ಕೇಂದ್ರ ಸರ್ಕಾರ ರೈತರ ಹಣ ಕಡಿತಗೊಳಿಸಿ ರೈತರನ್ನು ಲೇವಾದೇವಿದಾರರ ಕಪಿಮುಷ್ಠಿಗೆ ಒಪ್ಪಿಸಿದೆ: ಸಿಎಂ ಸಿದ್ದರಾಮಯ್ಯ ಆಕ್ರೋಶ| Siddaramaiah

ದೆಹಲಿ: ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ58 ರಷ್ಟು ಕೇಂದ್ರ ಸರ್ಕಾರ ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲಕೊಡುವ ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಆಕ್ರೋಶ ವ್ಯಕ್ತಪಡಿಸಿದರು.

ಇಂದು ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರಮೋದಿ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ ಬಳಿಕ ಕರ್ನಾಟಕ ಭವನದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.

ರೈತರಿಗೆ ನೀಡುತ್ತಿದ್ದ ಸಬ್ಸಡಿ ಸಾಲ ಕಡಿತಗೊಳಿಸಿದ್ದರಿಂದ ರಾಜ್ಯದಲ್ಲಿ ಮತ್ತು ದೇಶದಲ್ಲಿ ಆಹಾರ ಉತ್ಪಾದನೆಯ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದರು.

ರಾಜ್ಯದ ರೈತರಿಗೆ ಮಾತ್ರ ನಬಾರ್ಡ್ ಸಾಲದ ಪ್ರಮಾಣ ಕಡಿಮೆ ಮಾಡಿಲ್ಲ. ಇಡೀ ದೇಶದಲ್ಲಿ ಕಡಿತಗೊಳಿಸಲಾಗಿದೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಇದರಿಂದ ಇಡೀ ದೇಶದ ರೈತರನ್ನು ಸಂಕಷ್ಟಕ್ಕೆ ದೂಡಿದಂತಾಗಿದೆ. ಇಡೀ ದೇಶದ ಕೃಷಿ ಉತ್ಪಾದನೆ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದರು.

ನಬಾರ್ಡ್ 4.5% ಬಡ್ಡಿಗೆ ರೈತರ ಸಾಲದ ಹಣ ನೀಡುತ್ತಿತ್ತು. ನಾವು ರೈತರಿಗೆ ಬಡ್ಡಿ ರಹಿತವಾಗಿ ಸಾಲ ನೀಡಿ ಈ 4.5% ಬಡ್ಡಿಯನ್ನು ಸರ್ಕಾರವೇ ಭರಿಸುತ್ತಿತ್ತು. ಈಗ ರಾಷ್ಟ್ರೀಕೃತ ವಾಣಿಜ್ಯ ಬ್ಯಾಂಕ್ ಗಳಿಂದ ಸಾಲ ಪಡೆಯುವಂತೆ ಕೇಂದ್ರ ಸರ್ಕಾರ ಹೇಳುತ್ತಿದೆ. ಶೇ10 ಬಡ್ಡಿ ದರದಲ್ಲಿ ವಾಣಿಜ್ಯ ಬ್ಯಾಂಕ್ ಗಳು ಸಾಲ ನೀಡುತ್ತವೆ. ಇದರಿಂದ ಬ್ಯಾಂಕ್ ಗಳಿಗೆ ಲಾಭ ಆಗುತ್ತದೆಯೇ ಹೊರತು ರೈತರಿಗೆ ಅನುಕೂಲ ಇಲ್ಲ ಎಂದರು.‌

15 ನೇ ಹಣಕಾಸು ಆಯೋಗದಲ್ಲೂ ರಾಜ್ಯಕ್ಕೆ ಅನ್ಯಾಯ ಆಯಿತು. ಭದ್ರಾ ಮೇಲ್ದಂಡೆ ಯೋಜನೆಗೆ 5000 ಕೋಟಿ ಘೋಷಿಸಿ ಒಂದು ಪೈಸೆಯನ್ನೂ ಕೊಡಲಿಲ್ಲ. ಫೆರಿಫೆರಲ್ ರಿಂಗ್ ರಸ್ತೆಗೂ ಕೊಡಲಿಲ್ಲ. ಇವೆಲ್ಲದರಿಂದ 11000 ಕೋಟಿ ರೂ ರಾಜ್ಯಕ್ಕೆ ನಷ್ಟವಾಗಿದ್ದನ್ನೂ ಪ್ರಧಾನಮಂತ್ರಿಯವರಿಗೆ ನೆನಪಿಸಿದ್ದೇವೆ. ಹೀಗಾಗಿ ಈ ಬಾರಿ ಮತ್ತೆ ನಬಾರ್ಡ್ ಮೂಲಕ ಆಗಿರುವ ಅನ್ಯಾಯವನ್ನು ಸರಿಪಡಿಸಲು ಮನವಿ ಮಾಡಿದ್ದೇವೆ ಎಂದರು.

ರಾಜ್ಯದ ಸಂಸದರು ಬಾಯಿ ಬಿಡಲ್ಲ: ಮಣ್ಣಿನ ಮಗ ಮಂತ್ರಿ ಏನು ಮಾಡುತ್ತಿದ್ದಾರೆ?

ರಾಜ್ಯಕ್ಕೆ ನಿರಂತರ ಅನ್ಯಾಯ ಆಗುತ್ತಿದೆ. ಮಹದಾಯಿ, ಮೇಕೆದಾಟುಗೆ ಅನುಮತಿ ನೀಡುತ್ತಿಲ್ಲ. ಇಷ್ಟಾದರೂ ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿ ಸಂಸದರು ಬಾಯಿ ಬಿಡುತ್ತಿಲ್ಲ. ಮಣ್ಣಿನ ಮಗ ಅಂದುಕೊಂಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಏನು ಮಾಡುತ್ತಿದ್ದಾರೆ. ರಾಜ್ಯಸಭಾ ಸದಸ್ಯರಾದ ಮಾಜಿ ಪ್ರಧಾನಿ ದೇವೇಗೌಡರೂ ರಾಜ್ಯಕ್ಕೆ ಆಗುತ್ತಲೇ ಇರುವ ಅನ್ಯಾಯಗಳ ವಿರುದ್ಧ ಬಾಯಿ ಬಿಡುತ್ತಿಲ್ಲ ಏಕೆ ಎಂದು ಪ್ರಶ್ನಿಸಿದರು.

ಸಚಿವರಾದ ಕೆ.ಜೆ.ಜಾರ್ಜ್, ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

ರಾಜಕೀಯ

ರಾಜ್ಯದ 1,082 ನಗರಾಭಿವೃದ್ಧಿ ಯೋಜನೆಗಳ ಪ್ರಸ್ತಾವನೆ ಕೇಂದ್ರಕ್ಕೆ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದ 1,082 ನಗರಾಭಿವೃದ್ಧಿ ಯೋಜನೆಗಳ ಪ್ರಸ್ತಾವನೆ ಕೇಂದ್ರಕ್ಕೆ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ನಮ್ಮ ರಾಜ್ಯದ ಎಲ್ಲಾ ನಗರಗಳಿಗೂ ಸೇರಿ ₹5 ಸಾವಿರ ಕೋಟಿ ಹಣ ಮೀಸಲಿಟ್ಟಿದ್ದಾರೆ. ಇದಕ್ಕೆ ಕೆಲವು ಮಾನದಂಡ ನಿಗದಿ ಮಾಡಿದ್ದು, ನಮ್ಮ ರಾಜ್ಯದಿಂದ 1,082 ಯೋಜನೆಗಳ ಪ್ರಸ್ತಾವನೆ ಅವರ ಮುಂದೆ ಇರಿಸಿದ್ದೇವೆ: ಡಿ.ಕೆ. ಶಿವಕುಮಾರ್

[ccc_my_favorite_select_button post_id="121389"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಬೈಕ್‌- ಟ್ರ್ಯಾಕ್ಟರ್ ಡಿಕ್ಕಿ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಬೈಕ್‌- ಟ್ರ್ಯಾಕ್ಟರ್ ಡಿಕ್ಕಿ.. ಇಬ್ಬರ ದುರ್ಮರಣ..!

ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಇರುವುದು ಅಪಘಾತದಲ್ಲಿ (Accident) ತೀವ್ರವಾಗಿ ಗಾಯಗೊಂಡು ಸಾವನಪ್ಪಲು ಪ್ರಮುಖ ಕಾರಣ ಎನ್ನಲಾಗುತ್ತಿದ್ದು, ಈ ವ್ಯಾಪ್ತಿಯಲ್ಲಿ ಬೀದಿ ದೀಪಗಳ ಅಳವಡಿಕೆಯಲ್ಲಿ ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯ ಆಕ್ರೋಶಕ್ಕೆ ಕಾರಣವಾಗಿದೆ.

[ccc_my_favorite_select_button post_id="121392"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]