
ಬೆಂಗಳೂರು ಗ್ರಾಮಾಂತರ ಜಿಲ್ಲೆ; ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಮೈಬಣ್ಣವನ್ನು ನಿಂದಿಸಿದ ಸಚಿವ ಜಮೀರ್ ಅಹಮದ್ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲಾ JDS ಅಧ್ಯಕ್ಷ ಬಿ.ಮುನೇಗೌಡ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇಂದು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಚಪ್ಪರದ ಕಲ್ಲು ಬಳಿ ಆಕ್ರೋಶಗೊಂಡ ಜೆಡಿಎಸ್ ಕಾರ್ಯಕರ್ತರು ಜಮೀರ್ ಭೂತ ದಹನ ಮಾಡಿದರಲ್ಲದೆ, ಕೂಡಲೇ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಒತ್ತಾಯ ಮಾಡಿದರು.
ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ ಅವರ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಮೀರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಕೀಳು ಮಟ್ಟದ ಭಾಷೆ ಬಳಿಸಿರುವುದು ಅಕ್ಷಮ್ಯ. ಅವರ ಮಾತುಗಳು ಅವರ ಕೊಳಕು ಮನಸ್ಥಿತಿಯನ್ನು ತೋರುತ್ತದೆ. ಕೂಡಲೇ ಜಮೀರ್ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿ.ಮುನೇಗೌಡ ಆಗ್ರಹಿಸಿದರು.
ಕುಮಾರಸ್ವಾಮಿ ಅವರ ಬಗ್ಗೆ ಅವಹೇಳನಕಾರಿ ಭಾಷೆ ಬಳಸಿರುವ ಜಮೀರ್ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳಿಗೆ ನೈತಿಕತೆ ಇದ್ದರೆ ಈ ಕ್ರಮ ಕೈಗೊಳ್ಳಬೇಕು ಎಂದರು.
ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಜೆಡಿಎಸ್ ಕಾರ್ಯದರ್ಶಿ ಡಾ.ವಿಜಯ್ ಕುಮಾರ್, ಮಾಜಿ ಶಾಸಕ ನಿಸರ್ಗ ನಾರಾಯಣ ಸ್ವಾಮಿ, ತಾಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ, ಮುನೇಗೌಡ, ಜಿಪಂ ಮಾಜಿ ಸದಸ್ಯರಾದ ಹೆಚ್.ಅಪ್ಪಯಣ್ಣ, ಎ.ನರಸಿಂಹಯ್ಯ, ಜಿಲ್ಲಾ ಯುವಘಟಕದ ಅಧ್ಯಕ್ಷ ಸುನಿಲ್ ಕುಮಾರ್, ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಮಲ್ಲೇಶ್, ಸದಸ್ಯರಾದ ವಡ್ಡರಹಳ್ಳಿ ರವಿಕುಮಾರ್, ವಕ್ತಾರ ಕುಂಟನಹಳ್ಳಿ ಮಂಜುನಾಥ್, ಹೋಬಳಿ ಅಧ್ಯಕ್ಷರಾದ ಸತೀಶ್, ಸಿದ್ದಪ್ಪ, ಜಗನಾಥಚಾರ್, ಮುಖಂಡರಾದ ಮರಿಯಣ್ಣ, ಚೇತನ್, ಎಸಿ ಹರೀಶ್, ದೊಡ್ಡತುಮಕೂರು ವಸಂತ್, ಕೆಂಪರಾಜು, ಆರೂಢಿ ನಟರಾಜು, ರಾಜಕುಮಾರ್, ಅರಳುಮಲ್ಲಿಗೆ ಶ್ರೀನಿವಾಸ್, ರಘು, ಧರ್ಮೇಂದ್ರ, ರಾಜಗೋಪಾಲ್, ಅಂಚರಹಳ್ಳಿ ಆನಂದ್, ದೇವರಾಜ್, ಗೌರೀಶ್, ಸುಣ್ಣಗಟ್ಟಹಳ್ಳಿ ಮಂಜುನಾಥ್, ಮೆಳೇಕೋಟೆ ನಾಗೇಶ್, ಗೌಡಹಳ್ಳಿ ಮನು, ತೂಬಗೆರೆ ಮುರುಳಿಧರ್ ಮತ್ತಿತರರಿದ್ದರು.
 
				 
															 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
						 
						 
						 
						