ಬಾಣಂತಿಯರಿಗೆ ಸಾವಿನ ಭಾಗ್ಯ ನೀಡಿದ ಸರ್ಕಾರ: ಆರ್.ಅಶೋಕ| RAshoka

ಬಳ್ಳಾರಿ: ಪಶ್ಚಿಮ ಬಂಗಾಳದ ಫಾರ್ಮಾಸ್ಯುಟಿಕಲ್ಸ್‌ ಕಂಪನಿಯ ಐವಿ ದ್ರಾವಣ ಕಳಪೆ ಎಂದು ಆರು ತಿಂಗಳ ಹಿಂದೆಯೇ ಸರ್ಕಾರಕ್ಕೆ ವರದಿ ಸಲ್ಲಿಕೆಯಾದರೂ, ಅದನ್ನೇ ಸರ್ಕಾರಿ ಆಸ್ಪತ್ರೆಗಳಿಗೆ ಸರಬರಾಜು ಮಾಡಲಾಗಿದೆ. ಇದರ ಹಿಂದೆ ಬಲಾಢ್ಯರ ಕಾಣದ ಕೈ ಕೆಲಸ ಮಾಡಿದೆ. ಈ ಸಾವುಗಳಿಗೆ ಸರ್ಕಾರವೇ ನೇರ ಕಾರಣ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (RAshoka) ಆಕ್ರೋಶ ವ್ಯಕ್ತಪಡಿಸಿದರು.

ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಅವರು, ವೈದ್ಯರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ 10 ತಿಂಗಳಲ್ಲಿ 111 ನವಜಾತ ಶಿಶುಗಳು ಸಾವನ್ನಪ್ಪಿವೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನಾಲ್ಕು ತಾಯಂದಿರು ಹೆರಿಗೆ ನಂತರ ಮೃತರಾಗಿದ್ದಾರೆ.

ಈಗ ಜನರಲ್ಲಿ ಭಯದ ವಾತಾವರಣವಿದೆ. ಹಾಗೆಯೇ ಇಲ್ಲಿ ಮೆಡಿಕಲ್‌ ಮಾಫಿಯಾ ಕೂಡ ಇದೆ. ಇದು ಒಂದು ಜಿಲ್ಲೆಯಲ್ಲಿ ಕಂಡುಬಂದ ಸಮಸ್ಯೆ. ಇನ್ನೂ ಅನೇಕ ಜಿಲ್ಲೆಗಳಲ್ಲಿ ಏನಾಗಿದೆ ಎಂಬುದನ್ನು ನೋಡಬೇಕಿದೆ. ಈ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಬೇಕು. ಇಲ್ಲವಾದರೆ ನಾನೇ ಲೋಕಾಯುಕ್ತಕ್ಕೆ ದೂರು ನೀಡುತ್ತೇನೆ ಎಂದರು.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವಿ ದ್ರಾವಣ ನೀಡಿದ ಬಳಿಕ ತಾಯಂದಿರ ಲಿವರ್‌ ವಿಫಲವಾಗಿದೆ. ರಕ್ತದೊತ್ತಡ ಸಂಪೂರ್ಣ ಇಳಿಮುಖವಾಗಿದೆ. ಈ ದ್ರಾವಣ ಯಾರ ಪ್ರಭಾವದಿಂದ ಕರ್ನಾಟಕಕ್ಕೆ ಬಂತು ಎಂದು ನೋಡಬೇಕಿದೆ. ಹಿಂದೆ ಇದ್ದ ಡ್ರಗ್‌ ಕಂಟ್ರೋಲರ್‌ ಆರು ತಿಂಗಳ ಹಿಂದೆ ಐವಿ ದ್ರಾವಣ ಖರೀದಿಸಬಾರದು ಎಂದು ಸರ್ಕಾರಕ್ಕೆ ತಿಳಿಸಿದ್ದರು. ಬಳಸಬಾರದು ಎಂದು ಹೇಳಿದ್ದರೂ ಯಾವ ಕಾಣದ ಬಲಾಢ್ಯ ಕೈ ಇದನ್ನೇ ಖರೀದಿ ಮಾಡಬೇಕೆಂದು ಪ್ರಭಾವ ಬೀರಿದೆ ಎಂದು ನೋಡಬೇಕಿದೆ. ಈ ಕಂಪನಿಯ ಅನ್ಸಾರಿ ಎಂಬುವರು ಇಲ್ಲಿ ಪ್ರಭಾವ ಬೀರಿದ್ದು, ಈತನನ್ನು ಬಂಧಿಸಿದರೆ ಇದರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಮಾಡಬಹುದು ಎಂದರು.

ಎರಡು ತಿಂಗಳ ಹಿಂದಷ್ಟೇ ಅಧಿಕಾರ ವಹಿಸಿಕೊಂಡ ಅಧಿಕಾರಿಯನ್ನು ಸರ್ಕಾರ ಅಮಾನತು ಮಾಡಿ ನುಣುಚಿಕೊಂಡಿದೆ. ಸಚಿವರೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಕಳಪೆ ದ್ರಾವಣ

ಅಧಿಕಾರಿಗಳಾದ ಚಿದಾನಂದ ವಟಾರೆ, ರಘುನಂದನ್‌, ನಂದಿನಿ, ಶೈಲಾವತಿ ಇದನ್ನು ಶಿಫಾರಸು ಮಾಡಿದ್ದಾರೆ. 97 ಬ್ಯಾಚ್‌ಗಳಲ್ಲಿ 23 ಬ್ಯಾಚ್‌ಗಳು ಕಳಪೆ ಗುಣಮಟ್ಟ ಹೊಂದಿವೆ ಎಂದು ವರದಿ ನೀಡಲಾಗಿದೆ.

ಔಷಧಿಯಲ್ಲಿ ಶೇ.1 ರಷ್ಟು ಕಳಪೆ ಇದ್ದರೂ ಅದು ರೋಗಿಗಳಿಗೆ ಅಪಾಯ. ಆದರೆ ಇಷ್ಟೊಂದು ಪ್ರಮಾಣದಲ್ಲಿ ಕಳಪೆ ಔಷಧಿ ಇದ್ದರೂ ಅದನ್ನು ಆಸ್ಪತ್ರೆಗಳಿಗೆ ಸರಬರಾಜು ಮಾಡಲಾಗಿದೆ. ಇದರ ಹಿಂದೆ ಸರ್ಕಾರವೇ ಇದೆ. ಈ ಸಾವುಗಳಿಗೆ ಯಾರು ನ್ಯಾಯ ನೀಡುತ್ತಾರೆ ಎಂದು ಪ್ರಶ್ನಿಸಿದರು.

ಇದು ವೈದ್ಯರ ಲೋಪವಲ್ಲ. ಈ ದ್ರಾವಣ ನೀಡಿದ ನಂತರ ತಾಯಂದಿರ ಅಂಗಾಂಗ ವೈಫಲ್ಯವಾಗಿದೆ. ಸರ್ಕಾರವೇ ಬಾಣಂತಿಯರನ್ನು ಕೊಲ್ಲುವ ಕೆಲಸ ಮಾಡಿದ್ದು, ಇದು ಸಂಪೂರ್ಣವಾಗಿ ಸರ್ಕಾರದ್ದೇ ತಪ್ಪು. ಬಾಳಂತಿಯರಿಗೆ ಸಾವಿನ ಭಾಗ್ಯ ನೀಡಿದ ಕಾಂಗ್ರೆಸ್‌, ಹಾಸನದಲ್ಲಿ ಸಮಾವೇಶ ಮಾಡಲು ಮುಂದಾಗಿದೆ. ಖಜಾನೆ ಖಾಲಿ ಮಾತ್ರವಲ್ಲ, ಆಸ್ಪತ್ರೆಗಳಲ್ಲಿ ಔಷಧಿ ಕೂಡ ಖಾಲಿಯಾಗಿದೆ ಎಂದು ದೂರಿದರು.

ಇಷ್ಟಾದರೂ ಜಿಲ್ಲಾ ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರೆ. ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಕಾಣೆಯಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಳ್ಳಾರಿಗೆ ಬಂದರೂ ಆಸ್ಪತ್ರೆಗೆ ಭೇಟಿ ನೀಡಿಲ್ಲ. ಭ್ರಷ್ಟಾಚಾರ, ಸ್ವಜನಪಕ್ಷಪಾತ ಮಾತ್ರ ಇವರ ಕಾರ್ಯಕ್ರಮ ಎಂದರು.

25 ಲಕ್ಷ ರೂ. ಪರಿಹಾರ ಕೊಡಿ

ರಾಜ್ಯ ಸರ್ಕಾರ ಮೃತ ಬಾಣಂತಿಯರಿಗೆ 2 ಲಕ್ಷ ರೂ. ಪರಿಹಾರ ನೀಡಿದೆ. ಸರ್ಕಾರಕ್ಕೆ ಜೀವದ ಬೆಲೆ ಗೊತ್ತಿಲ್ಲ. ಮೃತಪಟ್ಟ ಪ್ರತಿ ಸಂತ್ರಸ್ತರಿಗೂ ತಲಾ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ರಾಜಕೀಯ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ: ಮತ್ತೆ ಭವಿಷ್ಯ ನುಡಿದ ಆರ್‌.ಅಶೋಕ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ: ಮತ್ತೆ ಭವಿಷ್ಯ ನುಡಿದ ಆರ್‌.ಅಶೋಕ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ. ಕಾಂಗ್ರೆಸ್‌ ಶಾಸಕರು ಕೂಡ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆಂದು ಭವಿಷ್ಯ ನುಡಿಯುತ್ತಿದ್ದಾರೆ. D.K.Shivakumar

[ccc_my_favorite_select_button post_id="110593"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ.. ಗುರುತು ಪತ್ತೆಗೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ.. ಗುರುತು ಪತ್ತೆಗೆ ಪೊಲೀಸರ

ಬಾಶೆಟ್ಟಿಹಳ್ಳಿ ಬಳಿ ಸುಮಾರು 35-40 ವರ್ಷ ವಯಸ್ಸಿನ ಗಂಡಸಿನ ಅಪರಿಚಿತ ಮೃತ ದೇಹ (Unknown body) ಪತ್ತೆ ಪ್ರಕರಣದ ಕುರಿತಂತೆ, ಮೃತನ ಗುರುತು ಪತ್ತೆಗೆ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="110603"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!