ಬೆಂ.ಗ್ರಾ; ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2024-25ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯನ್ನು (Nekar samman) ರಾಜ್ಯದಲ್ಲಿರುವ ಪ್ರತಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ ರೂ.5000/- ಗಳ ಆರ್ಥಿಕ ನೆರವನ್ನು ನೀಡುವ ಸಲುವಾಗಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರ ಮಾಹಿತಿಯನ್ನು ಆಪ್ ಲೋಡ್ ಮಾಡಲು ಅನುಕೂಲವಾಗುವಂತೆ ಅವಧಿಯನ್ನು ವಿಸ್ತರಣೆ ಮಾಡಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವಘಟಕಗಳ ಮಾಲಿಕರು/ ನೇಕಾರರು/ಕಾರ್ಮಿಕರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕರ ಕಛೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ, ಈ ಕಛೇರಿಯಿಂದ ಅರ್ಜಿಯನ್ನು ಪಡೆದು ದಾಖಲಾತಿಗಳೊಂದಿಗೆ ನವ್ಹೆಂಬರ್ 30 ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.