ಸ್ವಾಮೀಜಿಯವರನ್ನು ಮುಟ್ಟಲು ಬಂದರೆ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ: ಆರ್.ಅಶೋಕ ಎಚ್ಚರಿಕೆ| RAshoka

ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರನ್ನು ಸರ್ಕಾರ ಮುಟ್ಟಲು ಬಂದರೆ ಇಡೀ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (RAshoka) ಎಚ್ಚರಿಕೆ ನೀಡಿದ್ದಾರೆ.

ಸ್ವಾಮೀಜಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಸ್ವಾಮೀಜಿಯವರಿಗೆ ಧೈರ್ಯ ಹೇಳಿದ್ದೇವೆ ಹಾಗೂ ಒಕ್ಕಲಿಗ ಸಮಾಜದೊಂದಿಗೆ ನಾವಿದ್ದೇವೆ ಎಂದು ಹೇಳಿದ್ದೇವೆ. ವಕ್ಫ್ ಮಂಡಳಿ ಹಿಂದೂಗಳ, ಧಾರ್ಮಿಕ ಸಂಸ್ಥೆಗಳ ಜಮೀನುಗಳನ್ನು ನುಂಗುತ್ತಿದೆ. ಪ್ರತಿ ಜಿಲ್ಲೆಯಲ್ಲಿ ಪಹಣಿ ಬದಲಿಸಲಾಗುತ್ತಿದೆ.

ಹಿಂದೂಗಳಿಗಾಗುತ್ತಿರುವ ಅನ್ಯಾಯದ ವಿರುದ್ಧ ಅವರು ಮಾತನಾಡಿದ್ದು, ಬಳಿಕ ಅದರಲ್ಲಿ ತಪ್ಪಿದ್ದರೆ ಕ್ಷಮೆ ಕೇಳುವುದಾಗಿ ಹೇಳಿದ್ದಾರೆ. ಇಷ್ಟಾದರೂ ಒಬ್ಬ ಮತಾಂಧ ದೂರು ನೀಡಿದ್ದಕ್ಕೆ ಅದರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದರೆ ಸರ್ಕಾರಕ್ಕೆ ಎಷ್ಟು ಧೈರ್ಯ ಇದೆ ಎಂದು ಪ್ರಶ್ನಿಸಿದರು.

ಅಸಾದುದ್ಧೀನ್ ಓವೈಸಿ ದೇಶಕ್ಕೆ ಬೆದರಿಕೆ ಹಾಕುತ್ತಾರೆ. ಆಂಧ್ರಪ್ರದೇಶದಲ್ಲಿ ಮೌಲ್ವಿ ಸರ್ಕಾರಕ್ಕೆ ಬೆದರಿಕೆ ಹಾಕುತ್ತಾನೆ. ಸುಪ್ರೀಂ ಕೋರ್ಟ್ ಆದೇಶಕ್ಕೆ ಬೆಲೆ ಕೊಡಲ್ಲ ಎಂದು ಕೆಲವರು ಹೇಳುತ್ತಾರೆ. ದೇವೇಗೌಡರನ್ನೇ ಖರೀದಿ ಮಾಡುತ್ತೇನೆಂದು ಸಚಿವ ಜಮೀರ್ ಹೇಳಿದ್ದರು. ಆದರೆ ಸರ್ಕಾರ ಅದರ ವಿರುದ್ಧ ಕ್ರಮ ವಹಿಸಿಲ್ಲ.

ಒಕ್ಕಲಿಗರ ವಿರುದ್ಧ ಕಾಂಗ್ರೆಸ್ ದ್ವೇಷ ಸಾಧಿಸುವುದು ಹೇಯ. ಸರ್ಕಾರ ಸ್ವಾಮೀಜಿಯವರನ್ನು ಮುಟ್ಟುವ ಕೆಲಸ ಮಾಡಿದರೆ ಇಡೀ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ ಎಂದು ಎಚ್ಚರಿಕೆ ನೀಡಿದರು.

ಪಾಕಿಸ್ತಾನಕ್ಕೆ ಜೈಕಾರ ಹಾಕಿದವರ ವಿರುದ್ಧ ಸರ್ಕಾರ ಕ್ರಮ ವಹಿಸಿಲ್ಲ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮಯಕ್ಕೆ ತಕ್ಕಂತೆ ಬದಲಾಗುತ್ತಾರೆ. ಒಮ್ಮೆ ಒಕ್ಕಲಿಗರ ಪರ ಮಾತಾಡಿದರೆ, ಮತ್ತೆ ಭಯೋತ್ಪಾದಕರನ್ನು ಬ್ರದರ್ ಎನ್ನುತ್ತಾರೆ. ಆದರೆ ಬಿಜೆಪಿ ಎಂದಿಗೂ ಹಿಂದೂಗಳ ಪರ ನಿಲ್ಲಲಿದೆ ಎಂದರು.

ಸ್ವಾಮೀಜಿಯವರಿಗೆ ತಿಳಿ ಹೇಳುವ ಬದಲು ಪೊಲೀಸರು ನೋಟಿಸ್ ನೀಡಿದ್ದಾರೆ. ಈಗ ಒಕ್ಕಲಿಗ ಸಮುದಾಯ ಎಚ್ಚೆತ್ತುಕೊಳ್ಳಬೇಕಿದೆ. ಸಮುದಾಯದ ವಿರುದ್ಧ ಸರ್ಕಾರ ಈ ರೀತಿ ದ್ವೇಷ ಕಾರುತ್ತಿರುವುದನ್ನು ಸಮುದಾಯದ ಜನರು ಗಮನಿಸಬೇಕಿದೆ. ಸ್ವಾಮೀಜಿಗೆ ಕಿರುಕುಳ ನೀಡಿದರೆ ಬಿಜೆಪಿ ಬೀದಿಗಿಳಿದು ಹೋರಾಟ ಮಾಡಲಿದೆ ಎಂದರು.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]