Dinesh gundurao: ಸರ್ಕಾರಿ ಆಸ್ಪತ್ರೆಗಳಿಗೆ ನೇರಪಾವತಿಯಡಿ ನೇಮಕ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ದಾವಣಗೆರೆ: ಸರ್ಕಾರಿ ಆಸ್ಪತ್ರೆಗಳಲ್ಲಿ ನಾನ್ ಕ್ಲಿನಿಕಲ್ ವಿಭಾಗದಲ್ಲಿ ಗ್ರೂಪ್ ಡಿ ಸೇವೆ ಮಾಡುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ನೇರ ಪಾವತಿಯಡಿ ನೇಮಕ ಮಾಡಿಕೊಳ್ಳಲು ಕಾನೂನು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು ಸಾಧಕ, ಬಾದಕಗಳ ಪರಿಶೀಲನೆ ನಂತರ ಹೊರಗುತ್ತಿಗೆಯ ಎಲ್ಲಾ ಗ್ರೂಪ್ ಡಿ ಸಿಬ್ಬಂದಿಗಳನ್ನು ನೇರಪಾವತಿಯಡಿ ಪಡೆದುಕೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ (Dinesh gundurao) ತಿಳಿಸಿದರು.

ಅವರು ಬುಧವಾರ ಚಿಗಟೇರಿ ಆಸ್ಪತ್ರೆ ಆವರಣದಲ್ಲಿ ನಿರ್ಮಾಣ ಮಾಡಿರುವ 200 ಹಾಸಿಗೆಯ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆ, ಟ್ರಾಮಾ ಕೇರ್ ಸೆಂಟರ್‍ನ್ನು ಲೋಕಾರ್ಪಣೆ ಮಾಡಿ ಸಮಾರಂಭದಲ್ಲಿ ಮಾತನಾಡಿದರು. ದಾವಣಗೆರೆಯಲ್ಲಿನ ಚಿಗಟೇರಿ ಆಸ್ಪತ್ರೆ ವಿಶಾಲವಾದ ಸ್ಥಳದಲ್ಲಿದ್ದು 70 ವರ್ಷದ ಹಳೆಯದಾಗಿದೆ. ಇಲ್ಲಿ ಹೊಸ ಕಟ್ಟಡ, ದುರಸ್ಥಿಯಾಗಬೇಕಾಗಿದ್ದು ಮಧ್ಯ ಕರ್ನಾಟಕದಲ್ಲಿನ ಈ ಆಸ್ಪತ್ರೆಯನ್ನು ಸುಸಜ್ಜಿತವಾಗಿ ನಿರ್ಮಾಣ ಮಾಡುವ ಮೂಲಕ ಈ ಭಾಗದಲ್ಲಿನ ಜನರಿಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿಯೇ ಇಲ್ಲಿನ ಮೂಲಭೂತ ಸೌಕರ್ಯಕ್ಕೆ ಮತ್ತು ಹೊಸ ಬ್ಲಾಕ್ ನಿರ್ಮಾಣಕ್ಕೆ ರೂ.17 ಕೋಟಿ ಬಿಡುಗಡೆ ಮಾಡಲಾಗಿದ್ದು ಭವಿಷ್ಯದ ದೃಷ್ಟಿಯಿಂದ ನೂತನ ಯೋಜನೆಯನ್ನು ಸಿದ್ದಪಡಿಸಿ ಅದರಂತೆ ಹೊಸ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತದೆ ಎಂದರು.

ರೂ. 30 ಕೋಟಿಯಲ್ಲಿ ನಿರ್ಮಿಸಲಾದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ 200 ಹಾಸಿಗೆ ಸಾಮಥ್ರ್ಯವಿದ್ದು ಇಲ್ಲಿಗೆ ಅಗತ್ಯವಿರುವ ಸಿಬ್ಬಂದಿಗಳನ್ನು ಮಂಜೂರು ಮಾಡಲು ಸರ್ಕಾರದ ಮುಂದೆ ಪ್ರಸ್ತಾವನೆ ಇದ್ದು ಇಲ್ಲಿಗೆ ಬೇಕಾಗಿರುವ ವೈದ್ಯರು ಹಾಗೂ ಸಿಬ್ಬಂದಿಗಳ ಹುದ್ದೆಗಳಿಗೆ ಮಂಜೂರಾತಿಯನ್ನು ನೀಡಲಾಗುತ್ತದೆ. ಟ್ರಾಮಾ ಕೇರ್ ಸೆಂಟರ್‍ಗೂ ಸಿಬ್ಬಂದಿಗಳ ಅಗತ್ಯವಿದ್ದು ಪರಿಶೀಲಿಸಿ ಮಂಜೂರಾತಿ ನೀಡಲಾಗುತ್ತದೆ. ಆಸ್ಪತ್ರೆ ಕಟ್ಟಿದರೆ ಸಾಲದು, ಇಲ್ಲಿ ಅಗತ್ಯವಿರುವ ಪರಿಕರ, ಸಿಬ್ಬಂದಿಗಳು ಇದ್ದಾಗ ಮಾತ್ರ ಜನರಿಗೆ ಆರೋಗ್ಯ ಸೇವೆ ಸಿಗಲು ಸಾಧ್ಯವಿದೆ ಎಂದರು.

ಆರೋಗ್ಯ ಮತ್ತು ಶಿಕ್ಷಣ ಇಲಾಖೆಗಳು ಮಾನವ ಸಂಪನ್ಮೂಲ ಅಭಿವೃದ್ದಿಯಲ್ಲಿ ಪ್ರಮುಖ ಪಾತ್ರವಹಿಸಲಿವೆ. ಆದರೆ ಇವುಗಳಿಗೆ ಸಿಗಬೇಕಾದ ಆದ್ಯತೆ ಸಾಕಾಗುತ್ತಿಲ್ಲ. ಜನರ ಆರೋಗ್ಯ ಸಂರಕ್ಷಣೆ ಮಾಡಿದಾಗ ಆರೋಗ್ಯವಂತ ನಾಗರಿಕನಾಗಲು ಸಾಧ್ಯ, ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆಗಾಗಿ ಆರ್ಥಿಕ ನಷ್ಟವನ್ನು ಅನುಭವಿಸಬೇಕಾಗುತ್ತದೆ. ಆರೋಗ್ಯವು ಗ್ಯಾರಂಟಿ ಯೋಜನೆಯಾಗಬೇಕು, ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ಸಿಗಬೇಕಾಗಿದೆ ಎಂದರು.

ಮಾಯಕೊಂಡ ಪ್ರತ್ಯೇಕ ವಿಧಾನಸಭಾ ಕ್ಷೇತ್ರವಾಗಿದ್ದರೂ ಸಮುದಾಯ ಆರೋಗ್ಯ ಕೇಂದ್ರವಿರುವುದಿಲ್ಲ. ಮುಂದಿನ ದಿನಗಳಲ್ಲಿ ಮಾಯಕೊಂಡಕ್ಕೆ ಸಮುದಾಯ ಆರೋಗ್ಯ ಕೇಂದ್ರವನ್ನು ಮಂಜೂರು ಮಾಡಲಾಗುತ್ತದೆ. ಮೂಲಭೂತ ಸೌಕರ್ಯ ಕೊಟ್ಟರೆ ಸಾಕಾಗುವುದಿಲ್ಲ, ವೈದ್ಯರು ಜನರ ಸೇವೆ ಮಾಡಬೇಕು. ವೈದ್ಯಕೀಯ ಸೇವಾ ಕ್ಷೇತ್ರವಾಗಿದ್ದು ಸಹಾನುಭೂತಿಯಿಂದ ಎಲ್ಲಾ ವೈದ್ಯರು ಕೆಲಸ ಮಾಡುವುದು ಬಹಳ ಮುಖ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಎಲ್ಲಾ ವೈದ್ಯರು, ಸಿಬ್ಬಂದಿಗಳ ಸೇವೆ ಜನರಿಗೆ ಸಿಗುವಂತಾಗಬೇಕೆಂದರು.

ಶಾಸಕರಾದ ಡಾ;ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಸ್ಪತ್ರೆ ಕಟ್ಟಡದ ಜೊತೆಗೆ ಸಲಕರಣೆಗಳು ಇರಬೇಕಾಗುತ್ತದೆ, ಜೊತೆಗೆ ಸಿಬ್ಬಂದಿಗಳು ಇರಬೇಕು, ಇಲ್ಲವಾದಲ್ಲಿ ವ್ಯರ್ಥವಾಗುತ್ತದೆ. ಚಿಗಟೇರಿ ಆಸ್ಪತ್ರೆಯಿಂದ ಸಾಕಷ್ಟು ಬಡ ಜನರಿಗೆ ಅನುಕೂಲವಾಗಿದೆ. ಇಲ್ಲಿ ಇನ್ನೂ ಹೆಚ್ಚಿನ ಸೌಲಭ್ಯಗಳು ಜನರಿಗೆ ಸಿಗುವಂತಾಗಬೇಕು. ಇಲ್ಲಿ ನರ್ಸ್, ಆಯಾಗಳ ಕೊರತೆ ಇದೆ ಎಂದು ತಿಳಿದುಬಂದಿದ್ದು ವ್ಯವಸ್ಥೆ ಸರಿಪಡಿಸಬೇಕು. ಹೊರಗುತ್ತಿಗೆಯಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ನೇರಪವಾತಿಯಡಿ ಆಸ್ಪತ್ರೆ ಹೊರಗುತ್ತಿಗೆ ಸಿಬ್ಬಂದಿಗಳನ್ನು ಪಡೆಯುವಂತಾಗಬೇಕು. ಸಾರ್ವಜನಿಕ ಸೇವೆ ಮಾಡುವಾಗ ಬಹಳ ಪಾರದರ್ಶಕವಾಗಿ ಕೆಲಸ ಮಾಡಬೇಕಾಗುತ್ತದೆ. ಕೋವಿಡ್ ಸಂದರ್ಭದಲ್ಲಿ ಜನರ ಆರೋಗ್ಯ ರಕ್ಷಣೆಗಾಗಿ ಖಾಸಗಿಯಾಗಿ 8 ಕೋಟಿವರೆಗೆ ವೆಚ್ಚ ಮಾಡಲಾಗಿದೆ ಎಂದರು.

ದಾವಣಗೆರೆ ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಯಾಗಿದ್ದ ಸಮಯದಿಂದಲೂ ಚಿಗಟೇರಿ ಆಸ್ಪತ್ರೆಯ ಸ್ಥಿತಿಗತಿ ಗೊತ್ತಿದೆ. ಇಲ್ಲಿ ಸಾಕಷ್ಟು ಮೂಲಭೂತ ಸೌಕರ್ಯಗಳ ಜೊತೆಗೆ ಸುಧಾರಣೆಯಾಗಬೇಕಿದೆ. ಮಾಸ್ಟರ್ ಪ್ಲಾನ್ ತಯಾರಿಸುವ ಮೂಲಕ ಹಂತ ಹಂತವಾಗಿ ಸುಧಾರಣಾ ಕ್ರಮ ಕೈಗೊಳ್ಳಲಾಗುತ್ತದೆ. ಮುಂದಿನ ದಿನಗಳಲ್ಲಿ ಮಾನವ ಹಾಲು ಬ್ಯಾಂಕ್ ಸ್ಥಾಪನೆ ಮಾಡುವ ಮೂಲಕ ಇನ್ನಷ್ಟು ಅನುಕೂಲ ಕಲ್ಪಿಸುವ ಉದ್ದೇಶ ಹೊಂದಲಾಗಿದೆ ಎಂದರು.

ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ ಮುಖ್ಯ ಅತಿಥಿಗಳಾಗಿ ಮಾತನಾಡಿ, ಮಹಿಳೆ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆಯಾಗಿದೆ, ಇದಕ್ಕೆ ಮಾನವ ಸಂಪನ್ಮೂಲ ಕಲ್ಪಿಸಬೇಕು. ಸಿಬ್ಬಂದಿಗಳು ಸಹ ಉಪಕರಣಗಳನ್ನು ನಿಷ್ಕ್ರಿಯೆಗೊಳಿಸದೇ ಉಪಯುಕ್ತ ಮಾಡಿಕೊಳ್ಳಬೇಕು. ಐಸಿಯು ಬೆಡ್ ಸಂಖ್ಯೆಯನ್ನು ಇನ್ನಷ್ಟು ಹೆಚ್ಚಿಸಬೇಕು. ಶವಗಾರಕ್ಕೆ ಕಾಯಕಲ್ಪ ಮಾಡಬೇಕಾಗಿದ್ದು ಅತ್ಯುತ್ತಮವಾಗಿ ಕೆಲಸ ಮಾಡುವ ಡಾ;ಮೋಹನ್ ರವರನ್ನು ಸನ್ಮಾನಿಸಿ ಗೌರವಿಸಬೇಕೆಂದರು.

ಕಾರ್ಯಕ್ರಮದಲ್ಲಿ ಮೇಯರ್ ಕೆ.ಚಮನ್‍ಸಾಬ್, ದೂಡಾ ಆಧ್ಯಕ್ಷ ಕೆ.ದಿನೇಶ್ ಶೆಟ್ಟಿ, ಉಪ ಮೇಯರ್ ಸೋಗಿ ಶಾಂತಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರಾದ ಶಿವಕುಮಾರ್ ಕೆ.ಬಿ, ಅಭಿಯಾನ ನಿರ್ದೇಶಕರಾದ ಡಾ; ನವೀನ್ ಭಟ್ ರೈ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ; ಷಣ್ಮುಖಪ್ಪ ಹಾಗೂ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.
ಜಿಲ್ಲಾ ಸರ್ಜನ್ ಡಾ; ನಾಗೇಂದ್ರಪ್ಪ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!