ನವದೆಹಲಿ: 2014ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ‘ಸುಳ್ಳುಗಾರ’ ಮೋದಿ (Modi) ಪರ ಪ್ರಚಾರ ಮಾಡಿದ್ದಕ್ಕಾಗಿ ಪ್ರಾಯಶ್ಚಿತ್ತ ಮಾಡಿಕೊಳ್ಳುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ದ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ ಮುಂದುವರಿಸಿದ್ದಾರೆ.
ವಿರಾಟ್ ಹಿಂದೂಸ್ತಾನ್ ಸಂಗಮ್ (ವಿಎಚ್‌ಎಸ್) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ ಅವರು ಕಾಂಗ್ರೆಸ್ ರಾಹುಲ್ ಗಾಂಧಿಯವರ ಪೌರತ್ವ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.
ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಸ್ವಾಮಿ, ನಾನು ಅವರ ಬೀರ್ಬಲ್ ಆಗಿರಲು ಒಪ್ಪಲಿಲ್ಲ ಎಂದು ಮೋದಿ ಕೋಪಗೊಂಡಿದ್ದಾರೆ. ‘ಮೋದಿ ಅಕ್ಟರ್ ಎಂದಾದರೆ, ಆತನಿಗೆ ಸರಸ್ವವನ್ನೂ ಸಮರ್ಪಿಸುವ ಬೀರ್‌ಬಲ್ ಆಗಲು ನಾನು ಒಪ್ಪುವುದಿಲ್ಲ.
2014ರಲ್ಲಿ ಮೋದಿ ಪರ ಪ್ರಚಾರ ಮಾಡಿದ್ದಕ್ಕಾಗಿ ನಾನು ಪ್ರಾಯಶ್ಚಿತ್ ಮಾಡುತ್ತೇನೆ. ಅವರು ಎಂತಹ ಸುಳ್ಳುಗಾರರಾಗಿ ಹೊರಹೊಮ್ಮಿದ್ದಾರೆ ಉದಾಹರಣೆಗೆ, ಅವರು ಪ್ರಧಾನಿಯಾದ ಮೊದಲ 15 ದಿನಗಳಲ್ಲಿ ವಿದೇಶಿ ಬ್ಯಾಂಕ್‌ಗಳಲ್ಲಿರುವ ಎಲ್ಲಾ ಕಪ್ಪು ಹಣವನ್ನು ವಾಪಸ್ ತರುತ್ತೇನೆ ಎಂದಿದ್ದರೆಂದು ಪ್ರಧಾನಿ ಮೋದಿ ವಿರುದ್ಧ ಬೇಸರ ಹೊರಹಾಕಿದ್ದಾರೆ.
ವಿರಾಟ್ ಹಿಂದೂಸ್ತಾನ್ ಸಂಗಮ್ ಪೋಸ್ಟ್: ಸುಬ್ರಮಣಿಯನ್ ಸ್ವಾಮಿ ಅವರು ರಾಹುಲ್ ಗಾಂಧಿ ಅವರ ಪೌರತ್ವದ ಬಗ್ಗೆ ಕ್ರಮ ಕೈಗೊಳ್ಳುವಂತೆ ಕೋರಿ 2015ರಿಂದ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಇದು ಈಗ ನ್ಯಾಯಾಲಯದಲ್ಲಿದೆ. ಮೋದಿ ಅವರು ರಾಹುಲ್ ಅವರನ್ನು ರಕ್ಷಿಸುತ್ತಿದ್ದಾರೆ ಎಂದು ಪೋಸ್ಟ್‌ನಲ್ಲಿ ಶೆಟ್ಟಿ ಬರೆದುಕೊಂಡಿದ್ದಾರೆ.