Vidya siri| ವಿದ್ಯಾಸಿರಿ ಯೋಜನೆಯಡಿ ನೀಡುವ ಮೊತ್ತ ಮುಂದಿನ ವರ್ಷದಿಂದ ಎರಡು ಸಾವಿರಕ್ಕೆ ಏರಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ವಿದ್ಯಾಸಿರಿ (Vidya siri) ಯೋಜನೆಯಡಿ ಒದಗಿಸುವ ವಿದ್ಯಾರ್ಥಿವೇತನವನ್ನು 1500 ರೂ.ಗಳನ್ನು ಮುಂದಿನ ವರ್ಷದಿಂದ ಎರಡು ಸಾವಿರಕ್ಕೆ ಏರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಅವರು ಸಂತ ಶ್ರೀ ಕನಕದಾಸರ ಜಯಂತ್ಯುತ್ಸವ ಸಮಿತಿ, ಸಿದ್ದಾರ್ಥನಗರ, ಮೈಸೂರು ಇವರ ವತಿಯಿಂದ ಸಿದ್ದಾರ್ಥನಗರದ ಕನಕಭವನದಲ್ಲಿ ಆಯೋಜಿಸಿದ್ದ ‘ಶ್ರೀ ಭಕ್ತ ಕನಕದಾಸರ 537ನೇ ಜಯಂತ್ಯುತ್ಸವ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಜೀವನದ ಅನುಭವದಿಂದ ಮೂಡಿಬಂದ ಯೋಜನೆಗಳು. ಈ ಕಾರ್ಯಕ್ರಮಗಳು ಜೀವನದ ಅನುಭವದಿಂದ ಮೂಡಿಬಂದಿದ್ದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಪ್ರೌಢಶಾಲೆಗೆ ಬರುವವರೆಗೂ ತಾವು ಚಪ್ಪಲಿಯನ್ನು ಹಾಕಿಕೊಳ್ಳುತ್ತಿರಲಿಲ್ಲ ಎಂದು ತಿಳಿಸಿದ ಮುಖ್ಯಮಂತ್ರಿಗಳು ಎಲ್ಲಾ ಶಾಲಾ ಮಕ್ಕಳು ಶೂ ಹಾಕಬೇಕೆಂದು ಶೂಭಾಗ್ಯ ಯೋಜನೆಯನ್ನು ಜಾರಿಗೆ ತರಲಾಯಿತು.

ರಾಜ್ಯದಲ್ಲಿ ಹೆಚ್ಚುವರಿ ಹಾಲು ಉತ್ಪಾದನೆಯಾದ ಸಂದರ್ಭದಲ್ಲಿ ಶಾಲೆ ಮಕ್ಕಳಿಗೆ ಹಾಲು ಕೊಡಲಾಯಿತು. ಪ್ರಸ್ತುತ ವಾರದಲ್ಲಿ ಆರು ದಿನಗಳು ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಲಾಗುತ್ತಿದೆ ಎಂದರು.

ಬಡವರಿಗೆ ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿ ತುಂಬಲು ಗ್ಯಾರಂಟಿ ಯೋಜನೆಗಳು ಜಾರಿ
ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರೂ ಉಚಿತವಾಗಿ ಬಸ್ಸುಗಳಲ್ಲಿ ಓಡಾಡುತ್ತಾರೆ. ಗೃಹ ಲಕ್ಷ್ಮೀ ಯೋಜನೆಯಡಿ 1.ಕೋಟಿ 22 ಲಕ್ಷ ಕುಟುಂಬಗಳ ಮನೆ ಯಜಮಾನಿಗೆ ತಿಂಗಳಿಗೆ ಎರಡು ಸಾವಿರ ರೂಪಾಯಿಗಳನ್ನು ನೀಡಲಾಗುತ್ತಿದೆ. ವರ್ಷಕ್ಕೆ 32 ಸಾವಿರ ಕೋಟಿ ಒದಗಿಸಲಾಗುತ್ತಿದೆ ಎಂದರು.

ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಬಡವರಿಗೆ ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿ ತುಂಬಲು ಈ ಯೋಜನೆಗಳು ಜಾರಿಯಾಗಿವೆ. ವರ್ಷಕ್ಕೆ 50-60 ಸಾವಿರ, ತಿಂಗಳಿಗೆ 4-5 ಸಾವಿರ ರೂಪಾಯಿಗಳನ್ನು ನೀಡಲಾಗುತ್ತಿದೆ. ನಾನು ಹಳ್ಳಿಯಿಂದ ಬಂದು ನನ್ನ ಹಾಗೆ ಕಷ್ಟ ಪಡಬಾರದೆಂದು ಈ ಎಲ್ಲಾ ಯೋಜನೆಗಳನ್ನು ಜಾರಿಗೆ ತರಲಾಗಿದೆ.

ಕನಕದಾಸರ ಪ್ರತಿಮೆ ಸ್ಥಾಪಿಸುವುದಾಗಿ ಭರವಸೆ
ಕನಕದಾಸರ ಪ್ರತಿಮೆಯನ್ನು ಮೈಸೂರು ನಗರದಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಶಿಕ್ಷಣ ಹಾಗೂ ಪ್ರತಿಭೆ ಯಾರ ಅಥವಾ ಯಾವ ಜಾತಿ ಸ್ವತ್ತು ಅಲ್ಲ

ಶೇಕಡ 90 ಅಂಕಗಳನ್ನು ಪಡೆಯುವುದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾತ್ರ ಸಾಧ್ಯ. ಅದಕ್ಕಾಗಿ ಅವರು ಸಾಕಷ್ಟು ಶ್ರಮವಹಿಸಿರುತ್ತಾರೆ. ನಾನು ಕೂಡಾ ಹತ್ತನೇ ತರಗತಿವರೆಗೆ ವಿದ್ಯಾವರ್ಧಕ ಶಾಲೆಯಲ್ಲಿ ಮೊದಲಿಗನಾಗಿದ್ದೆ. ನಂತರ ಪಿಯುಸಿ ತರಗತಿಗಳಲ್ಲಿ ಇಂಗ್ಲಿಷ್ ಮಾಧ್ಯಮವನ್ನು ಆಯ್ದುಕೊಂಡಿದ್ದರಿಂದ ಸ್ವಲ್ಪ ಶ್ರಮ ವಹಿಸಬೇಕಾಯಿತು. ಪಿಯುಸಿ ಹಾಗೂ ಬಿ ಎಸ್ ಸಿ ಮತ್ತು ಲಾ ವ್ಯಾಸಂಗವನ್ನು ಸೆಕೆಂಡ್ ಕ್ಲಾಸಿನಲ್ಲಿ ಪಾಸ್ ಮಾಡಿದೆ.ಆದರೆ ವಿದ್ಯಾರ್ಥಿ ಜೀವನದಲ್ಲಿ ಒಮ್ಮೆಯೂ ಫೇಲ್ ಆಗಲಿಲ್ಲ ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು

ಪ್ರತಿದಿನ ಅಭ್ಯಾಸ ಮಾಡಲು ಸಲಹೆ
ಆದ್ದರಿಂದ ಶಿಕ್ಷಕರು ಮಾಡುವ ಪಾಠವನ್ನು ಆಯಾಯ ದಿನದಂದೇ ಅಭ್ಯಾಸ ಮಾಡಲು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಪ್ರತಿದಿನ ಐದಾರು ಗಂಟೆಗಳ ಕಾಲ ಅಭ್ಯಾಸ ಮಾಡಲು ಹೇಳಿದರು. ಶಿಕ್ಷಣ ಹಾಗೂ ಪ್ರತಿಭೆ ಯಾರ ಅಥವಾ ಯಾವ ಜಾತಿ ಸ್ವತ್ತು ಅಲ್ಲ . ವಿವೇಕಾನಂದರು ಹೇಳಿದಂತೆ ಸುಪ್ತವಾದ ಪ್ರತಿಭೆಯನ್ನು ವಿಕಸನಗೊಳಿಸುವುದೇ ಶಿಕ್ಷಣ ಎಂದರು.

ನೀತಿ ಮತ್ತು ಶಿಸ್ತು ರೂಢಿಸಿಕೊಳ್ಳುವುದೇ ನಿಜವಾದ ಶಿಕ್ಷಣ

ಹಿಂದುಳಿದ ವರ್ಗಗಳು 2ಎ ಕೆಟಗರಿಗೆ ಸೇರುತ್ತವೆ ಆದರೆ ಇದನ್ನು ಮೀರಿ ಮೆರಿಟ್ ನಲ್ಲಿ ಅಂಕ ಗಳಿಸಿ ಸೀಟ್ ಪಡೆಯಲು ಪ್ರಯತ್ನಿಸಬೇಕು ಅದಕ್ಕಾಗಿ ಶ್ರಮವಹಿಸಬೇಕು. ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದಲ್ಲಿ ಅವರು ಹೆಚ್ಚು ಅಂಕಗಳನ್ನು ತೆಗೆಯಲು ಸಹಕಾರಿಯಾಗುತ್ತದೆ.

ಜೀವನದಲ್ಲಿ ಮೇಲೆ ಬಂದ ಮೇಲೆ ನಡೆದು ಬಂದ ಹಾದಿಯನ್ನು ಮರೆಯಬಾರದು ಸಮಾಜದಲ್ಲಿ ತುಳಿತಕ್ಕೊಳಗಾದವರ ಅವಕಾಶ ವಂಚಿತರ ಸೇವೆ ಮಾಡಬೇಕು. ಹುಟ್ಟು ಆಕಸ್ಮಿಕ ಸಾವು ನಿಶ್ಚಿತ ಇವೆರಡರ ನಡುವಿನ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬೇಕು ಎಂದರು.

ವಿಶ್ವಮಾನವರಾಗಲು ಪ್ರಯತ್ನಿಸೋಣ
ಕುವೆಂಪು ಹೇಳುತ್ತಾರೆ ‘ಹುಟ್ಟುವಾಗ ಎಲ್ಲರೂ ವಿಶ್ವಮಾನವರು ಬೆಳೆಯುತ್ತಾ ಬೆಳೆಯುತ್ತಾ ಜಾತಿ ಇತ್ಯಾದಿಗಳನ್ನು ರೂಢಿಸಿ ಕೊಂಡು ಅಲ್ಪಮಾನವರಾಗಿ ಬಿಡುತ್ತಾರೆ ನಾವು ವಿಶ್ವಮಾನವರಾಗಲು ಪ್ರಯತ್ನಿಸೋಣ. ಅಲ್ಪ ಮಾನವರಾಗುವುದು ಬೇಡ. ಸಮಾಜವನ್ನು ಸರ್ವಜನಾಂಗದ ಶಾಂತಿಯ ತೋಟ ಮಾಡೋಣ ಶಿಕ್ಷಣದ ಮೂಲ ಧ್ಯೇಯವು ಅದೇ ಎಂದರು.

1988ರಲ್ಲಿ 37 ವರ್ಷಗಳ ಹಿಂದೆ ನಾನು ಸಾರಿಗೆ ಮಂತ್ರಿಯಾಗಿದ್ದಾಗ ಕನಕದಾಸ ಜಯಂತಿಯ 500ನೇ ವರ್ಷಾಚರಣೆಯನ್ನು ಆಚರಿಸಲಾಯಿತು ಎಂದು ಸ್ಮರಿಸಿದ ಮುಖ್ಯಮಂತ್ರಿಗಳು,
ಕನಕದಾಸರ ಒಬ್ಬ ಕವಿ, ಸಂತ, ದಾರ್ಶನಿಕ ಎಂದು ಜೀವನವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು.
ಕನಕದಾಸರು ಹಿಂದುಳಿದ ಜಾತಿಗೆ ಸೇರಿದ್ದರಿಂದ ಅನೇಕ ಅಪಮಾನಗಳನ್ನು ಎದುರಿಸಬೇಕಾಯಿತು. ಅದನ್ನೆಲ್ಲಾ ಮೀರಿ ಅವರು ಸಂತರಾದ ಬಗೆಯನ್ನು ವಿದ್ಯಾರ್ಥಿಗಳಿಗೆ ಕತೆಗಳ ಮೂಲಕ ವಿವರಿಸಿದರು.

ರಾಮಧಾನ್ಯ ಚರಿತೆ

ಅಕ್ಕಿಗೂ ರಾಗಿಗೂ ಒಮ್ಮೆ ಯಾರು ಶ್ರೇಷ್ಠ ಎನ್ನುವ ಪೈಪೋಟಿ ಶುರುವಾಯಿತು. ಎರಡೂ ಶ್ರೀರಾಮನ ಬಳಿ ಹೋದವು. ಆಗ ಒಂದು ಹಗೆಯಲ್ಲಿ ರಾಗಿ ಮತ್ತೊಂದರಲ್ಲಿ ಭತ್ತ ಹಾಕಲಾಯಿತು ಮತ್ತು ಅದನ್ನು ಆರು ತಿಂಗಳ ನಂತರ ಪರೀಕ್ಷಿಸಲು ತೀರ್ಮಾನಿಸಲಾಯಿತು. ಆರು ತಿಂಗಳ ನಂತರ ಪರೀಕ್ಷಿಸಲಾಗಿ ಭತ್ತವು ಬೂದಿ ಹಿಡಿದು ಹಾಳಾಗಿತ್ತು , ಅದೇ ರಾಗಿ ಘಮಘಮಿಸುತ್ತಿತ್ತು ಇದರಿಂದ ಬಡವರ ಆಹಾರವಾದ ರಾಗಿಯು ಸರ್ವಶ್ರೇಷ್ಠ ಎಂದು ಸಾಬೀತಾಯಿತ್ತು ಮಾತ್ರವಲ್ಲ ಸತ್ವವುಳ್ಳ ಆಹಾರ ಎಂದು ಸಾಬೀತಾಯಿತು.

ಇದರಿಂದ ರಾಗಿ ಕಳಪೆಯಲ್ಲ ಅಕ್ಕಿಯನ್ನು ಶ್ರೀಮಂತರು ಉಪಯೋಗಿಸುತ್ತಾರೆ ಎಂದು ಅದು ಮೇಲಲ್ಲ ಎಂದು ಮಕ್ಕಳಿಗೆ ರಾಮಧಾನ್ಯ ಚರಿತೆ ಕತೆ ಹೇಳಿದರು.

ಸಮಾಜದಲ್ಲಿ ಕಟ್ಟಕಡೆಯ ವ್ಯಕ್ತಿಗೂ ಅನ್ನಭಾಗ್ಯ ಸಿಗಲಿ ಎನ್ನುವ ಉದ್ದೇಶದಿಂದಲೇ ಆ ಯೋಜನೆ ಶುರು ಮಾಡಿದ್ದಾಗಿ ಹೇಳಿದರು.

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!