ಸಚಿವೆ ಕಣ್ಣಿಗೆ ಬಿದ್ದ ನಿರ್ಗತಿಕ ಕುಟುಂಬ: ನೆರವು ನೀಡಿ ಮಾನವೀಯತೆ ತೋರಿದ ಲಕ್ಷ್ಮೀ ಹೆಬ್ಬಾಳಕರ್| lakshmi hebbalkar

ಬೆಳಗಾವಿ: ಮಹಿಳಾ ವಿಶ್ವವಿದ್ಯಾಲಯದ ಕಾರ್ಯಕ್ರಮದ ನಿಮಿತ್ಯ ಬುಧವಾರ ವಿಜಯಪುರಕ್ಕೆ ಆಗಮಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (lakshmi hebbalkar) ಬೆಳಗಾವಿಗೆ ವಾಪಸ್ ಆಗುವಾಗ ಆಕಸ್ಮಾತಾಗಿ ಕಣ್ಣಿಗೆ ಕಾಣಿಸಿದ ನಿರ್ಗತಿಕ ಕುಟುಂಬವೊಂದಕ್ಕೆ ನೆರವು ನೀಡುವ ಮೂಲಕ ಮಾನವೀಯತೆ ತೋರಿಸಿದ್ದಾರೆ.

ಕಾರ್ಯಕ್ರಮ ಮುಗಿಸಿ ಮರಳುವಾಗ ವಿಜಯಪುರ – ಬಾಗಲಕೋಟೆ ಹೆದ್ದಾರಿಯ ಪಕ್ಕ ಹನಗನಹಳ್ಳಿ ಎಂಬಲ್ಲಿ ರಸ್ತೆ ಪಕ್ಕದಲ್ಲಿ ಊಟಕ್ಕೆಂದು ಸಚಿವರು ವಾಹನ ನಿಲ್ಲಿಸಿದರು. ಊಟ ಮಾಡುವಾಗ ಪಕ್ಕದಲ್ಲಿದ್ದ ಸಣ್ಣ ಮನೆಯ ಮುಂದೆ ಅಜ್ಜಿಯೊಬ್ಬಳು ಬಾಟಲಿಗಳಲ್ಲಿ ನೀರು ತುಂಬಿಸಿ ಮನೆಯ ಮುಂದೆ ಇಡುತ್ತಿದ್ದಳು. ಆ ಬಗ್ಗೆ ವಿಚಾರಿಸಿದಾಗ ರಸ್ತೆಯಲ್ಲಿ ಹೋಗುವ ಜನರು ನೀರು ಕುಡಿಯಲು ಬರುತ್ತಾರೆ. ಅವರಿಗೆ ಸಹಾಯವಾಗಲೆಂದು ಬಾಟಲಿಗಳಲ್ಲಿ ತುಂಬಿ ಇಡುವುದಾಗಿ ತಿಳಿಸಿದಳು.

ಹಾಗೆ ಮಾತನಾಡುತ್ತ ಗೌರಮ್ಮ ವಾಡೇದ ಎಂಬ ಆ ಅಜ್ಜಿ ಹಾಗೂ ಜೊತೆಗಿದ್ದ ಮಲ್ಲು ಎನ್ನುವ ಹೆಸರಿನ ಅವಳ ಮಗನ ಕುರಿತು ವಿಚಾರಿಸಿದಾಗ, ಅವರು ಹಳ್ಳಿಯಲ್ಲಿ ಹೊಂದಿದ್ದ ಮನೆಯ ಜಾಗ ರಸ್ತೆ ಮಾಡುವಾಗ ಕೈ ತಪ್ಪಿದೆ. ಇದರಿಂದಾಗಿ ವಾಸಿಸಲು ಮನೆಯೇ ಇರಲಿಲ್ಲ. ನಂತರ ಈ ಸ್ಥಳದಲ್ಲಿದ್ದ ತೋಟದ ಮಾಲಕರು ಒಂದೇ ಕೊಠಡಿಯ ಮನೆಯಲ್ಲಿ ವಾಸಿಸಲು ಅವಕಾಶ ನೀಡಿದರು. ಆದರೆ ಅಡುಗೆ ಮಾಡಲು ಪಾತ್ರೆಗಳಾಗಲಿ, ಹಾಸಿಗೆ- ಹೊದಿಕೆಗಳಾಗಲಿ, ಕಾಳು ಕಡಿಗಳಾಗಲಿ ಏನೂ ಇಲ್ಲದೆ ಊಟಕ್ಕೂ ಸರಿಯಾಗಿ ಗತಿ ಇಲ್ಲ ಎನ್ನುವ ಅಂಶ ಗೊತ್ತಾಯಿತು.

ಅವರು ಈ ಮೊದಲು ಹೊಂದಿದ್ದ ಪಡಿತರ ಕಾರ್ಡ್ ಕೂಡ ಕಳೆದುಹೋಗಿದ್ದರಿಂದ ಸರಕಾರದಿಂದ ಯಾವುದೇ ಸೌಲಭ್ಯ ಸಿಗುತ್ತಿಲ್ಲ ಎನ್ನುವುದು ಕೂಡ ತಿಳಿಯಿತು.
ಕೂಡಲೇ ಸಚಿವರು (lakshmi hebbalkar) ಸ್ವಲ್ಪಮಟ್ಟಿಗೆ ಆರ್ಥಿಕ ನೆರವು ನೀಡಿದರಲ್ಲದೆ, ಆದಷ್ಟು ಶೀಘ್ರ ರೇಶನ್ ಕಾರ್ಡ್ ಮತ್ತು ಗೃಹಲಕ್ಷ್ಮೀ ಯೋಜನೆಯ ಹಣ ಬರುವಂತೆ ಮಾಡುವುದಾಗಿ ತಿಳಿಸಿ, ಸ್ಥಳದಿಂದಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನೆರವು ನೀಡಿದ ಪೊಲೀಸ್ ಅಧಿಕಾರಿ

ಇದೇ ವೇಳೆ ಅದೇ ಮಾರ್ಗವಾಗಿ ತೆರಳುತ್ತಿದ್ದ ಎಎಸ್ಐ ಎಚ್.ಎಸ್.ಗೌಡರ್ ಸಚಿವರ ಬಳಿ ಆಗಮಿಸಿ, ಅಜ್ಜಿಯ ಕುಟುಂಬದ ಪರಿಸ್ಥಿತಿ ವಿವರಿಸಿದರು. ಆಗ ಅಜ್ಜಿ, ತಾವು ಉಪವಾಸವಿದ್ದ ಸಂದರ್ಭದಲ್ಲಿ ಎಎಸ್ಐ ತಮಗೆ ಅಕ್ಕಿ ನೀಡಿ ನೆರವು ನೀಡಿದ್ದಾರೆ ಎಂದು ಸಚಿವರಿಗೆ ತಿಳಿಸಿದಳು. ಇದನ್ನು ತಿಳಿದ ಸಚಿವರು, ಸಂಕಷ್ಟದಲ್ಲಿದ್ದವರಿಗೆ ನೆರವು ನೀಡಿದ್ದಕ್ಕಾಗಿ ಸರಕಾರದ ಪರವಾಗಿ ಎಎಸ್ಐ ಗೌಡರ್ ಗೆ ಧನ್ಯವಾದ ತಿಳಿಸಿದರು.

ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಇಂತವರಿಗಾಗಿಯೇ ಸರಕಾರ ಗೃಹಲಕ್ಷ್ಮೀ, ಅನ್ನಭಾಗ್ಯ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಖ್ಯಮಂತ್ರಿಗಳು ಬಡವರಿಗಾಗಿಯೇ ಯೋಜನೆಗಳನ್ನು ತಂದಿದ್ದಾರೆ. ಅದು ಯಾರಿಗೆ ತಲುಪಿಲ್ಲವೋ ಅಂತವರಿಗೆ ತಲುಪಿಸುವುದು ನಮ್ಮ ಕರ್ತವ್ಯ. ಆ ಕೆಲಸವನ್ನು ಶೀಘ್ರದಲ್ಲೇ ಮಾಡಲಾಗುವುದು.

ಎಎಸ್ಐ ಗೌಡರ್ ಮನುಷ್ಯತ್ವ ತೋರಿಸಿ ಅಜ್ಜಿಯ ಕುಟುಂಬಕ್ಕೆ ನೆರವು ನೀಡಿದ್ದಾರೆ. ಅವರ ಕಾರ್ಯ ಸ್ತುತ್ಯಾರ್ಹ. ಸರಕಾರದಿಂದ ಆ ಕುಟುಂಬಕ್ಕೆ ಎಲ್ಲ ನೆರವು ಸಿಗುವಂತೆ ಮಾಡುತ್ತೇನೆ ಎಂದು ತಿಳಿಸಿದರು.

ತಮ್ಮ ಅವಸರದ ಪ್ರವಾಸದ ಮಧ್ಯೆಯೂ ಸಚಿವರು ಸಮಯ ನೀಡಿ ಇಂತಹ ನಿರ್ಗತಿಕ ಕುಟುಂಬಕ್ಕೆ ನೆರವು ನೀಡಲು ಮುಂದಾಗಿರುವುದು ಎಲ್ಲರ ಪ್ರಶಂಸೆಗೆ ಕಾರಣವಾಗಿದೆ.

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!