ಮಕ್ಕಳನ್ನು ಮನೆಯ ಹೊರಗೆ ಆಟಕ್ಕೆ ಬಿಡುವುದರಿಂದ ಕ್ರಿಯಾಶೀಲತೆ ಅರಳುತ್ತದೆ: ಕೆ.ವಿ.ಪ್ರಭಾಕರ್ (KV Prabhakar)

ಬೆಂಗಳೂರು: ಮಕ್ಕಳನ್ನು ಮನೆಯ ಹೊರಗೆ ಆಟಕ್ಕೆ ಬಿಡುವುದರಿಂದ ಕ್ರಿಯಾಶೀಲತೆ ಅರಳುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ (KV Prabhakar) ಅಭಿಪ್ರಾಯಪಟ್ಟರು.

ಬಾಲ ಭವನ ಸೊಸೈಟಿ ಆಯೋಜಿಸಿದ್ದ ಕಲಾಶ್ರೀ ಆಯ್ಕೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಮನಸ್ಸು ಯಾವಾಗಲೂ ಓಡಾಟ-ಕುಣಿದಾಟದೊಂದಿಗೆ ಅತ್ಯಂತ ಫಲವತ್ತಾಗಿ ಅರಳುತ್ತವೆ. ಹೀಗಾಗಿ ಮಕ್ಕಳನ್ನು ನಿರಂತರ ಚಟುವಟಿಕಿಯಿಂದಿಡಬೇಕು. ಮಣ್ಣಲ್ಲಿ ಆಡೋದು, ಕೆರೆಯಲ್ಲಿ ಈಜುತ್ತಾ ನಾವೆಲ್ಲಾ ಬೆಳೆದೆವು. ಈಗ ಸಿಟಿ ಮಕ್ಕಳಿಗೆ ಈ ಅವಕಾಶ ಇಲ್ಲದಂತಾಗಿದೆ. ಹಳ್ಳಿಗಳಲ್ಲಿ ಈ ಅವಕಾಶಗಳು ಇವೆ ಎಂದರು.

ಮಕ್ಕಳು ಸ್ವಾಭಾವಿಕವಾಗಿಯೇ ಚಟುವಟಿಕೆಯಿಂದ ಇರುತ್ತಾರೆ. ರೆಡಿ ಮೇಡ್ ಪ್ಲಾಸ್ಟಿಕ್ ಆಟದ ಸಾಮಾನುಗಳು ಮತ್ತು ಮೊಬೈಲ್ ಫೋನ್ ಮಕ್ಕಳ ಕ್ರಿಯಾಶೀಲತೆಯ ಶತ್ರುಗಳಾಗಿವೆ ಎಂದರು.

ಮಕ್ಕಳನ್ನು ಪರಿಸರಕ್ಕೆ, ಆಟದ ಬಯಲಿಗೆ ಬಿಟ್ಟರೆ ಸಾಕು. ತಮಗೆ ಬೇಕಾದ ಆಟದ ಸಾಮಾಗ್ರಿಗಳನ್ನು ಕ್ರಿಯಾಶೀಲವಾಗಿ ಸೃಷ್ಟಿಸಿಕೊಳ್ಳುತ್ತಾರೆ.
ಪೋಷಕರು ತಮ್ಮ ಕೆಲಸದ ಒತ್ತಡ, ತಮ್ಮ ಹವ್ಯಾಸಗಳ ಒತ್ತಡವನ್ನು ಮಕ್ಕಳ ಮೇಲೆ ಹೇರುವುದರಿಂದ ಮಕ್ಕಳ ಕ್ರಿಯಾಶೀಲತೆ ಚಿವುಟಿದಂಗಾಗುತ್ತದೆ ಎನ್ನುವ ಎಚ್ಚರಿಕೆ ನೀಡಿದರು.‌

ಇವತ್ತು ಜಗತ್ತು ತುಂಬಾ ಫಾಸ್ಟ್ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಇಂದಿನ ಪ್ರಂಚದಲ್ಲಿ ಚಿಗುರೊಡೆಯುತ್ತಿರುವ ಮಕ್ಕಳನ್ನು ಕ್ರಿಯಾಶೀಲತೆ ಹಾಗೂ ಏಕಾಗೃತೆ ಮೂಡಿಸಲು ನಾವು ಪ್ರಯತ್ನಿಸಬೇಕು.

ಕನಕದಾಸರು ಮತ್ತು ಇಂತಹ ಮಹಾನ್ ಸಾಧಕರು ತಮ್ಮ ಸಾಧನೆಯನ್ನು ಹೇಗೆ ಮಾಡಿದರು ಎನ್ನುವ ತಿಳಿವಳಿಕೆ ಎಲ್ಲರ ಬಾಳಿನಲ್ಲಿ ಸ್ಪೂರ್ತಿನ್ನು ತಂದುಕೊಡುತ್ತವೆ.

ಬಾಲ್ಯದ ದಿನಗಳಲ್ಲೇ ಕ್ರಿಯಾಶೀಲತೆ ಕುರಿತು ನಾವು ಪೋಷಕರು ಅರಿವು ಬೆಳೆಸಿಕೊಳ್ಳಬೇಕು. ಬಳಿಕ ಮಕ್ಕಳಲ್ಲಿ ಮೂಡಿಸಬೇಕಾಗಿದೆ ಎಂದರು.

ಇವೆಲ್ಲದರ ಒಟ್ಟು ಪರಿಣಾಮವಾಗಿ ಇಂದು ವೃದ್ಧಾಶ್ರಮಗಳು ಹೆಚ್ಚಾಗುತ್ತಿವೆ. ಮಕ್ಕಳು ಬೆಳೆದಂತೆ ಕೇವಲ ಯಾಂತ್ರಿಕವಾಗಿ ಬದುಕು ರೂಪಿಸಿಕೊಂಡು ಪೋಷಕರನ್ನು ನಿರ್ಲಕ್ಷಿಸುವುದು ಹೆಚ್ಚಾಗುತ್ತಿದೆ. ಇದರಿಂದ ವೃದ್ಧಾಶ್ರಮಗಳೂ ಹೆಚ್ಚುತ್ತಿವೆ ಎಂದರು.

ಮಕ್ಕಳ ಕಲ್ಪನಾಶಕ್ತಿ ಗರಿಗೆದರುವುದಕ್ಕಾಗಿ , ಅವರನ್ನು ಹೇಗೆ ಕ್ರಿಯಾಶೀಲರಾಗುವಂತೆ ಪ್ರೋತ್ಸಾಹಿಸಲು ಪಾಲಕರಿಗೆ ಮಾರ್ಗದರ್ಶನ ನೀಡಲು ಬಾಲ ಭವನ ಇದೆ. ಬಾಲ ಭವನದ ಅಧ್ಯಕ್ಷರಾದ ನಾಯ್ಡು ಅವರಿದ್ದಾರೆ ಎಂದರು.

ಬಾಲ ಭವನದ ಅಧ್ಯಕ್ಷರಾದ ಬಿ.ಆರ್.ನಾಯ್ಡು ಕಾರ್ಯದರ್ಶಿ ನಿಶ್ಚಿಲ್, ಆಡಳಿತಾಧಿಕಾರಿ ವಿಜಯಲಕ್ಷ್ಮಿ ಅವರು ಉಪಸ್ಥಿತರಿದ್ದರು.

ರಾಜಕೀಯ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಹಳೆ ಮೈಸೂರು ಭಾಗಕ್ಕೆ ಸೀಮಿತವಾದ ಪಕ್ಷವಲ್ಲ. ನಮ್ಮ ಪಕ್ಷದ ಶಾಸಕರಲ್ಲಿ 50ರಷ್ಟು ಮಂದಿ*** ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110847"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ಮೆಳೇಕೋಟೆ ಕ್ರಾಸ್‌ಗೆ KSRTC ಸಾರಿಗೆ ಬಸ್ಸಿನಲ್ಲಿ ಬರುವ ವೇಳೆ ಮಹಿಳೆಯೋರ್ವ ಆಯತಪ್ಪಿ ಬಸ್ಸಿಂದ ಬಿದ್ದು ಸಾವನಪ್ಪಿರುವ ಘಟನೆ

[ccc_my_favorite_select_button post_id="110837"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!