ಗ್ಯಾರಂಟಿ ಯೋಜನೆಗಳು ಬಡವರ ಬದುಕಿಗೆ ಭರವಸೆ: ಹೆಚ್.ಎಂ. ರೇವಣ್ಣ| guarantee scheme

ಚಿಕ್ಕಮಗಳೂರು: ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳು (guarantee scheme) ಬಡವರ ಬದುಕಿಗೆ ಭರವಸೆ ತಂದಿದೆ. ಈ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲುವಲ್ಲಿ ಚಿಕ್ಕಮಗಳೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಗಳಿಸಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರವು ಸಮಾಜದ ಹಿಂದುಳಿದ ವರ್ಗದ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ಅವರ ಜೀವನ ಮಟ್ಟ ಸುಧಾರಿಸಲು ಹಲವಾರು ಜನಪರ ಯೋಜನೆಗಳನ್ನು ಜಾರಿ ಮಾಡಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿವೆ. ಈ ಕಾರ್ಯಕ್ಕೆ ಬೆಂಬಲವಾಗಿ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವ ನಿಧಿ ಹಾಗೂ ಶಕ್ತಿ ಯೋಜನೆಗಳು ಸಹಕರಿಸುತ್ತಿವೆ ಎಂದರು.

ಸರ್ಕಾರದವರು ಅಭಿವೃದ್ಧಿ ಕಾರ್ಯಗಳೊಂದಿಗೆ ಗ್ಯಾರಂಟಿ ಯೋಜನೆಗಳಿಗಾಗಿ ಸುಮಾರು ರೂ.52 ಸಾವಿರ ಕೋಟಿಗಳಷ್ಟು ಹಣ ಹಂಚಿಕೆ ಮಾಡಿದೆ. ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಸುಮಾರು 1.22 ಕೋಟಿ ಫಲಾನುಭವಿಗಳು ಯೋಜನೆಯ ಫಲವನ್ನು ಪಡೆದಿದ್ದಾರೆ ಹಾಗೂ ರೂ. 32,665 ಗಳಷ್ಟು ಹಣವನ್ನು ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ಜಿಲ್ಲೆಯಲ್ಲಿ 2.52 ಲಕ್ಷ ಮಹಿಳೆಯರು ನೋಂದಣಿಯಾಗಿದ್ದು, ಒಟ್ಟು ರೂ. 6,53,02,10,000 ಹಣ ಯೋಜನೆಗೆ ಬಳಕೆಯಾಗಿದೆ. ಹಾಗೂ ಗೃಹಜ್ಯೋತಿ ಯೋಜನೆಯಲ್ಲಿ ರಾಜ್ಯದಲ್ಲಿ 1.61 ಕೋಟಿ ಫಲಾನುಭವಿಗಳಿಗೆ ಯೋಜನೆ ಲಭ್ಯವಾಗಿದ್ದು, ಇದಕ್ಕೆ 11 ಸಾವಿರದ 31 ಕೋಟಿಗಳಷ್ಟು ಹಣ ವ್ಯಯವಾಗಿದೆ. ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಲ್ಲಿ 3 ಲಕ್ಷ ಫಲಾನುಭವಿಗಳಿದ್ದು, ಒಟ್ಟು ರೂ. 158 ಕೋಟಿಗಳಷ್ಟು ಹಣ ಯೋಜನೆಗೆ ಬಳಕೆಯಾಗಿದೆ ಎಂದರು.

ರಾಜ್ಯದಲ್ಲಿ 55.47 ಕೋಟಿ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿದ್ದು ಒಟ್ಟು 9 ಸಾವಿರದ 104 ಕೋಟಿ ವೆಚ್ಚವಾಗಿದೆ. ಜಿಲ್ಲೆಯಲ್ಲಿ 1.09 ಕೋಟಿ ಫಲಾನುಭವಿಗಳಿಗೆ ಯೋಜನೆ ಲಭ್ಯವಾಗಿದ್ದು, ಒಟ್ಟು 179 ಕೋಟಿ ಯೋಜನೆಗೆ ವೆಚ್ಚವಾಗಿದೆ. ಶಕ್ತಿ ಯೋಜನೆಯಲ್ಲಿ ರಾಜ್ಯದಲ್ಲಿ ಒಟ್ಟು 336 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ ಹಾಗೂ ಜಿಲ್ಲೆಯಲ್ಲಿ ಒಟ್ಟು 2,90,70,064 ಮಹಿಳೆಯರು ಪ್ರಯಾಣಿಸಿದ್ದು, ಒಟ್ಟು ರೂ. 1105539242 ರಷ್ಟು ಹಣ ಯೋಜನೆಗೆ ಬಳಕೆಯಾಗಿದೆ. ಯುವನಿಧಿ ಯೋಜನೆಯಡಿಯಲ್ಲಿ ರಾಜ್ಯದಲ್ಲಿ 1.81 ಕೋಟಿ ಯುವ ಫಲಾನುಭವಿಗಳಿದ್ದಾರೆ. ಒಟ್ಟು ರೂ. 149 ಗಳಷ್ಟು ಹಣ ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ ಹಾಗೂ ಜಿಲ್ಲೆಯಲ್ಲಿ ಒಟ್ಟು 3257 ಯುವ ಫಲಾನುಭವಿಗಳಿದ್ದು, ಒಟ್ಟು ರೂ 2,54,58,000 ಗಳಷ್ಟು ಹಣ ಈ ಯೋಜನೆಗೆ ಬಳಕೆಯಾಗಿದೆ ಎಂದು ತಿಳಿಸಿದ ಅವರು ಯೋಜನೆಯಿಂದ ವಂಚಿತರಾಗಿರುವ ಫಲಾನುಭವಿಗಳು ಅರ್ಜಿ ಸಲ್ಲಿಸಿ ಯೋಜನೆಯ ಫಲ ಪಡೆದುಕೊಳ್ಳಿ ಎಂದು ತಿಳಿಸಿದರು.

ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಮಾತನಾಡಿ, ಗ್ಯಾರಂಟಿ ಯೋಜನೆಗಳಿಂದ ಜನರು ಸ್ವಾವಲಂಭಿ ಹಾಗೂ ಸಂತೋಷದ ಜೀವನವನ್ನು ನಿರ್ವಹಿಸುತ್ತಿದ್ದಾರೆ. ಜನರ ಕೈಗೆ ಹಣ ನೀಡುವುದರಿಂದ ಅವರು ತಮ್ಮ ಅಗತ್ಯತೆಗಳಿಗೆ ವ್ಯಯ ಮಾಡುತ್ತಾರೆ. ಇದರಿಂದ ವ್ಯಾಪಾರ ವಹಿವಾಟುಗಳು ಹೆಚ್ಚುತ್ತವೆ. ಉತ್ಪಾದನೆ ಹೆಚ್ಚುತ್ತದೆ. ಉತ್ಪಾದನೆಗೆ ಮಾನವ ಸಂಪನ್ಮೂಲದ ಅವಶ್ಯಕತೆ ಇರುವುದರಿಂದ ಹೆಚ್ಚಿನ ಉದ್ಯೋಗ ಸೃಷ್ಟಿಯಾಗುತ್ತವೆ ಹಾಗೂ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಲು ಉಪಯುಕ್ತವಾಗಿದೆ.

ಆರ್ಥಿಕ ವ್ಯವಹಾರಗಳು ಹೆಚ್ಚುವುದರಿಂದ ಸರ್ಕಾರಕ್ಕೆ ತೆರಿಗೆ ರೂಪದಲ್ಲಿ ಆದಾಯವು ಹೆಚ್ಚಿ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರಿಯಾಗುತ್ತವೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಉತ್ತಮ ಬದುಕನ್ನು ಗುರಿಯಾಗಿರಿಸಿಕೊಂಡು ಈ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಜೊತೆಗೆ ಮಹಿಳೆಯರು ಸ್ವಾವಲಂಬಿಗಳಾಗಿ ಜೀವಿಸಲು ಯೋಜನೆಗಳು ಸಹಕಾರಿಯಾಗಿವೆ ಎಂದರು.

ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಿರುವವರನ್ನು ಗುರುತಿಸಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವುದಲ್ಲದೆ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್., ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್. ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮ್ಟೆ, ಚಿಕ್ಕಮಗಳೂರು ಉಪವಿಭಾಗಾಧಿಕಾರಿ ದಲ್ಜಿತ್ ಕುಮಾರ್, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಬೆಂಗಳೂರು ಹಾಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ.

ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ (ಮೈಸೂರು ವಿಭಾಗ)ದ ಉಪ ಅಧ್ಯಕ್ಷೆ ಡಾ. ಪುಷ್ಪ ಅಮರನಾಥ್, ಭದ್ರಾ ಕಾಡಾ ಶಿವಮೊಗ್ಗ ಅಧ್ಯಕ್ಷರಾದ ಡಾ. ಅಂಶುಮಂತ್, ಕ.ರಾ. ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷರಾದ ಬಿ.ಹೆಚ್. ಹರೀಶ್.

ರಾಜ್ಯ ಪರಿಸರ ತಜ್ಞರ ಮೌಲ್ಯಮಾಪನ ಸಮಿತಿ ಅಧ್ಯಕ್ಷ ಎ.ಎನ್. ಮಹೇಶ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ಎಂ.ಸಿ. ಶಿವನಂದ ಸ್ವಾಮಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

VoteChori: ಬೆದರಿಸುವ ಬದಲು ತನಿಖೆ ಮಾಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ತಿರುಗೇಟು

VoteChori: ಬೆದರಿಸುವ ಬದಲು ತನಿಖೆ ಮಾಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ತಿರುಗೇಟು

ನವದೆಹಲಿ: ರಾಹುಲ್ ಗಾಂಧಿಯವರು (Rahul Gandhi) ತಮ್ಮ ‘ವೋಟ್ ಚೋರಿ’ ( VoteChori) ಹೇಳಿಕೆಗಳನ್ನು ಬೆಂಬಲಿಸಿ ಏಳು ದಿನಗಳಲ್ಲಿ ಅಫಿಡವಿಟ್ ಸಲ್ಲಿಸಬೇಕು ಇಲ್ಲವಾದಲ್ಲಿ ದೇಶದ ಕ್ಷಮೆಯಾಚಿಸಬೇಕು ಎಂದು ಚುನಾವಣಾ ಆಯೋಗ (Election Commission) ಸೂಚಿಸಿದೆ.

[ccc_my_favorite_select_button post_id="112750"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!