By election| ಚುನಾವಣೆಯಲ್ಲಿ ಮತ್ತೆ ಸೋಲು..!: ನಿಖಿಲ್ ಕುಮಾರಸ್ವಾಮಿ ಹೇಳಿದ್ ಇಷ್ಟು

ರಾಮನಗರ: ಚನ್ನಪಟ್ಟಣದ (By election) ಜನತೆ ನೀಡಿದ ತೀರ್ಪಿಗೆ ನಾನು ತಲೆಬಾಗಿದ್ದೇನೆ. ಅವರ ಅದೇಶವನ್ನು ಒಪ್ಪಿಕೊಳ್ಳುತ್ತಿದ್ದೇನೆ. ಯಾವುದೇ ಕಾರಣಕ್ಕೂ ಕಾರ್ಯಕರ್ತರನ್ನು ಬಿಟ್ಟು ಪಲಾಯನ ಮಾಡುವ ವ್ಯಕ್ತಿ ನಾನಲ್ಲ, ಎದೆಗುಂದುವ ಪ್ರಶೆಯೂ ಇಲ್ಲ. ಸೋತಿದ್ದೇನೆ ಅಂತ ಸುಮ್ಮನೇ ಕೂರಲ್ಲ, ಹೋರಾಟ ಮಾಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

Guarantee scheme
ಎನ್ ವಿಶ್ವನಾಥ್

ಚನ್ನಪಟ್ಟಣ ಚುನಾವಣೆ ಫಲಿತಾಂಶದ ಬಳಿಕ ಬಿಡದಿ ತೋಟದ ಮನೆಯಲ್ಲಿ ಮಾಧ್ಯಮಗಳ ಜತೆ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದಲ್ಲಿ ಜನರ ಆದೇಶವೇ ಅಂತಿಮ. ಅವರ ತೀರ್ಪಿಗೆ ತಲೆಬಾಗುತ್ತೇನೆ. ಇದು ನನಗೆ ಮೂರನೇ ಸೋಲು. ಈ ಸೋಲನ್ನು ವಿನಮ್ರವಾಗಿ ಸ್ವೀಕಾರ ಮಾಡುತ್ತೇನೆ. ಕ್ಷೇತ್ರದ ಜನತೆಯ ನಿರಂತರವಾಗಿ ಇರುತ್ತೇನೆ, ಅವರ ಸೇವೆ ಮಾಡುತ್ತೇನೆ. ನನ್ನ ಪರವಾಗಿ ಚುನಾವಣೆಯಲ್ಲಿ ಹಗಲು ರಾತ್ರಿ ಅವಿರತವಾಗಿ ಕೆಲಸ ಮಾಡಿದ ಜೆಡಿಎಸ್ ಬಿಜೆಪಿ ಪಕ್ಷಗಳ ಎಲ್ಲಾ ಕಾರ್ಯಕರ್ತರು, ಮುಖಂಡರು ಸೇರಿ ಎಲ್ಲರಿಗೂ ಶಿರಬಾಗಿ ನಮಿಸುತ್ತೇನೆ ಎಂದು ಅವರು ಹೇಳಿದರು.

ಇದು ನಾನು ಬಯಸದೇ ಬಂದ ಉಪ ಚುನಾವಣೆ. ಕಡೆ ಗಳಿಗೆಯಲ್ಲಿ ತೆಗೆದುಕೊಂಡ ನಿರ್ಧಾರ. ಪಕ್ಷ ಕಷ್ಟಕಾಲದಲ್ಲಿ ಇದ್ದಾಗ ತಲೆಬಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದೇನೆ. 87,031 ಜನರು ನನ್ನ ಪರವಾಗಿ ಮತ ಹಾಕಿದ್ದಾರೆ. ಅವರ ನಿರೀಕ್ಷೆಯನ್ನು ಹುಸಿ ಮಾಡಲಾರೆ. ಚುನಾವಣೆ ಸಂದರ್ಭದಲ್ಲಿ ಜನತೆಗೆ ನಾನು ಕೆಲ ಮಾತು ಕೊಟ್ಟಿದ್ದೇನೆ. ಅವುಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು.

ಚನ್ನಪಟ್ಟಣ ಫಲಿತಾಂಶ ಅಘಾತ ತಂದಿದೆ ನಿಜ. ಆದರೆ, ಕೇವಲ ಅತ್ಯಂತ ಕಡಿಮೆ ಅವಧಿಯಲ್ಲಿ ಒಬ್ಬ ಯುವಕನಿಗೆ 87,031 ಮತಗಳು ಬಂದಿವೆ. ಇದು ಸಣ್ಣ ಪ್ರಮಾಣದ ಮತವಲ್ಲ, ಜನರ ಋಣ ತೀರಿಸುವ ಪ್ರಾಮಾಣಿಕ ಕೆಲಸ ಮಾಡುತ್ತೇನೆ. ಎಲ್ಲರಿಗೂ ದನಿಯಾಗಿ ಇರುತ್ತೇನೆ. ಇಲ್ಲಿ ನಾವು ಎಡವಿದ್ದೇವೆ. ಎಲ್ಲಿ ಸರಿಪಡಿಸಿಕೊಳ್ಳ ಬೇಕೆಂದು ಕೂತು ಚರ್ಚೆ ಮಾಡಿ ಮುಂದಿನ ನಿರ್ಧಾರ ತೆಗೆದುಕೊಳ್ಳುತೇವೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.

ಈ ಸೋಲಿನಿಂದ ನಾನು ಎದೆಗುಂದಲ್ಲ

ನಿಖಿಲ್ ಕುಮಾರಸ್ವಾಮಿಯಿಂದ ಪಕ್ಷ ಅಲ್ಲ, ಪಕ್ಷದಿಂದ ನಿಖಿಲ್ ಕುಮಾರಸ್ವಾಮಿ ಎಂದು ನಂಬಿರುವವನು ನಾನು. ಒಬ್ಬ ಸಾಮಾನ್ಯ ಕಾರ್ಯಕರ್ತನ ಹಾಗೆ ಕೆಲಸ ಮಾಡುತ್ತೇನೆ. ಈ ಸೋಲಿನಿಂದ ನಾನು ಎದೆಗುಂದಲ್ಲ, ಯುವ ಸಮುದಾಯದ ದನಿಯಾಗಿ ಕೆಲಸ ಮಾಡುತ್ತೇನೆ ಎಂದರು.

ದೇವೆಗೌಡರು ಮತ್ತು ಕುಮಾರಸ್ವಾಮಿ ಅವರನ್ನು ರಾಜಕೀಯದಲ್ಲಿ ಎತ್ತರಕ್ಕೆ ಬೆಳೆಸಿದವರು ರಾಮನಗರ ಜಿಲ್ಲೆಯ ಜನತೆ. ನಾನು ಚುನಾವಣೆ ವೇಳೆ ಮಾತಾಡಿದ ಮಾತು ಕೇವಲ ಚುನಾವಣೆಗೆ ಮಾತ್ರ ಸೀಮಿತವಾಗಿಲ್ಲ. ನಾನು ಕೊಟ್ಟಿರುವ ಯಾವುದೇ ಮಾತು ಹಿಂಪಡೆಯೋದಿಲ್ಲ. ಅದನ್ನು ಗಂಭೀರವಾಗಿ ಪರಿಗಣಿಸುತ್ತೇನೆ ಎಂದು ತಿಳಿಸಿದರು.

ನಾನು ಈ ಜಿಲ್ಲೆಯ ಮಗ ಅಂತ ಭಾವಿಸುತ್ತೇನೆ. ನನಗೆ ಕ್ಷೇತ್ರದ ಜನರ ಪ್ರೀತಿ ವಾತ್ಸಲ್ಯ ದಕ್ಕಿದೆ. ನಾವೇನು ಇಲ್ಲಿ ಜನಿಸಿಲ್ಲದಿರಬಹುದು, ನಮ್ಮದು ಅತ್ಯಂತ ಭಾವನಾತ್ಮಕ ಸಂಬಂಧ. ರಾಮನಗರದ ಜಿಲ್ಲೆ ಜನರ ಜತೆ ಪ್ರಾಮಾಣಿಕವಾಗಿ ಹೆಜ್ಜೆ ಹಾಕುತ್ತೇನೆ. ಕುಮಾರಣ್ಣನ ಜತೆಗೂಡಿ ಪ್ರಾಮಾಣಿಕವಾಗಿ ಕೆಲಸ ಮಾಡ್ತೇನೆ. ಮಂಡ್ಯ ಮತ್ತು ರಾಮನಗರ ಜನತೆ ಶಕ್ತಿ ತುಂಬಿಸಿ ಕುಮಾರಣ್ಣ ಅವರನ್ನು ಕೇಂದ್ರದ ಮಂತ್ರಿ ಮಾಡಿದ್ದಾರೆ ಜನರು. ಅವರ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದು ನಿಖಿಲ್ ಅವರು ತಿಳಿಸಿದರು.

ಒಂದು ಸಮುದಾಯದ ಮತ ಕಾಂಗ್ರೆಸ್ ಗೆ ಮಾತ್ರ ಹೋಗಿವೆ

ಒಂದು ನಿರ್ದಿಷ್ಟ ಸಮುದಾಯದ ಮತಗಳು ಕಾಂಗ್ರೆಸ್ ಪರವಾಗಿ ಕ್ರೋಢೀಕರಣ ಆಗಿವೆ. ಈ ಪಕ್ಷ ಸ್ಥಾಪನೆಯಾದಾಗಿಂದ ಆ ಸಮುದಾಯದ ಪರವಾಗಿಯೂ ನಮ್ಮ ಪಕ್ಷ ಹೋರಾಟ ನಡೆಸಿತ್ತು. ದೇವೇಗೌಡರು ಮೀಸಲಾತಿ ನೀಡಿದ್ದರು. ಅವರಿಗೆ ದೇವೇಗೌಡರು, ಕುಮಾರಸ್ವಾಮಿ ಅವರು ಸಾಕಷ್ಟು ಒಳ್ಳೆಯದು ಮಾಡಿದ್ದಾರೆ. ಆದರೂ ಆ ಸಮುದಾಯ ನಮ್ಮ ಪರ ಮತ ಹಾಕಿಲ್ಲ, ಈ ಬಗ್ಗೆ ಹೆಚ್ಚು ಚರ್ಚೆ ಮಾಡಲು ನಾನು ಬಯಸುವುದಿಲ್ಲ ಎಂದು ನಿಖಿಲ್ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಕಾರ್ಯಕರ್ತರೇ ಜೆಡಿಎಸ್ ಪಕ್ಷದ ಬೆನ್ನೆಲುಬು, ಶಕ್ತಿ. ದೇವೆಗೌಡರು ಫೀನಿಕ್ಸ್ ನಂತೆ ಜೆಡಿಸ್ ಪಕ್ಷವನ್ನ ಕಟ್ಟಿದ್ದಾರೆ.ಎಲ್ಲ ಏಳು ಬೀಳುಗಳನ್ನು ನೋಡಿದ್ದೇವೆ. ಎಲ್ಲವನ್ನು ಸಮಚಿತ್ತವಾಗಿ ಕೊಂಡೋಯ್ಯುತ್ತೀವಿ.ಎಲ್ಲ ಸಮುದಾಯಗಳಿಗೆ ಧ್ವನಿಯಾಗುವ ಕೆಲಸ ಮಾಡ್ತೀವಿ ಎಂದು ತಿಳಿಸಿದರು.

ಮಾಧ್ಯಮಗೋಷ್ಟಿಯಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಎಲ್ಲಾ ನಾಯಕರು, ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!