಾಲಸೌಲಭ್ಯ ಸಿಕ್ಕಿದೆ. 2024-25 2,300 ರೂ. ಮಾತ್ರ ದೊರೆತಿದೆ.

ಬಾಯಿ ಬಿಡುತ್ತಿಲ್ಲ

ರಾಜ್ಯದಿಂದ ಹೆಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ ಮತ್ತು ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುತ್ತಿದ್ದಾರೆ. ಯಾರೂ ಇದರ ಬಗ್ಗೆ ಬಾಯಿ ಬಿಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ 2 ಲಕ್ಷ ರೂ.ಗಳವರೆಗೂ ಶೂನ್ಯ ಬಡ್ಡಿದರದಲ್ಲಿ ಅನಂತರ ರಿಯಾಯಿತಿ ಬಡ್ಡಿ ದರದಲ್ಲಿ ರೈತರಿಗೆ ಸಾಲ ನೀಡುತ್ತಿದೆ. ಹಲವು ಬಾರಿ ಕೇಂದ್ರಕ್ಕೆ ಮನವಿ ಮಾಡಿದ್ದರೂ ನಿರ್ಲಕ್ಷ್ಯ ಮಾಡಲಾಗುತ್ತಿದೆ. ರೈತರ ಆದಾಯ ನೋಡಿ ಸಾಲ ನೀಡಲು ಸಾಧ್ಯವೇ? ಎಂದು ಚೆಲುವರಾಯಸ್ವಾಮಿ ಪ್ರಶ್ನಿಸಿದರು.

ಈ ಹಿಂದೆ ಬರ ಪರಿಹಾರಕ್ಕಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಬೇಕಾಯಿತು. ಈಗ ಕೃಷಿ ಸಾಲದ ವಿಚಾರವಾಗಿಯೂ ನ್ಯಾಯಾಂಗ ಹೋರಾಟ ನಡೆಸಬೇಕಾಗುತ್ತದೆ. ಅದಕ್ಕೂ ಮುನ್ನ ರಾಜ್ಯಪಾಲರನ್ನು ಭೇಟಿ ಮಾಡಿ ಅನ್ಯಾಯದ ಬಗ್ಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಹೇಳಿದರು.

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!