
ದೊಡ್ಡಬಳ್ಳಾಪುರ: ಜೀವನದಲ್ಲಿ ಜಿಗುಪ್ಸೆಗೊಂಡ ಯುವಕ ನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ Doddaballapura ತಾಲೂಕಿನ ಗೌಡನಕುಂಟೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.
ಮೃತ ಯುವಕನನ್ನು 24 ವರ್ಷದ ಕೃಷ್ಣರಾಜ್ ಎಂದು ಗುರುತಿಸಲಾಗಿದೆ.
ಮೃತ ಕೃಷ್ಣರಾಜ್ ನವೆಂಬರ್ 21ರಂದು ಗೆಳೆಯರೊಂದಿಗೆ ಅಯ್ಯಪ್ಪ ಮಾಲೆ ಧರಿಸಿದ್ದು, 29 ರಂದು ಶಬರಿ ಮಲೆಗೆ ತೆರಳಬೇಕಿತ್ತು. ಆದರೆ ಶನಿವಾರ ರಾತ್ರಿ ಭಜನೆ ಮುಗಿಸಿ ಮಲಗಿದವರು, ಬೆಳಗ್ಗೆ ದೇವಾಲಯದ ಸಮೀಪದ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಸ್ಥಳಕ್ಕೆ ಹೊಸಹಳ್ಳಿ ಠಾಣೆ ಸಬ್ಇನ್ಸ್ಪೆಕ್ಟರ್ ರವಿಕುಮಾರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜೀವನದಲ್ಲಿ ಜಿಗುಪ್ಸೆಯಿಂದ ಸಾವನಪ್ಪಿದ್ದಾರೆ ಎಂದು ಶಂಕಿಸಿದ್ದಾರೆ ಎನ್ನಲಾಗಿದೆ.
ಈ ಕುರಿತು ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
				 
															 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
						 
						 
						 
						