ಬೆಂಗಳೂರು: ದೇಶದಲ್ಲಿ ಕಾರ್ಯಾಂಗ, ಶಾಸಕಾಂಗ ಮತ್ತು ಮತ್ತು ನ್ಯಾಯಾಂಗದಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳು ಕುಸಿಯುತ್ತಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ (Santosh hegde) ಕಳವಳ ವ್ಯಕ್ತಪಡಿಸಿದ್ದಾರೆ.
ನಗರದ ಎಂಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಂವಿಧಾನ ಅಂಗೀಕಾರ ದಿನವನ್ನು ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಮೌಲ್ಯಗಳನ್ನು ಮರುಸ್ಥಾಪಿಸಲು ಯುವ ಪೀಳಿಗೆ ಶ್ರಮಿಸಬೇಕು. ಯಾರೊಬ್ಬರೂ ಭ್ರಷ್ಟಾಚಾರದಲ್ಲಿ ತೊಡಗದೆ ದುರಾಸೆಗಳನ್ನು ತ್ಯಜಿಸಿ ಜೀವನದಲ್ಲಿ ತೃಪ್ತಿ, ಮಾನವೀಯ ಮೌಲ್ಯಗಳು ಮತ್ತು ಶಾಂತಿ ಸಹಬಾಳ್ವೆ ಅಳವಡಿಸಿಕೊಂಡು ದೇಶದ ಏಳಿಗೆಗೆ ದುಡಿಯಬೇಕೆಂದರು.
ಎಂ.ಎಸ್. ಎಜುಕೇಶನಲ್ ಟ್ರಸ್ಟ್ ಕಾರ್ಯದರ್ಶಿ ಸುದರ್ಶನ್ ರಾಜು ಮತ್ತು ಎಂ.ಎಸ್ ಎಂಜಿನಿಯರಿಂಗ್ ಕಾಲೇಜ್ ಪ್ರಾಂಶುಪಾಲ ಡಾ. ರಾಣಾಪ್ರತಾಪ್