ಬೆಂಗಳೂರು: ಪ್ರಿಯಕನೋರ್ವ ಯುವತಿಯನ್ನು ಚಾಕುವಿನಿಂದ ಇರಿದು ಕೊಲೆ (Murder) ಮಾಡಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದ್ದು, ಪಶ್ಚಿಮ ಬಂಗಾಳ ಮೂಲದ 29 ವರ್ಷದ ಮಹಾಲಕ್ಷ್ಮಿ ಎಂಬ ಯುವತಿಯನ್ನು 59 ತುಂಡುಗಳನ್ನಾಗಿ ಕತ್ತರಿಸಿದ ಘಟನೆ ಮಾಸುವ ಮುನ್ನವೇ ರಾಜಧಾನಿಯಲ್ಲಿ ಮತ್ತೊಂದು ಘಟನೆ ನಡೆದಿದೆ.
ಇಂದಿರಾನಗರದ ಸರ್ವಿಸ್ ಅಪಾರ್ಟ್ ಮೆಂಟ್‌ನಲ್ಲಿ ಈ ಘಟನೆ ನಡೆದಿದೆ. ಕೊಲೆಯಾದ ಯುವತಿಯನ್ನು ಆಸ್ಸಾಂ ಮೂಲದ ಮಾಯಾ ಗೊಗೋಯಿ(19) ಎಂದು ಗುರುತಿಸಲಾಗಿದೆ. ಮಾಯಾಳನ್ನು ಕೊಲೆ ಮಾಡಿರುವ ಕೇರಳ ಮೂಲದ ಆರವ್‌ನೋಯ್ ಯುವಕ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಇಂದಿರಾನಗರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಆರೋಪಿಗಾಗಿ ಶೋಧನಡೆಸುತ್ತಿದ್ದಾರೆ.
ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡು ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ವಾಸವಿದ್ದ ಮಾಯಾ ಗೊಗೋಯಿ, ನ.23ರಂದು ಮಾಯಾ ಹಾಗೂ ಆಕೆಯ ಪ್ರಿಯಕರ ಆರವ್‌ನೋಯ್ ಇಂದಿರಾನಗರದ ಸರ್ವಿಸ್ ಅಪಾರ್ಟ್ ಮೆಂಟ್‌ನಲ್ಲಿ ರೂಮ್ ಬುಕ್ ಮಾಡಿಕೊಂಡು ತಂಗಿದ್ದರು. ಆದರೆ, ಇಬ್ಬರ ನಡುವೆ ಜಗಳವಾಗಿದೆ. ಹಳೆ ಚಾಕುವಿನಿಂದ ಎದೆಯ ಭಾಗಕ್ಕೆ ಚುಚ್ಚಿ ಮಾಯಾಳನ್ನು ಕೊಲೆಗೈದು ಪರಾರಿಯಾಗಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ನ.23ರಂದು ಮಧ್ಯಾಹ್ನ ಮಾಯಾ ಗೊಗೋಯ್ ಹಾಗೂ ಅರವ್ ನೋಯ್ ಇಬ್ಬರು ಒಟ್ಟಿಗೆ ಅಪಾರ್ಟ್‌ಮೆಂಟ್ಗೆ ಆಗಮಿಸಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೆ ನೈಲಾನ್ ಹಗ್ಗವನ್ನು ಆನ್‌ಲೈನ್ ಮೂಲಕ ಆರೋಪಿ ತರಿಸಿಕೊಂಡಿದ್ದನು.
ಕೊಲೆಗೆ ಈ ಮೊದಲೇ ಆರೋಪಿ ಯೋಜನೆ ರೂಪಿಸಿದ್ದ ಎನ್ನಲಾಗಿದೆ. ನ.24ರಂದೇ ಮಾಯಾ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದು, ಆರೋಪಿ ಸಿಕ್ಕ ಬಳಿಕವೇ ನಿಖರ ಕಾರಣ ಏನೆಂಬುದು ತಿಳಿಯಲಿದೆ.