ಉಪ ಚುನಾವಣೆ ಫಲಿತಾಂಶ ರಾಜ್ಯ ಸರ್ಕಾರಕ್ಕೆ ಜನಾದೇಶವಲ್ಲ: ಬಸವರಾಜ ಬೊಮ್ಮಾಯಿ (basavaraj bommai)

ಬೆಂಗಳೂರು: ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ರಾಜ್ಯ ಸರ್ಕಾರಕ್ಕೆ ನೀಡಿರುವ ಜನಾದೇಶವಲ್ಲ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ ಎಂದು ಆಡಳಿತ ಪಕ್ಷದ ಶಾಸಕರೇ ಭ್ರಮನಿರಸನಗೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (basavaraj bommai) ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾನ್ಯವಾಗಿ ಉಪ ಚುನಾವಣೆ ಸರ್ಕಾರದ ಪರವಾಗಿರುತ್ತವೆ. ನಾವು ಅಧಿಕಾರದಲ್ಲಿ ಇದ್ದಾಗ 17 ಉಪ ಚುನಾವಣೆಗಳಲ್ಲಿ 13 ಉಪ ಚುನಾವಣೆ ಗೆದ್ದಿದ್ದೇವೆ.

ಕಾಂಗ್ರೆಸ್ ನವರು ಇದು ಸರ್ಕಾರದ ಪರ ಜನರ ತೀರ್ಪು ಅಂತ ತಿಳಿದುಕೊಳ್ಳುವ ಅವಗತ್ಯವಿಲ್ಲ. ಆಡಳಿತ ಪಕ್ಷದ ಶಾಸಕರೇ ಅಭಿವೃದ್ಧಿ ಆಗಿಲ್ಲ ಅಂತ ಭ್ರಮ ನಿರಸನಗೊಂಡಿದ್ದಾರೆ. ಈ ಚುನವಣೆ ಫಲಿತಾಂಶ ಉಪಚುನಾವಣೆ ನಡೆದ ಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಿರುತ್ತದೆ ಎಂದು ಹೇಳಿದರು.

ಇನ್ನು ಗ್ಯಾರೆಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವ ಬಗ್ಗೆ ಆಡಳಿತ ಪಕ್ಷದ ಶಾಸಕರೇ ತಮ್ಮ ಪಕ್ಷದ ವೇದಿಕೆಯಲ್ಲಿ ಹೇಳಿದ್ದಾರೆ. ರಾಜ್ಯ ಸರ್ಕಾರ ಯಾವುದೇ ಹಣಕಾಸಿನ ಸಿದ್ದತೆ ಮಾಡಿಕೊಳ್ಳದೇ ಗ್ಯಾರೆಂಟಿ ಯೋಜನೆ ಜಾರಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಲಕ್ಷ ಕೋಟಿಗಿಂತಲೂ ಹೆಚ್ಚು ಸಾಲ ಮಾಡಿದ್ದಾರೆ. ರಾಜ್ಯ ಸರ್ಕಾರದಲ್ಲಿ ಹಣಕಾಸು ನಿರ್ವಹಣೆ ಕಷ್ಟವಾಗಿದೆ. ಹದಿನೈದನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಸುಮಾರು ಎರಡು ಸಾವಿರ ಕೋಟಿಗಿಂತಲೂ ಹೆಚ್ಚು ಹಣ ಗ್ರಾಮ ಪಂಚಾಯತಿಗಳು ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಬೇಕಿದೆ.

ಅಂಗನವಾಡಿ ಕಾರ್ಯಕರ್ತೆಯರು, ಗುತ್ತಿಗೆ ನೌಕರರಿಗೆ ಸಂಬಳ ಆಗುತ್ತಿಲ್ಲ. ಹಣ ಬಿಡುಗಡೆಯಾಗುತ್ತಿಲ್ಲ ಎನ್ನುವ ಕಾರಣಕ್ಕೆ ಟೆಂಡರ್ ಕರೆದರೂ ಕೆಲಸ ಮಾಡಲು ಕಾಂಟ್ರ್ಯಾಕ್ಟರ್ ಬರುತ್ತಿಲ್ಲ ಎಂದು ಹೇಳಿದರು.

ಬಿಜೆಪಿಯಲ್ಲಿ ಬಿನ್ನಮತ ಹೆಚ್ಚಾಗಿದಿಯಾ ಎನ್ನುವ ಪ್ರಶ್ನೆಗೆ ಬಿಜೆಪಿಯಲ್ಲಿ ಭಿನ್ನಮತವಿಲ್ಲ. ಎಲ್ಲರೂ ಬಿಜೆಪಿ ಪರವಿದ್ದಾರೆ. ಕೆಲವು ವಿಚಾರಗಳಲ್ಲಿ ಭಿನ್ನ ಅಭಿಪ್ರಾಯಗಳಿವೆ. ಒಂದು ತಿಂಗಳಲ್ಲಿ ಎಲ್ಲವೂ ಸರಿಯಾಗುವ ವಿಶ್ವಾಸವಿದೆ. ಬಿಜೆಪಿಯ ಒಂದು ತಂಡ ಉತ್ಸಾಹದಿಂದ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಅಕ್ರಮವಾಗಿ ಗನ್ ಮಾರಾಟ ಮಾಡುತ್ತಿರುವ ಜಾಲದ ಕುರಿತು ಕೇಳಿದ ಪ್ರಶ್ನೆಗೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಪೊಲಿಸ್ ಸ್ಟೇಷನ್ ಗಳು, ಕಲೆಕ್ಷನ್ ಸೆಂಟರ್ ಆಗಿವೆ. ಭಯೊತ್ಪಾದನೆಗೆ ಬೆಂಬಲಕೊಡುವವರನ್ನು ರಕ್ಷಿಸುತ್ತಾರೆ. ಬಂಗ್ಲಾ ನಿರಾಶ್ರಿತರು ನುಸುಳುತ್ತಿದ್ದಾರೆ‌. ಇದೇ ರೀತಿ ಮುಂದುವರೆದರೆ ಪರಿಸ್ಥಿತಿ ಕಷ್ಟವಾಗಲಿದೆ ಎಂದು ಹೇಳಿದರು.

ರಾಜಕೀಯ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಗ್ರಾಮ ಪಂಚಾಯಿತಿ (Gram Panchayats) ಸದಸ್ಯರ ಅವಧಿಯು ಅವುಗಳ ಮೊದಲ ಸಭೆಗಾಗಿ ಗೊತ್ತುಪಡಿಸಿದ ದಿನಾಂಕದಿಂದ 5 ವರ್ಷಗಳ ಅವಧಿಯವರೆಗೆ ಅಸ್ತಿತ್ವದಲ್ಲಿದ್ದು 5 ವರ್ಷಗಳು ಮುಗಿದ ನಂತರದ ದಿನಾಂಕದಿಂದ ಗ್ರಾಮ ಪಂಚಾಯಿತಿಯ ಅವಧಿಯು ಮುಕ್ತಾಯಗೊಳ್ಳಲಿದೆ.

[ccc_my_favorite_select_button post_id="118535"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!