ದೊಡ್ಡಬಳ್ಳಾಪುರ: ನಗರದ ತೇರಿನ ಬೀದಿಯಲ್ಲಿ ಶ್ರೀ ಪ್ರಸನ್ನ ಚಂದ್ರಮೌಳೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವವು (brahma rathotsava). ವಿಜೃಂಭಣೆಯಿಂದ ನೆರವೇರಿತು.
ಮುಜರಾಯಿ ಇಲಾಖೆ ಹಾಗೂ ದೇವಾಲಯದ ಭಕ್ತ ಮಂಡಲಿ ವತಿಯಿಂದ ನಡೆದ ಬ್ರಹ್ಮ ರಥೋತ್ಸವದಲ್ಲಿ ವಿವಿದೆಡೆಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ರಥಕ್ಕೆ ಬಾಳೆಹಣ್ಣು, ದವನ ಅರ್ಪಿಸಿ ಧನ್ಯತಾ ಭಾವ ಮೆರೆದರು.
ಬ್ರಹ್ಮ ರಥೋತ್ಸವದ (brahma rathotsava) ಅಂಗವಾಗಿ ದೇವಾಲಯದಲ್ಲಿ ಗಿರಿಜಾ ಕಲ್ಯಾಣೋತ್ಸವ ನಡೆಯಿತು.
ಇದನ್ನೂ ಓದಿ: ಐತಿಹಾಸಿಕ ಪ್ರಸಿದ್ಧ ಬೋಗನಂದೀಶ್ವರ ಬ್ರಹ್ಮ ರಥೋತ್ಸವ..!: ದರ್ಶನಕ್ಕೆ ಹರಿದು ಬಂದ ಭಕ್ತಸಾಗರ| bhoga nandishwara video
ಶ್ರೀ ಶ್ರೀಕಂಠೇಶ್ವರ ಭಕ್ತ ಮಂಡಲಿ, ನಂಜುಂಡೇಶ್ವರ ಸೇವಾ ಸಮಿತಿ, ಸೇರಿದಂತೆ ವಿವಿಧ ಅರವಂಟಿಗೆ ಸಮಿತಿಗಳಿಂದ ಜಾತ್ರೆಗೆ ಆಗಮಿಸಿದ್ದ ಭಕ್ತಾದಿಗಳಿಗೆ ಅರವಂಟಿಗೆ ಹಾಗೂ ಪ್ರಸಾದ ವಿನಿಯೋಗ ನಡೆಯಿತು.