RAshoka| ಬಡವರ ಪರವೆನ್ನುವ ಸಿಎಂ ಸಿದ್ದರಾಮಯ್ಯ ಎಷ್ಟು ಜಲಾಶಯ ನಿರ್ಮಿಸಿದ್ದಾರೆ?; ಆರ್‌.ಅಶೋಕ

ಶ್ರೀರಂಗಪಟ್ಟಣ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣದ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ. ಆದರೆ ಉಪಚುನಾವಣೆಯ ಫಲಿತಾಂಶವನ್ನೇ ಕ್ಲೀನ್‌ ಚಿಟ್‌ ಎನ್ನುತ್ತಿದ್ದಾರೆ. ಇದು ಕ್ಲೀನ್‌ ಚಿಟ್‌ ಅಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (RAshoka) ಹೇಳಿದರು.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ತಗ್ಗಳ್ಳಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಎಲ್ಲಿಯವರೆಗೆ ಬಡವರಿಗೆ ನ್ಯಾಯ ಸಿಗುವುದಿಲ್ಲವೋ, ಅಲ್ಲಿವರೆಗೆ ಪಾಪಿಗಳ ಸರ್ಕಾರ ಎಂದು ಹೇಳುತ್ತೇನೆ.

ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಕೇವಲ ಮೂರು ಸೀಟು ಗೆದ್ದಿದೆ. ಆದರೆ ಬಿಜೆಪಿ ಅಂದು 18 ಸೀಟು ಗೆದ್ದಿತ್ತು. ಮುಂದಿನ ವರ್ಷಗಳಲ್ಲಿ ಕಾಂಗ್ರೆಸ್‌ ಕೂಡ ಸೋತು ಮೂರು ನಾಮ ಹಾಕಿಕೊಳ್ಳಲಿದೆ. ಕಾಂಗ್ರೆಸ್‌ ಅಧಿಕಾರದಲ್ಲಿರುವುದರಿಂದ ಭಯದಿಂದಾಗಿ ಅನೇಕರು ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಇದು ಭವಿಷ್ಯ ಹೇಳುವ ಚುನಾವಣೆಯಲ್ಲ ಎಂದರು.

ಚುನಾವಣಾ ಫಲಿತಾಂಶವನ್ನು ಕ್ಲೀನ್‌ ಚಿಟ್‌ ಎನ್ನಲಾಗುವುದಿಲ್ಲ. ಕ್ಲೀನ್‌ ಚಿಟ್ ‌ಅನ್ನು ನ್ಯಾಯಾಲಯ ಕೊಡಬೇಕಿದೆ. 14 ಸೈಟುಗಳನ್ನು ಲೂಟಿ ಮಾಡಿದ ಸಿಎಂ ಸಿದ್ದರಾಮಯ್ಯ ಅದನ್ನು ಬಡವರಿಗೆ ನೀಡಬೇಕಿತ್ತು. ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್‌ ಆರೋಪಕ್ಕೆ ಸಾಕ್ಷಿ ಇಲ್ಲದೆ ಪ್ರಕರಣ ಬಿದ್ದುಹೋಗಿದೆ. ಇದನ್ನೇ ಹೇಳಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್‌, ಜನರ ಮೇಲೆ ತೆರಿಗೆ ಹೊರೆ ಹೇರಿದೆ. ಜೊತೆಗೆ 1 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ ಎಂದು ದೂರಿದರು.

ಬಡವರ ಪರ ಎಂದು ಹೇಳುವ ಸಿಎಂ ಸಿದ್ದರಾಮಯ್ಯ ಎಷ್ಟು ಜಲಾಶಯ ನಿರ್ಮಿಸಿದ್ದಾರೆ? ಮೇಕದಾಟು ಎಂದು ಪ್ರತಿಭಟನೆ ಮಾಡಿ, ಅಲ್ಲಿ ಅಣೆಕಟ್ಟು ಕಟ್ಟುವ ಕೆಲಸ ಮಾಡಿಲ್ಲ. ಒಂದೇ ಒಂದು ಆಸ್ಪತ್ರೆ ಕೂಡ ನಿರ್ಮಿಸಿಲ್ಲ. ಆದರೆ ಆಸ್ಪತ್ರೆಯಲ್ಲಿ ಶುಲ್ಕಗಳನ್ನು ಮಾತ್ರ ಏರಿಸಲಾಗಿದೆ. ಎಲ್ಲವೂ ಉಚಿತ ಎಂದು ಸುಳ್ಳು ಹೇಳಿ ಈಗ ಎಲ್ಲ ದರಗಳನ್ನು ಏರಿಸಲಾಗಿದೆ. ಮಹಿಳೆಯರಿಗೆ 2,000 ರೂ. ನೀಡುತ್ತಿದ್ದೇವೆ ಎಂದು ಹೇಳಿ ಇಡೀ ಕುಟುಂಬದ ಆರ್ಥಿಕತೆಯನ್ನು ಗುಡಿಸಿ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ನಡುವೆ ವಕ್ಫ್‌ ಮಂಡಳಿಯಿಂದ ಹಿಂದೂ ದೇವಸ್ಥಾನಗಳ ಜಾಗ ಕಬಳಿಕೆಯಾಗಿದೆ. ಲಿಂಗಾಯತರ ಮಠದ ಜಾಗ, ಸ್ಮಶಾನ, ರೈತರ ಜಮೀನನ್ನು ತನ್ನದೇ ಎಂದು ವಕ್ಫ್‌ ಘೋಷಿಸಿಕೊಂಡಿದೆ. ಶ್ರೀರಂಗಪಟ್ಟಣದ ದೇವಸ್ಥಾನದ ಜಾಗವನ್ನು ಕೂಡ ವಕ್ಫ್‌ ಕಬಳಿಸಿದೆ. ಇಲ್ಲಿನ ಎಲ್ಲ ಭೂಮಿ ಮುಸ್ಲಿಮರದ್ದು ಎಂದು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಹೇಳಿದ್ದರು. ಈಗ ಹಿಂದೂಗಳು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆಗೆ ಏನೂ ಉಳಿಯುವುದಿಲ್ಲ ಎಂದರು.

ಇದು ಹಣದ ಗೆಲುವು

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಉಪಚುನಾವಣೆ ಹಣದ ಗೆಲುವೇ ಹೊರತು ಕಾಂಗ್ರೆಸ್‌ ಗೆಲುವಲ್ಲ. ಮೂರು ಕ್ಷೇತ್ರಗಳ ಗೆಲುವಿಗೆ ಕಾಂಗ್ರೆಸ್‌ ಅನವಶ್ಯಕವಾಗಿ ಬೀಗುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಡಿ.ಕೆ.ಸುರೇಶ್‌ ಸೋತಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಕಾರಣ ಎಂಬುದನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಒಪ್ಪುವುದಿಲ್ಲ. ಕಾಂಗ್ರೆಸ್‌ಗೆ ಅಭ್ಯರ್ಥಿಯ ಗತಿ ಇಲ್ಲ ಎಂಬ ಕಾರಣಕ್ಕೆ ಬಿಜೆಪಿಯಲ್ಲಿದ್ದವರನ್ನು ಕರೆಸಿಕೊಳ್ಳಲಾಗಿದೆ. ಈ ಸೋಲಿನಿಂದ ಬಿಜೆಪಿಗೆ ಯಾವುದೇ ರೀತಿಯ ಹಿನ್ನಡೆಯಾಗುವುದಿಲ್ಲ. ಇದು ಬಿಜೆಪಿಗೆ ಮಾನದಂಡವೂ ಅಲ್ಲ ಎಂದರು.

ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಲಿದೆ. ಈ ಸೋಲನ್ನೇ ಗೆಲುವಾಗಿ ಪರಿವರ್ತಿಸಲಾಗುವುದು ಎಂದರು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!