ದೊಡ್ಡಬಳ್ಳಾಪುರ (Doddaballapura): ನಗರದ ಹಿರಿಯ ಲೆಕ್ಕಪರಿಶೋಧಕ ಎಸ್.ಡಿ.ಪರ್ವತಯ್ಯ ಅನಾರೋಗ್ಯದ ಕಾರಣ ಸೋಮವಾರ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.
ಪರ್ವತಯ್ಯ ಅವರ ಪತ್ನಿ ಮಂಗಳಗೌರಿ ಅವರು ಪ್ರಸ್ತುತ ನಗರದ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿದ್ದಾರೆ. ಮೃತರಿಗೆ ಪುತ್ರಿ ಇದ್ದಾರೆ.
ಪರ್ವತಯ್ಯ ಅವರು ಲಯನ್ಸ್ ಕ್ಲಬ್ ಅಧ್ಯಕ್ಷರು ಸೇರಿದಂತೆ ವಿವಿಧ ಹುದ್ದೆಗಳ ಮೂಲಕ ಲಯನ್ಸ್ ಕ್ಲಬ್ನಲ್ಲಿ ಸೇವೆ ಸಲ್ಲಿಸಿದ್ದರು.
ಬೆಂಗಳೂರಿನ ಆಂಧ್ರ ದೇವಾಂಗ ಸಂಘದಲ್ಲಿ ಉಪಾಧ್ಯಕ್ಷರಾಗಿ, ಲಯನ್ಸ್ ಚಾರಿಟಬಲ್ ಟ್ರಸ್ಟ್ನ ಟ್ರಸ್ಟಿಯಾಗಿ, ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಉಪಾಧ್ಯಕ್ಷರಾಗಿ, ಗಗನ್ಯಾರ ಟ್ರಸ್ಟ್ನ ಕಾರ್ಯದರ್ಶಿಯಾಗಿದ್ದರು.
ಮೃತರ ಅಂತ್ಯ ಕ್ರಿಯೆ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಮುಕ್ತಿಧಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.