ತುಮಕೂರು: ರಾಜ್ಯ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಕೋಮು ವೈಷಮ್ಯದ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಉಮಾಶಂಕರ್ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಆರಂಭವಾಗಿದೆ.
ಶಕುಂತಲಾ ಪೊಸ್ಟ್: ಯೋಗಿಜಿ ರಾಜ್ಯದಲ್ಲಿ ಕಲ್ಲು ತೂರಾಟ ನಡೆಸಿದ್ದರಿಂದ ಅಲ್ಲಾ ಸಹಾಯಕ್ಕೆ ಬರಲಿಲ್ಲ. ಆದ್ದರಿಂದ ಜೀವ ಹೋಗಿದೆ ಅಷ್ಟೇ. ಮೇಲೆ ಹೋದ ಬಳಿಕ 72 ಜನ ಸುಂದರಿಯರು ಸಿಗುತ್ತಾರೆ ಎಂದು ಅನ್ಯ ಧರ್ಮದ ವಿರುದ್ಧ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಯೋಗಿಜಿ ರಾಜ್ಯದಲ್ಲಿ ಕಲ್ಲು ತೂರಾಟ ನಡೆಸಿದ್ದರಿಂದ "ಅಲ್ಲಾ" ಸಹಾಯಕ್ಕೆ ಬರಲಿಲ್ಲ
— ಶಕುಂತಲ ನಟರಾಜ್ (@ShakunthalaHS) November 24, 2024
ಆದ್ದರಿಂದ ಜೀವ ಹೋಗಿದೆ ಅಷ್ಟೇ, ಆದರೆ ಮೇಲೆ ಹೋದಮೇಲೆ 72 ಜನ ಸುಂದರಿಯರು ಸಿಗ್ತಾರೆ..🙄#YogiAdityanath 🚩 pic.twitter.com/i2iDDfhfbg
ಸದ್ಯ ಎಫ್‌ಐಆರ್ ಕಾಪಿಯನ್ನು ಶಕುಂತಲಾ ಅವರು ಪೋಸ್ಟ್ ಮಾಡಿಕೊಂಡಿದ್ದು, ಬಿಜೆಪಿ ಶಾಸಕ ಯತ್ನಾಳ್ ಸೇರಿದಂತೆ ಹಲವು ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಅಭಯ ನೀಡುತ್ತಿದ್ದಾರೆ.