Belgavi| ಚಳಿಗಾಲ ಅಧಿವೇಶನ: ವಿವಿಧ ಸಮಿತಿಗಳ ಸಭೆ.. ಸಮರ್ಪಕ ವ್ಯವಸ್ಥೆ ಕಲ್ಪಿಸಲು ಸೂಚನೆ

ಬೆಳಗಾವಿ, (Belgavi); ವಿಧಾನಮಂಡಳ ಚಳಿಗಾಲ ಅಧಿವೇಶನ ಡಿ.9 ರಿಂದ‌ ನಡೆಯಲಿದೆ. ಪ್ರತಿವರ್ಷದಂತೆ ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ಸಿದ್ಥತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ವಸತಿ, ಸಾರಿಗೆ ಮತ್ತು ಊಟೋಪಹಾರ ಸೇರಿದಂತೆ ಯಾವುದೇ ಅನಾನುಕೂಲ ಆಗದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ ತಿಳಿಸಿದರು.

ವಿಧಾನಮಂಡಳ ಚಳಿಗಾಲ ಅಧಿವೇಶನದ ಪೂರ್ವಸಿದ್ಧತೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ ಜರುಗಿದ ವಿವಿಧ ಉಪ ಸಮಿತಿಗಳ ಅಧ್ಯಕ್ಷರುಗಳು ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಊಟೋಪಹಾರ ಕಲ್ಪಿಸುವವರಿಗೆ ಮುಂಚಿತವಾಗಿಯೇ ಆದೇಶ ನೀಡುವ ಮೂಲಕ ಉತ್ತಮ ವ್ಯವಸ್ಥೆಯನ್ನು ಖಚಿತಪಡಿಸಬೇಕು. ಇದರೊಂದಿಗೆ ತುರ್ತು ಚಿಕಿತ್ಸೆಗೆ‌ ಅನುಕೂಲವಾಗುವಂತೆ ವೈದ್ಯಕೀಯ ತಂಡಗಳು ಮತ್ತು ಆ್ಯಂಬ್ಯುಲೆನ್ಸ್ ಗಳನ್ನು ನಿಯೋಜಿಸಬೇಕು ಎಂದು ತಿಳಿಸಿದರು.

ಸುವರ್ಣ ವಿಧಾನಸೌಧದ ಒಳಗಡೆಯ ಕಾರಿಡಾರ್ ಗಳಲ್ಲಿ ಹಾಗೂ ಮೊಗಸಾಲೆಯಲ್ಲಿ ಪಾವತಿ ಆಧಾರದ ಮೇಲೆ ವಿವಿಧ ಬಗೆಯ ಚಹಾ ಹಾಗೂ ಅಲ್ಪೋಪಹಾರ ವ್ಯವಸ್ಥೆ ಕಲ್ಪಿಸುವಂತೆ ಸಚಿವರು ತಿಳಿಸಿದರು.
ಇದಲ್ಲದೆ ಪ್ರತಿಭಟನಾ ಸ್ಥಳಗಳ ನಿರ್ವಹಣೆ ಹಾಗೂ ಸೂಕ್ತ‌ಭದ್ರತೆ ಬಗ್ಗೆಯೂ ಅಗತ್ಯ ಕ್ರಮ ವಹಿಸುವಂತೆ ತಿಳಿಸಿದರು.

ನಗರದ ರಸ್ತೆಗಳು ಸೇರಿದಂತೆ ನಗರ ಪ್ರವೇಶಿಸುವ ರಸ್ತೆಗಳ ದುರಸ್ತಿ ಕಾರ್ಯವನ್ನು ಕೂಡಲೇ ಕೈಗೆತ್ತಿಕೊಂಡು ಆದಷ್ಟು ಬೇಗನೇ ಪೂರ್ಣಗೊಳಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಪಾಲಿಕೆಯ ಅಧಿಕಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ನಿರ್ದೇಶನ ನೀಡಿದರು.

ವಸತಿ, ಸಾರಿಗೆ ಹಾಗೂ ಊಟೋಪಹಾರ ವ್ಯವಸ್ಥೆ ಸೇರಿದಂತೆ ಸುಗಮ ಅಧಿವೇಶನಕ್ಕಾಗಿ ಹತ್ತು ಸಮಿತಿಗಳನ್ನು ರಚಿಸಲಾಗಿದೆ. ಕಳೆದ ಬಾರಿಯಂತೆ ವಿವಿಧ ಸ್ಥಳಗಳಲ್ಲಿ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.

ಹೈಸ್ಪೀಡ್ ಸಾಮರ್ಥ್ಯದ ಅಂತರ್ಜಾಲ ಸಂಪರ್ಕ; ಕಂಪ್ಯೂಟರ್, ಲೇಖನ ಸಾಮಗ್ರಿಗಳು ಸೇರಿದಂತೆ ಎಲ್ಲ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ.

ಇದಲ್ಲದೇ ಪ್ರತಿವರ್ಷದಂತೆ ಅಧಿವೇಷನದಲ್ಲಿ ಭಾಗವಹಿಸುವ ಅಧಿಕಾರಿಗಳು, ಸಿಬ್ಬಂದಿ‌ ಮತ್ತು ಕಲಾಪ ವೀಕ್ಷಣೆಗೆ ಆಗಮಿಸುವ ಸಾರ್ವಜನಿಕರಿಗೆ ಪಾಸ್ ವ್ಯವಸ್ಥೆ ಮಾಡಲಾಗುತ್ತಿದೆ.

ಸುವರ್ಣ ಸೌಧದ ಮುಖ್ಯ ಪ್ರವೇಶ ದ್ವಾರದಿಂದ ಒಳಗಡೆ ಆವರಣದವರೆಗೆ ಸಾರ್ವಜನಿಕರಿಗೆ ಕರೆದೊಯ್ಯಲು ಉಚಿತ ಬಸ್ ವ್ಯವಸ್ಥೆ ಕೂಡ ಈ ಬಾರಿ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಅಂದಾಜು 6 ಸಾವಿರ ಜನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಪ್ರತಿವರ್ಷದಂತೆ ಬಿಗಿ ಭದ್ರತೆ ಕಲ್ಪಿಸಲಾಗುವುದು ಎಂದು ವಿವರಿಸಿದರು.

ಸುವರ್ಣಸೌಧದ ಸುತ್ತಮುತ್ತಲಿನ ಪ್ರತಿಭಟನಾ ಸ್ಥಳಗಳಲ್ಲೂ ಅಗತ್ಯ ಬಂದೋಬಸ್ತ್ ಮಾಡಲಾಗುವುದು. ಇದಲ್ಲದೇ ಸಾರಿಗೆ ನಿರ್ವಹಣೆಗೂ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.

ಅಧಿವೇಶನ ಬಂದೋಬಸ್ತಿಗೆ ಆಗಮಿಸುವ ಐದಾರು ಸಾವಿರ ಪೊಲೀಸ್ ಹಾಗೂ ಕೆ.ಎಸ್.ಆರ್.ಪಿ. ಸಿಬ್ಬಂದಿಗೆ ಅಗತ್ಯ ವಸತಿ ಮತ್ತು ಊಟೋಪಹಾರದ ವ್ಯವಸ್ಥೆ ಮಾಡಲಾಗುವುದು ಎಂದು ಬೆಳಗಾವಿ ಉಪ ಪೊಲೀಸ್ ಆಯುಕ್ತ ರೋಹನ್ ಜಗದೀಶ್ ವಿವರಿಸಿದರು.

ಸಭೆಯಲ್ಲಿ ಅಪರ‌ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಪಾಲಿಕೆ ಆಯುಕ್ತೆ ಶುಭಾ, ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾ ನಿರ್ದೇಶಕ ಗಂಗಾಧರ ದಿವಟರ, ಕಾಡಾ ಆಡಳಿತಾಧಿಕಾರಿ ಸತೀಶಕುಮಾರ್, ಲೊಕೋಪಯೋಗಿ ಇಲಾಖೆ ಅಭಿಯಂತರ ಸೊಬರದ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಆಹಾರ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ನಾಯಕ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ರಾಜಕೀಯ

ತುರ್ತು ಪರಿಸ್ಥಿತಿಗೆ 50 ವರ್ಷ ತುಂಬಿದೆ: ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ದಾಳಿ

ತುರ್ತು ಪರಿಸ್ಥಿತಿಗೆ 50 ವರ್ಷ ತುಂಬಿದೆ: ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ದಾಳಿ

ಭಾರತದ ಆತ್ಮಶಕ್ತಿಯ ಮೇಲೆ ಪ್ರಹಾರ ನಡೆಸಿದ, ಪ್ರಜಾಪ್ರಭುತ್ವವನ್ನೇ ಹತ್ತಿಕ್ಕಿದ ಕೃತ್ಯಕ್ಕೆ ಅರ್ಧ ದಶಕ; ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy)

[ccc_my_favorite_select_button post_id="109926"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಕೂಲ್ಡ್ರಿಂಕ್ಸ್ ಕುಡಿದಿಕ್ಕೆ ಗಂಡನ ಕಿರುಕುಳ.. ನವವಿವಾಹಿತೆ ಆತ್ಮಹತ್ಯೆ..!

ಕೂಲ್ಡ್ರಿಂಕ್ಸ್ ಕುಡಿದಿಕ್ಕೆ ಗಂಡನ ಕಿರುಕುಳ.. ನವವಿವಾಹಿತೆ ಆತ್ಮಹತ್ಯೆ..!

ಇಷ್ಟವಿಲ್ಲದ ಸಂಬಂಧಿಕರ ಜೊತೆ ತಂಪು ಪಾನೀಯ (ಕೂಲ್ಡ್ರಿಂಕ್) ಕುಡಿದಿದ್ದಕ್ಕಾಗಿ ಗಂಡ ನೀಡಿದ ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ (Suicide)

[ccc_my_favorite_select_button post_id="109857"]
ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಅಭಿಮಾನಿಗಳು ಕೂಡ ಕಾರಿನ ಚಕ್ರದಡಿ ವೃದ್ಧರೊಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರೂ ಲೆಕ್ಕಿಸದೇ ಜಗನ್ (Jagan) ಅವರನ್ನು ಮುಟ್ಟಲು, ಹತ್ತಿರದಿಂದ ನೋಡಲು ನುಗ್ಗಿ ಬರುತ್ತಿದ್ದರು

[ccc_my_favorite_select_button post_id="109775"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]