ಚಂದ್ರಶೇಖರ ಸ್ವಾಮೀಜಿಯವರ ಮೇಲೆ FIR: ಸಿಎಂ ಹೇಳಿದ್ ಇಷ್ಟು

ಬೆಂಗಳೂರು: ಚಂದ್ರಶೇಖರ ಸ್ವಾಮೀಜಿ ಅವರ ಪ್ರಕರಣದಲ್ಲಿ(FIR) ಪೊಲೀಸರು ಕಾನೂನಿನ ದೃಷ್ಟಿಯಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇಲ್ಲವಾದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಅವರು ಇಂದು ಕೆಂಗಲ್ ಹನುಮಂತಯ್ಯ ಅವರ ಪುಣ್ಯ ಸ್ಮರಣೆಯ ಪ್ರಯುಕ್ತ ಅವರ ಪ್ರತಿಮೆಗೆ ಮಾಪಾರ್ಪಣೆ ಮಾಡಿದ ಬಳಿಕ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

ಜೆಡಿಎಸ್ ನಿಂದ ನನ್ನನ್ನು ಉಚ್ಛಾಟಿಸಲಾಯಿತು. ನಾನು ಬಿಡಲಿಲ್ಲ

ಜೆಡಿಎಸ್ ಬಿಡುವಾಗ ಮಾಡಿದ್ದ ನಾಟಕವನ್ನೇ ಈಗ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಜೆಡಿಎಸ್ ನಿಂದ ನನ್ನನ್ನು ಉಚ್ಛಾಟಿಸಲಾಯಿತು. ನಾನು ಬಿಡಲಿಲ್ಲ ಎಂದರು. ಅವರು ಹೇಳಿದ್ದನ್ನು ಮಾಧ್ಯಮಗಳು ಹೇಳಿದ್ದಾದರೆ ಮಾಧ್ಯಮಗಳು ಏಕಿರಬೇಕು ಎಂದು ಸಿಎಂ ಖಾರವಾಗಿ ಮಾಧ್ಯಮದವರನ್ನು ಪ್ರಶ್ನಿಸಿದರು.

ರಾಜ್ಯದ ಜನರಿಗೆ ಕೃತಜ್ಞತೆ ಹೇಳಲು ಸಮಾವೇಶ

ನಾನು ಪಕ್ಷವನ್ನು ಬಿಡಲಿಲ್ಲ. ನನ್ನನ್ನು ದೇವೇಗೌಡರು ಉಚ್ಚಾಟಿಸಿದರು. ನಂತರ ನಾನು ಬೇರೆ ದಾರಿ ಇಲ್ಲದೆ ಅಹಿಂದ ಸಮಾವೇಶ ನಡೆಸಿದೆ, ಹಾಸನದಲ್ಲಿಯೂ ಸಮಾವೇಶ ಮಾಡಿದ್ದೆ. ಈಗ ಇಡೀ ರಾಜ್ಯದ ಜನರಿಗೆ ಕೃತಜ್ಞತೆ ಹೇಳಲು ಕಾಂಗ್ರೆಸ್ ಪಕ್ಷ ಮತ್ತು ಸ್ವಾಭಿಮಾನಿಗಳ ಒಕ್ಕೂಟದಿಂದ ಸಮಾವೇಶ ಏರ್ಪಡಿಸಲಾಗಿದೆ.

ಕಾಂಗ್ರೆಸ್ ಪಕ್ಷ ಮತ್ತು ಸ್ವಾಭಿಮಾನಿಗಳ ಜಂಟಿ ಆಶ್ರಯದಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು. ಇದಕ್ಕೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಲಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಆಹ್ವಾನಿಸಲಾಗಿದೆ. ಪಕ್ಷವು ಇದರಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದೆ ಎಂದರು.

ಜೆಡಿಎಸ್ ಪಕ್ಷ ವನ್ನು ಕಟ್ಟಿದವರು ನಾವು

ಜೆಡಿಎಸ್ ಈಗ ಜಾತ್ಯಾತೀತವಾಗಿ ಉಳಿದಿದೆಯೇ ? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಕೋಮುವಾದಿಗಳ ಜೊತೆಗೆ ಸೇರಿದ ಮೇಲೆ ಯಾವ ಸೆಕ್ಯುಲರ್ ಆಗಿದೆ ? ಸಂವಿಧಾನದಲ್ಲಿ ಜಾತ್ಯಾತೀತ, ಸಮಾಜವಾದಿ ಎಂದು ಸೇರ್ಪಡೆಯಾಗಿದೆ.

ಸರ್ವೋಚ್ಚ ನ್ಯಾಯಾಲಯವೂ ಜಾತ್ಯಾತೀತ ಇರಲೇಬೇಕೆಂದು ಹೇಳಿದ್ದಾರೆ

ಜೆಡಿಎಸ್ ನವರಿಗೆ ಪಕ್ಷ ಯಾವ ಹಿನ್ನೆಲೆಯಲ್ಲಿ ಕಟ್ಟಲಾಗಿದೆ ಎಂದು ಗೊತ್ತಿಲ್ಲ. ಪಕ್ಷ ರಚನೆಗೊಂಡಾಗ ಕುಮಾರಸ್ವಾಮಿ ಇರಲಿಲ್ಲ. ನಾನು ದೇವೇಗೌಡ, ಇಬ್ರಾಹಿಂ, ಸತೀಶ್ ಜಾರಕಿಹೊಳಿ, ಮಹದೇವಪ್ಪ, ವೆಂಕಟೇಶ್, ಲಕ್ಷ್ಮೀ ಸಾಗರ್ ಸೇರಿ ಆಗಿದ್ದು. ದೇವೇಗೌಡರು ರಾಷ್ಟ್ರೀಯ ಅಧ್ಯಕ್ಷರಾದರು, ನಾನು ರಾಜ್ಯಾಧ್ಯಕ್ಷನಾದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೀತಿಸಿದ ಯುವತಿಯ ಕೊಲೆಗೈದ ಪ್ರೇಮಿ.. ತಾಳಿ ಕಟ್ಟಿ ಸೆಲ್ಫಿ ಸ್ಟೇಟಸ್ ಅಪ್ಲೋಡ್..!

ಪ್ರೀತಿಸಿದ ಯುವತಿಯ ಕೊಲೆಗೈದ ಪ್ರೇಮಿ.. ತಾಳಿ ಕಟ್ಟಿ ಸೆಲ್ಫಿ ಸ್ಟೇಟಸ್ ಅಪ್ಲೋಡ್..!

ಪ್ರೀತಿಸಿದ್ದ ಪ್ರಿಯತಮೆಯನ್ನು ಕೊಲೆ (Murder) ಮಾಡಿ, ಆ ನಂತರ ಶವಕ್ಕೆ ತಾಳಿ ಕಟ್ಟಿ ವಿಕೃತಿ ಮೆರೆದ ವಿಚಿತ್ರ ಘಟನೆ ಮೈಸೂರಿನಲ್ಲಿ ಮೈಸೂರಿನ ಆಶೋಕಪುರಂನಲ್ಲಿ ನಡೆದಿದೆ.

[ccc_my_favorite_select_button post_id="110642"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!