ದೊಡ್ಡಬಳ್ಳಾಪುರ ತಾಲ್ಲೂಕಿಗೆ ಆಗಮಿಸಿದ ಕನ್ನಡ ಜ್ಯೋತಿ ರಥ| kannada jyothi ratha

ದೊಡ್ಡಬಳ್ಳಾಪುರ: ತಾಲ್ಲೂಕಿಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ  ಕನ್ನಡ  ಜ್ಯೋತಿ ರಥ‌ (kannada jyothi ratha) ಆಗಮಿಸಿತು.  

ದೇವನಹಳ್ಳಿ ತಾಲ್ಲೂಕಿನಿಂದ ಆಗಮಿಸುವ  ಕನ್ನಡ ಜ್ಯೋತಿ ರಥವನ್ನು ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ದೇವನಹಳ್ಳಿ ತಾಲ್ಲೂಕಿನ ಗಡಿಭಾಗದಲ್ಲಿ ಸ್ವಾಗತಿಸಲಾಯಿತು.

ಆದ್ದೂರಿ ಮೆರವಣಿಗೆ: ದೊಡ್ಡಬಳ್ಳಾಪುರ ತಾಲ್ಲೂಕಿಗೆ ಆಗಮಿಸಿ ಕನ್ನಡ ಜ್ಯೋತಿ ರಥಕ್ಕೆ ದೊಡ್ಡಬಳ್ಳಾಪುರ  ಜವಾಹರ ನವೋವಿದ್ಯಾಲಯದ ವಿದ್ಯಾರ್ಥಿಗಳು  ಪುಪ್ಪಾರ್ಚನೆ ಮಾಡಿದರು.

ಕನ್ನಡದ 50 ಮಂದಿ ಸಾಧಕರ ಭಾವಚಿತ್ರಗಳನ್ನು ವಿದ್ಯಾರ್ಥಿಗಳು ಪ್ರದರ್ಶನ ಮಾಡಿದ ದೃಶ್ಯ ಗಮನಸೆಳೆಯಿತು.

ಪೂರ್ಣಕುಂಭ ಸ್ವಾಗತ: ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿಗೆ ಆಗಮಿಸಿದ  ಕನ್ನಡ ರಥವನ್ನು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಅದ್ಧೂರಿ ಯಾಗಿ ಪೂರ್ಣ ಕುಂಭ ಸ್ವಾಗತಿಸಿದರು. 

ಕಲಾ ತಂಡಗಳೊಂದಿಗೆ ನಡೆದ ಮೆರವಣಿಗೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ರವಿಕುಮಾರ್, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನರಸಿಂಹಮೂರ್ತಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಮುಖ್ಯ ಶಿಕ್ಷಕ  ಆರ್.ನಾರಾಯಣಸ್ವಾಮಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಮಾಳಯ್ಯ, ಗ್ರಾಮದ ಮುಖಂಡರುಗಳಾದ ಮುನಿರಾಜು,  ವಿಶ್ವನಾಥ್, ಕೃಷ್ಣಮೂರ್ತಿ, ಬೈಲಪ್ಪ,  ಕನ್ನಡಪರ ಹೋರಾಟಗಾರ ರಾಜಘಟ್ಟರವಿ, ಟಿಜಿ ಮಂಜುನಾಥ್, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ, ಪ್ರತಿನಿಧಿಗಳಾದ ಸಫೀರ್, ಚಂದ್ರಶೇಖರ್, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು, ಕಾರ್ಮಿಕರು ಮತ್ತು ಶಾಲಾ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಸಮ್ಮೇಳನದ ಜಾಗೃತಿಗೆ ಕನ್ನಡ ಜ್ಯೋತಿ ರಥ

ಮಂಡ್ಯದಲ್ಲಿ ನಡೆಯುವ 87ನೇ ಅಖಿಲ‌ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಬಗ್ಗೆ ಜಾಗೃತಿ ಮೂಡಿಸಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕನ್ನಡ ಜ್ಯೋತಿ ರಥವು ಸಂಚರಿಸುತ್ತಿದೆ.

ಸಮಸ್ತ ಕನ್ನಡಿಗರನ್ನು ಆಹ್ವಾನಿಸುವ ಉದ್ದೇಶದಿಂದ ಈ ರಥ ಸಂಚಾರ ಮಾಡುತ್ತಿದೆ. 

ಕನ್ನಡ ನಾಡು, ನುಡಿ, ಸಂಸ್ಕೃತಿಯ ಬಗ್ಗೆ ಜಾಗೃತಿ ಮತ್ತು ಅಭಿಮಾನ ಮೂಡಿಸುತ್ತಾ  ಕನ್ನಡಿಗರು ಸಮ್ಮೇಳನಕ್ಕೆ ಬರಲು ಈ ರಥ ಯಾತ್ರೆಯು ಪ್ರೇರಣೆಯಾಗಲಿದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ತಿಳಿಸಿದರು.

ಕನ್ನಡ ಜ್ಯೋತಿ ರಥದ ಆಕರ್ಷಣೆ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಡೆಯುತ್ತಿರುವ ಕನ್ನಡ ರಥದ ಮುಂಭಾಗದಲಿ  ಭುವನೇಶ್ವರಿ ದೇವಿ ಪ್ರತಿಮೆ ಇದೆ.  ಹಿಂಭಾಗದಲ್ಲಿ ಕೃಷಿಯ ಸಂಕೇತವಾದ ಎತ್ತುಗಳೊಂದಿಗೆ ಇರುವ ರೈತನನ್ನು ಕಾಣಬಹುದಾಗಿದೆ.

ಕನ್ನಡದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕುವೆಂಪು, ದ.ರಾ.ಬೇಂದ್ರೆ, ಮಾಸ್ತಿ ವೆಂಕಟೇಶ ಅಯ್ಯಂಗಾರ್,  ಕೆ.ಶಿವರಾಮಕಾರಂತ, ವಿ.ಕೃ.ಗೋಕಾಕ್,  ಯು.ಆರ್.ಅನಂತಮೂರ್ತಿ,  ಗಿರೀಶ್ ಕಾರ್ನಾಡ್, ಚಂದ್ರಶೇಖರ ಕಂಬಾರ,    ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌,  ಸರ್‌ ಎಂ. ವಿಶ್ವೇಶ್ವರಯ್ಯ ಅವರುಗಳ ಭಾವಚಿತ್ರಗಳಿವೆ.

ಸಾಹಿತ್ಯ ಸಮ್ಮೇಳನ ನಡೆಯುವ  ಮಂಡ್ಯ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಚಿತ್ರಗಳು ಆಕರ್ಷಣೆಯ ಆಗಿವೆ.

ನ.26 ರಂದು ದೊಡ್ಡಬಳ್ಳಾಪುರ ನಗರದಲ್ಲಿ ಮೆರವಣಿಗೆ

ದೊಡ್ಡಬಳ್ಳಾಪುರ ನಗರದಲ್ಲಿ ಮಂಗಳವಾರ ಮುಂಜಾನೆ 9.30 ಗಂಟೆಯಿಂದ ಕನ್ನಡ  ಜ್ಯೋತಿ ರಥ‌ದ (kannada jyothi ratha) ಮೆರವಣಿಗೆ ನಡೆಯಲಿದೆ.

ಬಸವಭವನ, ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ, ಕನ್ನಡ ಜಾಗೃತ ಭವನ, ತಾಲ್ಲೂಕು ಕಛೇರಿ ವೃತ್ತ, ಮಗುವಾಳಪ್ಪ ವೃತ್ತ, ಇಸ್ಲಾಂಪುರ ರಸ್ತೆ, ಕೊಂಗಾಡಿಯಪ್ಪ ಕಾಲೇಜು‌ ರಸ್ತೆ, ಬಯಲುಬಸವಣ್ಣ ದೇವಸ್ಥಾನ, ಕನಕದಾಸ ವೃತ್ತದ ಮೂಲಕ‌ ‌ ಅರಳುಮಲ್ಲಿಗೆ, ಕಾಡನೂರು ಕೈಮರ, ಚೆನ್ನಾದೇವಿ ಅಗ್ರಹಾರ, ಕನಸವಾಡಿ  ಗ್ರಾಮಗಳಲ್ಲಿ ಸಂಚರಿಸಿದ ನಂತರ    ನೆಲಮಂಗಲ ತಾಲ್ಲೂಕಿಗೆ ಕನ್ನಡ ರಥವನ್ನು ಬೀಳ್ಕೊಡಲಾಗುತ್ತದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಎ.ಜಯರಾಮ ತಿಳಿಸಿದರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಕೊನೆಯ ದಿನವಾದ ಸೋಮವಾರ ಅಂತಿಮ ಕಣದಲ್ಲಿ ‘ಎ’ ತರಗತಿಯಿಂದ 9, ‘ಬಿ’ ತರಗತಿಯಿಂದ 19 ಜನ ಉಳಿದಿದ್ದಾರೆ.

[ccc_my_favorite_select_button post_id="115412"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ದ್ವಿಚಕ್ರ ವಾಹನ ಅಪಘಾತದಲ್ಲಿ (Accident) ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಸಾವನ್ನಪ್ಪಿರುವ ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ.

[ccc_my_favorite_select_button post_id="115419"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!