KMF: ನವದೆಹಲಿಯಲ್ಲಿ ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ..!

ನವದೆಹಲಿ; ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ (KMF) ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದ ವತಿಯಿಂದ ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ ಮಾಡಿ ಮಾತನಾಡಿದರು.

ದೆಹಲಿ ನಗರದಲ್ಲಿ ಕೆ.ಎಂ.ಎಫ್ ಮತ್ತು ಮಂಡ್ಯ ಹಾಲು ಒಕ್ಕೂಟ ಸೇರಿ ವಿವಿಧ ಶ್ರೇಣಿಯ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ಇಡೀ ದೇಶದಲ್ಲಿ ರೈತರ ಉಪಕಸುಬು ಪಶುಸಂಗೋಪನೆ. ಗುಜರಾತ್ ನಲ್ಲಿ ಕುರಿಯನ್ ಅವರು ಹಾಲು ಉತ್ಪಾದಕರ ಸಂಘವನ್ನು ಪ್ರಾರಂಭ ಮಾಡಿದರು.

ಹಿಂದೆ ಪಶುಸಂಗೋಪನಾ ಸಚಿವನಾಗಿದ್ದು, ಒಂದು ವರ್ಷ ಕಾಲ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷನೂ ಆಗಿದ್ದೆ ಎಂದು ಸ್ಮರಿಸಿದ ಮುಖ್ಯಮಂತ್ರಿಗಳು ಪಶುಸಂಗೋಪನಾ ಸಚಿವನಾಗಿದ್ದಾಗಲೇ ಹಾಲು ಉತ್ಪಾದಕರಿಗೆ ಶೋಷಣೆಯಾಗುತ್ತಿದ್ದುದ್ದನ್ನು ಮನಗಂಡು ಶಾಶ್ವತ ಮಾರುಕಟ್ಟೆ ಕಲ್ಪಿಸಲು ಹಾಲು ಉತ್ಪಾದಕರ ಸಂಘಗಳನ್ನು ರಚಿಸಲಾಯಿತು ಎಂದರು.

ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ

ರಾಜ್ಯದಲ್ಲಿ ಪ್ರತಿದಿನ 92 ರಿಂದ 93 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದೆ. ರೈತರಿಂದ ಲೀ. ಗೆ 32 ರೂ.ಗಳಿಗೆ ಹಾಲು ಖರೀದಿಸಲಾಗುತ್ತಿದ್ದು, ರಾಜ್ಯ ಸರ್ಕಾರ ಕ್ಷೀರಧಾರೆ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 5 ರೂ.ಗಳ ಪ್ರೋತ್ಸಾಹಧನವನ್ನು ನೀಡುತ್ತಿದೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲದಲ್ಲಿ 2 ರೂ. ಇದ್ದ ಪ್ರೋತ್ಸಾಹಧನ, ನಂತರ 3 ರೂ. ಆಯಿತು. ನಾನು ಮುಖ್ಯಮಂತ್ರಿಯಾದ ನಂತರ ಇದನ್ನು 5 ರೂ.ಗಳಿಗೆ ಹೆಚ್ಚಿಸಲು ಘೋಷಣೆ ಮಾಡಲಾಯಿತು. ಪ್ರೋತ್ಸಾಹಧನಕ್ಕಾಗಿ ಪ್ರತಿ ದಿನ 5 ಕೋಟಿ ರೂ.ಗಳನ್ನು ಸರ್ಕಾರ ವೆಚ್ಚ ಮಾಡುತ್ತಿದೆ ಎಂದರು.

ರಾಜ್ಯದಲ್ಲಿ ಒಟ್ಟು 16 ಮಿಲ್ಕ್ ಯೂನಿಯನ್ಗಳಿವೆ. ರಾಜ್ಯದಲ್ಲಿ ಅಂದಾಜು 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಆಂಧ್ರಪ್ರದೇಶ, ಮಹಾರಾಷ್ಟ್ರಕ್ಕೆ ನಿತ್ಯ ತಲಾ 2.5 ಲಕ್ಷ ಲೀ.ಟರ್ ಹಾಲು ಪೂರೈಕೆಯಾಗುತ್ತಿದೆ. ಇದೀಗ ಆರಂಭಿಕ ಹಂತದಲ್ಲಿ 2.5 ಲಕ್ಷ ಲೀಟರ್ ಹಾಲು ನವದೆಹಲಿಗೆ ಪೂರೈಸುವ ಯೋಜನೆ ರೂಪಿಸಲಾಗಿದೆ. ಇನ್ನು ಆರು ತಿಂಗಳೊಳಗೆ 5 ಲಕ್ಷ ಲೀಟರ್ ಗೆ ಏರಿಸುವ ಗುರಿ ನಮ್ಮದಾಗಿದೆ. ಹಾಲಿನ ಉತ್ಪಾದನೆಗಳಿಗೆ ಮಾರುಕಟ್ಟೆ ಬಹಳ ಮುಖ್ಯ ಎಂದರು.

ಪಶುಸಂಗೋಪನೆ ಮತ್ತು ರೆಷ್ಮೆ ಸಚಿವ ವೆಂಕಟೇಶ್, ಕೃಷಿ ಸಚಿವ ಚೆಲುವರಾಯಸ್ವಾಮಿ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷ ಭೀಮಣ್ಣ ನಾಯಕ್, ರಾಜ್ಯ ಸಭಾ ಸದಸ್ಯ ಈರಣ್ಣ ಕರಾಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಮಂಡ್ಯ ಹಾಲು ಒಕ್ಕೂಟದ ಅಧ್ಯಕ್ಷ ತಿಮ್ಮೇಗೌಡ, ಮೊದಲಾದವರು ಉಪಸ್ಥಿತರಿದ್ದರು.

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!