ತಾರಕಕ್ಕೇರಿದ BJP ಬಣ ಬಡಿದಾಟ; ಯತ್ನಾಳ್‌ಗೆ ವಿಜಯೇಂದ್ರ ಸವಾಲ್..!

ಬೆಂಗಳೂರು: ಬಿಜೆಪಿ (BJP) ಕಾರ್ಯಕರ್ತರಿಗೆ ಅವಮಾನ ಆಗುವಂತೆ ಯಾರೂ ನಡೆದುಕೊಳ್ಳದಿರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ‌.

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನ್ನ ವಿರುದ್ಧ ಏನೇ ದಾಖಲೆಗಳಿದ್ದರೂ ಒಂದು ಕ್ಷಣವೂ ತಡ ಮಾಡದೆ ಬಿಡುಗಡೆ ಮಾಡಿ ಎಂದು ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರಲ್ಲಿ ವಿನಂತಿಸುವುದಾಗಿ ತಿಳಿಸಿದರು.

ಪಕ್ಷಕ್ಕೆ ಅಗೌರವ ಆಗುವಂತೆ ಯಾರೂ ಕೂಡ ಮಾಧ್ಯಮಗಳ ಮುಂದೆ ಮಾತನಾಡಬಾರದು. ನಮ್ಮ ನಡವಳಿಕೆ, ಹೇಳಿಕೆಗಳು ಸಂಘಟನೆಗೆ ಪೂರಕವಾಗಿ ಇರಬೇಕೇ ಹೊರತು ಸಂಘಟನೆಗೆ ತೊಂದರೆ ಕೊಡುವ ಕೆಲಸವನ್ನು ನಾನೂ ಮಾಡಬಾರದು; ಮತ್ತೊಬ್ಬನೂ ಮಾಡಬಾರದು ಎಂದು ತಿಳಿಸಿದರು.

ವಿಜಯೇಂದ್ರನ ಬದಲಾವಣೆ ಮಾಡಲಿ, ಇನ್ನೂ ಹೆಚ್ಚು ಜನರನ್ನು ಸೇರಿಸಿಕೊಳ್ಳಲಿ. ಅದರ ಬಗ್ಗೆ ಅಭ್ಯಂತರವಿಲ್ಲ. ರಾಜ್ಯದಲ್ಲಿ ಸಂಘಟನೆ ಯಾವ ದಿಕ್ಕಿನಲ್ಲಿ ಹೋಗಬೇಕೆಂಬ ಬಗ್ಗೆ ಪಕ್ಷದ ವರಿಷ್ಠರಿಗೆ ಸ್ಪಷ್ಟತೆ ಇದೆ. ಅವರ ಅಕ್ಕಪಕ್ಕ ಇರುವವರಿಗೆ ವಿಜಯೇಂದ್ರನ ಬಗ್ಗೆ ಬೇಸರ ಇಲ್ಲ ಎಂದು ಹೇಳಿದರು.

ಚಾಡಿ ಹೇಳುವ ಅವಶ್ಯಕತೆ ನನಗಿಲ್ಲ..
ಚಾಡಿ ಹೇಳುವುದಾಗಲೀ, ಯತ್ನಾಳರನ್ನು ಪಕ್ಷದಿಂದ ಹೊರಕ್ಕೆ ಕಳಿಸಬೇಕೆಂಬ ಒತ್ತಾಯ ಮಾಡಿಲ್ಲ, ಅದರ ಅವಶ್ಯಕತೆ ನನಗಿಲ್ಲ ಎಂದ ಬಿ.ವೈ.ವಿಜಯೇಂದ್ರ ಅವರು, ಕಳೆದ 3-4 ತಿಂಗಳುಗಳಲ್ಲಿ ನಾವು ಆಡಳಿತ ಪಕ್ಷವನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿದ್ದೇವೆ.

ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣದ ವಿರುದ್ಧ ಹೋರಾಟಗಳಲ್ಲಿ ಮುಖ್ಯಮಂತ್ರಿಗಳನ್ನು ಕಟ್ಟಿ ಹಾಕುವ ಕೆಲಸ ಯಶಸ್ವಿಯಾಗಿ ಮಾಡಿದ್ದೇವೆ. ರಾಜ್ಯದ ಜನರು ಭ್ರಷ್ಟ ಕಾಂಗ್ರೆಸ್ ಸರಕಾರ ಎನ್ನುತ್ತಿದ್ದಾರೆ. ಇದರ ನಡುವೆ, ನಮ್ಮ ಕೆಲವು ಮುಖಂಡರು ವೈಯಕ್ತಿಕ ಹಿತಾಸಕ್ತಿ ಇಟ್ಟುಕೊಂಡು ರಾಜ್ಯ ಕಂಡ ಧೀಮಂತ ನಾಯಕ, ರೈತ ಮುಂದಾಳು ಯಡಿಯೂರಪ್ಪರ ಬಗ್ಗೆ ಮನಬಂದಂತೆ ಮಾತನಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.

ಇನ್ನೂ ಕೆಲವರು ಯತ್ನಾಳರ ಹೆಗಲ ಮೇಲೆ ಗನ್ ಇಟ್ಟು ಗುಂಡು ಹಾರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದರಿಂದ ಪಕ್ಷಕ್ಕೆ ಒಳ್ಳೆಯದಾಗುವುದಿಲ್ಲ, ಉಪ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದ ಕಾರ್ಯಕರ್ತರು ಬಹಳಷ್ಟು ನೊಂದಿದ್ದಾರೆ. ಇದನ್ನು ಅರ್ಥ ಮಾಡಿಕೊಂಡು ಆಡಳಿತ ಪಕ್ಷವನ್ನು ಒಗ್ಗಟ್ಟಾಗಿ ಎದುರಿಸಬೇಕಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷವು 3 ಉಪಚುನಾವಣೆಗಳಲ್ಲಿ ಗೆದ್ದಿದೆ. ವಕ್ಫ್ ವಿಚಾರದಲ್ಲಿ ಫ್ರೀಡಂ ಪಾರ್ಕಿನಲ್ಲಿ ಮೊನ್ನೆ ನಡೆದ ಹೋರಾಟದಲ್ಲಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪರಮಪೂಜ್ಯ ಚಂದ್ರಶೇಖರನಾಥ ಮಹಾಸ್ವಾಮೀಜಿಗಳು ಮಾತನಾಡಿದ ಕೆಲವು ವಿಷಯಗಳ ಬಗ್ಗೆ ರಾಜ್ಯ ಸರಕಾರ ಎಫ್‍ಐಆರ್ ದಾಖಲು ಮಾಡಿಸಿದೆ. ಸ್ವಾಮೀಜಿಗಳು ಕ್ಷಮೆಯನ್ನೂ ಕೇಳಿದ್ದಾರೆ. ಆ ಹೋರಾಟದಲ್ಲಿ, ಸಭೆಯಲ್ಲಿ ನಾನೂ ಪಾಲ್ಗೊಂಡಿದ್ದೆ. ಮಠಮಾನ್ಯಗಳು, ರೈತರ ಜಮೀನನ್ನು ಕಸಿದುಕೊಳ್ಳುವ ಕೆಲಸದ ಓಲೈಕೆ ರಾಜಕಾರಣದ ಕುರಿತು ಬೇಸತ್ತು ಸ್ವಾಮೀಜಿಗಳು ಮಾತನಾಡಿದ್ದಾರೆ ಎಂದು ವಿವರಿಸಿದರು.

ಅದನ್ನು ಗಂಭೀರವಾಗಿ ಪರಿಗಣಿಸಿ ಸ್ವಾಮೀಜಿಗಳ ವಿರುದ್ಧ ಎಫ್‍ಐಆರ್ ದಾಖಲು ಮಾಡಿದ್ದು ಖಂಡಿತ ಸರಿಯಲ್ಲ; ಸ್ವಾಮೀಜಿಗಳ ಹೇಳಿಕೆಯ ಹಿನ್ನೆಲೆಯನ್ನೂ ಅರ್ಥೈಸಿಕೊಳ್ಳಬೇಕು. ರಾಜ್ಯ ಸರಕಾರವು ವಿಪಕ್ಷದವರಷ್ಟೇ ಅಲ್ಲದೆ, ಯಾರ್ಯಾರು ಈ ಸರಕಾರದ ವಿರುದ್ಧ ಮಾತನಾಡುತ್ತಾರೋ ಅವರ ವಿರುದ್ಧ, ಮಠಮಾನ್ಯಗಳ ವಿರುದ್ಧ ಎಫ್‍ಐಆರ್ ದಾಖಲಿಸಿ ತೊಂದರೆ ಕೊಡುತ್ತಿದೆ. ಈ ಸರಕಾರಕ್ಕೆ ಒಳ್ಳೆಯದಾಗುವುದಿಲ್ಲ ಎಂದು ತಿಳಿಸಿದರು.

ಅವರಷ್ಟು ಅನುಭವ ಇರಲಿಕ್ಕಿಲ್ಲ

ಎಲ್ಲರೂ ಅವರ ಧರ್ಮಪತ್ನಿಗೆ, ಮಗನಿಗೆ ಟಿಕೆಟ್ ಕೊಡಿಸಿಕೊಂಡಿದ್ದಾರೆ. ನಿಮ್ಮ ವಿಷಯ ಬಂದಾಗ ಕುಟುಂಬ ರಾಜಕಾರಣ; ಅನುಭವ ಇಲ್ಲ ಎಂದು ಮಾತನಾಡುತ್ತಾರೆ ಎಂದು ನಿನ್ನೆ ಪತ್ರಕರ್ತರೊಬ್ಬರು ಕೇಳಿದ್ದರು. ಅವರಷ್ಟು ಅನುಭವ ಇರಲಿಕ್ಕಿಲ್ಲ ಎಂದು ಒಪ್ಪಿಕೊಳ್ಳುತ್ತೇನೆ. ನನ್ನ ಉದ್ದೇಶ ಸರಿಯಾಗಿದೆ ಎಂದು ಬಿ.ವೈ.ವಿಜಯೇಂದ್ರ ಅವರು ಹೇಳಿದರು.

ಹಾದಿಯಲ್ಲಿ ಬೀದಿಯಲ್ಲಿ ಮಾತನಾಡಿ ಪಕ್ಷ ಸಂಘಟನೆಗೆ ಅಡ್ಡಿ ಮಾಡುತ್ತಿರುವವರ ವಿರುದ್ಧ ಬಿಗಿಯಾದ ಕ್ರಮ ಕೈಗೊಳ್ಳಬೇಕೆಂಬ ಅಪೇಕ್ಷೆ ಕಾರ್ಯಕರ್ತರಲ್ಲಿದೆ ಎಂದರು. ನನ್ನ ನಾಯಕತ್ವ ಬದಲಾವಣೆಗೆ ಮನವಿ ಮಾಡಬಾರದೆಂದು ನಾನು ಹೇಳುವುದಿಲ್ಲ, ಆ ಮನವಿಯನ್ನು ಎಲ್ಲಿ, ಯಾರ ಮುಂದೆ ಮಾಡಬೇಕು? ಅಷ್ಟಾದರೂ ಸ್ಪಷ್ಟತೆ ಇರಬೇಕಲ್ಲವೇ ಎಂದು ಪ್ರಶ್ನಿಸಿದರು. ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುವ ಗುರಿ ನನ್ನ ಮುಂದಿದೆ.

ಯಡಿಯೂರಪ್ಪ, ವಿಜಯೇಂದ್ರ ಹೊಂದಾಣಿಕೆ ರಾಜಕೀಯ ಮಾಡಿಕೊಂಡರೆಂದು ಹೇಳಿ ಸಂಘಟನೆಗೆ ಧಕ್ಕೆ ಉಂಟು ಮಾಡುತ್ತಿದ್ದಾರೆ. ಅವರನ್ನು ಕಾರ್ಯಕರ್ತರು ಮತ್ತು ಭಗವಂತನು ಒಳ್ಳೆಯದು ಮಾಡಲು ಸಾಧ್ಯವಿಲ್ಲ ಎಂದು ನುಡಿದರು.

ರಾಜ್ಯದಲ್ಲಿ ಸಂಘಟನಾ ಪರ್ವ ನಡೆಯುತ್ತಿದೆ. 75 ಲಕ್ಷಕ್ಕೂ ಹೆಚ್ಚು ಸದಸ್ಯರ ನೋಂದಣಿ ಆಗಿದೆ. ಸಕ್ರಿಯ ಸದಸ್ಯರ ನೋಂದಣಿ, ಬೂತ್ ಸಮಿತಿಯ ಪ್ರಕ್ರಿಯೆ ಆಗುತ್ತಿದೆ. ಈ ಸಂಬಂಧ ಪಕ್ಷದ ವರಿಷ್ಠರನ್ನು ಭೇಟಿ ಮಾಡಿದ್ದೇನೆ. 3 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಹಿನ್ನಡೆ ಕುರಿತು ಚರ್ಚೆ ಮಾಡಿದ್ದೇನೆ. ರಾಜ್ಯದಲ್ಲಿ ಆಗುತ್ತಿರುವ ರಾಜಕೀಯ ಪರಿಸ್ಥಿತಿ ಕುರಿತು ಚರ್ಚೆ ಮಾಡಿದ್ದೇನೆ ಎಂದು ಪ್ರಶ್ನೆಗೆ ಉತ್ತರಿಸಿದರು.

ರಾಜಕೀಯ

ಡಿಸಿಎಂ ಡಿ.ಕೆ.ಶಿವಕುಮಾರ್ ಸುತ್ತ ಸುತ್ತಿದ ಸುದ್ದಿಗಳು..!

ಡಿಸಿಎಂ ಡಿ.ಕೆ.ಶಿವಕುಮಾರ್ ಸುತ್ತ ಸುತ್ತಿದ ಸುದ್ದಿಗಳು..!

ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಪವರ್ ಶೇರಿಂಗ್ ಚರ್ಚೆ ಇನ್ನು ಮುಂದುವರೆದಿದೆ. ಈ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್‌ (D.K. Shivakumar) ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಒಂದು ಪೋಸ್ಟ್ ಹಾಕಿದ್ದಾರೆ.

[ccc_my_favorite_select_button post_id="116785"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರದ ಪ್ರಸಿದ್ಧ ಶಿರಡಿ ಸಾಯಿ ಬಾಬಾ ಮಂದಿರದಲ್ಲಿ ಕಳವು

ದೊಡ್ಡಬಳ್ಳಾಪುರದ ಪ್ರಸಿದ್ಧ ಶಿರಡಿ ಸಾಯಿ ಬಾಬಾ ಮಂದಿರದಲ್ಲಿ ಕಳವು

ದೊಡ್ಡಬಳ್ಳಾಪುರ ರಂಗಪ ಸರ್ಕಲ್ ಬಳಿಯ ಶಿರಡಿ ಸಾಯಿ ಬಾಬಾ ಮಂದಿರದಲ್ಲಿ (Shirdi Sai Baba temple) ಬುಧವಾರ ರಾತ್ರಿ ಹುಂಡಿ ಕಳ್ಳತನವಾಗಿದೆ.

[ccc_my_favorite_select_button post_id="116765"]
ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ದುರ್ಮರಣ: ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ದುರ್ಮರಣ: ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (Mahantesh Bilagi) ಸೇರಿ ಮೂವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

[ccc_my_favorite_select_button post_id="116728"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!