ದೊಡ್ಡಬಳ್ಳಾಪುರ (Doddaballapura); ತಾಲೂಕಿನ ಆರೂಢಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಸದಸ್ಯೆ ಗಂಗರಾಜಮ್ಮ ರಾಮಕೃಷ್ಣಪ್ಪ ಆಯ್ಕೆಯಾಗಿದ್ದಾರೆ.
ಇಂದು ಆರೂಢಿ ಗ್ರಾಮಪಂಚಾಯಿತಿ ಸಭಾಂಗಣದಲ್ಲಿ ಚುನಾವಣೆ ಅಧಿಕಾರಿ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಶಶಿಕಲಾ, ಸಹಾಯಕ ಚುನಾವಣೆ ಅಧಿಕಾರಿ ಪಿಡಿಒ ಮಲ್ಲೇಶ್ ಸಮುಖದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.
18 ಮಂದಿ ಸದಸ್ಯತ್ವ ಬಲದ ಆರೂಢಿ ಗ್ರಾಮಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಾಗರತ್ನಮ್ಮ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಗಂಗರಾಜಮ್ಮ ರಾಮಕೃಷ್ಣಪ್ಪ ಹಾಗೂ ಗೌರಮ್ಮ ಅವರು ನಾಮಪತ್ರ ಸಲ್ಲಿಸಿದ್ದು, ಚುನಾವಣೆ ನಡೆಸಲಾಯಿತು.
ಈ ವೇಳೆ ಗಂಗರಾಜಮ್ಮ ರಾಮಕೃಷ್ಣಪ್ಪ 11 ಮತಗಳು, ಗೌರಮ್ಮ 07 ಮತಗಳನ್ನು ಪಡೆದಿದ್ದು, ಗಂಗರಾಜಮ್ಮ ರಾಮಕೃಷ್ಣಪ್ಪ ಅಧ್ಯಕ್ಷರಾಗಿ ಆಯ್ಕೆಯಾದರು.