ಅಮರಾವತಿ: tirumala ತಿರುಪತಿ ತಿಮ್ಮಪ್ಪನ ಭಕ್ತರು ಇನ್ನು ಮುಂದೆ ದೇವರ ದರ್ಶನ ಕ್ಕಾಗಿ ದೇವಸ್ಥಾನದಲ್ಲಿ ಗಂಟೆಗಟ್ಟಲೇ ಸಾಲಿನಲ್ಲಿ ನಿಲ್ಲಬೇಕಾಗಿಲ್ಲ.
ಹೌದು, ಕೃತಕ ಬುದ್ದಿ ಮತ್ತೆ ಸೇರಿದಂತೆ ಸುಧಾರಿತ ತಂತ್ರಜ್ಞಾನವನ್ನು ಬಳಸಿಕೊಂಡು ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದರ್ಶನದ ಸಮಯವನ್ನು 20-30 ಗಂಟೆಗಳಿಂದ ಕೇವಲ 2-3 ಗಂಟೆಗಳಿಗೆ ಇಳಿಸಲಾಗುವುದು ಎಂದು ತಿರುಮಲ ತಿರುಪತಿ ದೇವಸ್ಥಾನಂ ಆಡಳಿತ ಮಂಡಳಿ ತಿಳಿಸಿದೆ.
ಸೋಮವಾರ ಟಿಟಿಡಿ ಅಧ್ಯಕ್ಷ ಬಿ.ಆರ್.ನಾಯ್ಡು ಅವರ ನೇತೃತ್ವದಲ್ಲಿ ನಡೆದ ಮೊದಲ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ವ್ಯವಹಾರಗಳನ್ನು ದೇವಾಲಯದ ನಿರ್ವಹಿಸುವ ಟಿಟಿಡಿ ಮಂಡಳಿಯು ಸಭೆಯಲ್ಲಿ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ.
ಕಂಪಾರ್ಟ್‌ಮೆಂಟ್‌ಗಳಲ್ಲಿ ಭಕ್ತರಿಗೆ ತೊಂದರೆ, ಕಿರಿಕಿರಿ ಉಂಟಾಗದಂತೆ ದರ್ಶನ ಲಭ್ಯವಾಗಲು ಈ ಯೋಜನೆ ರೂಪಿಸಲು ನಿರ್ಧರಿಸಲಾಗಿದೆ. (ಸಂಗ್ರಹ ಚಿತ್ರ ಬಳಸಲಾಗಿದೆ)