ಹೊಸಕೋಟೆ: ಟ್ಯೂಷನ್ ಮುಗಿಸಿ ವಾಪಸ್ ಆಗುತ್ತಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮೇಲೆ ಕೆಲ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ (Crime news) ನಡೆಸಿರುವ ಘಟನೆ ಹೊಸಕೋಟೆಯಲ್ಲಿ ನ.23ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ನವೆಂಬರ್ 23 ರಂದು ಸಂಜೆ ಟ್ಯೂಷನ್ ಮುಗಿಸಿ ವಾಪಸ್ ಆಗುತ್ತಿದ್ದ ವಿಧ್ಯಾರ್ಥಿ ಸೈಯದ್ ಇಶಾನ್ ಎಂಬಾತನ ಮೇಲೆ 9 ಜನರ ಗುಂಪೊಂದು ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಬಾಲಕ ಗಂಭೀರ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳಾದ ಖಾದೀರ್, ನವಾಜ್, ಫಾರಜ್, ಮಸ್ತಾನ್ ಸೇರಿದಂತೆ ಒಂಬತ್ತು ಜನರನ್ನು ಬಂಧಿಸಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.