Nikhil kumaraswamy| ತಂಬಾಕು ಬೆಳೆಗೆ ಬೆಂಬಲ ಬೆಲೆ ನೀಡಿ: ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಮನವಿ

ನವದೆಹಲಿ: ತಂಬಾಕು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತರಬೇಕು ಹಾಗೂ ತಂಬಾಕಿಗೆ ಬೆಂಬಲ ಬೆಲೆ ನೀಡಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ (Nikhil kumaraswamy) ಅವರು ಹೇಳಿದ್ದಾರೆ.

ನವದೆಹಲಿಯಲ್ಲಿ ಸೋಮವಾರ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಕಾಯಿತು. ನಮ್ಮ ಮನವಿ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು. ಈ ಕುರಿತು ಅವರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಬೆಲೆ ಕುಸಿತ ಸೇರಿ ಹಲವಾರು ಸಮಸ್ಯೆಗಳಿಗೆ ಸಿಲುಕಿ ತೀವ್ರ ಸಂಕಷ್ಟದಲ್ಲಿರುವ ರಾಜ್ಯದ ತಂಬಾಕು ಬೆಳೆಗಾರರ ಹಿತದೃಷ್ಟಿಯಿಂದ ನಾವು ಸಚಿವರಿಗೆ ಈ ಮನವಿ ಸಲ್ಲಿಸಿದ್ದೇವೆ. ಇದೇ ವೇಳೆ ನಮ್ಮ ಜತೆಯಲ್ಲಿದ್ದ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೂಡ ಸಚಿವ ಗೋಯಲ್ ಅವರಿಗೆ ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟರು ಎಂದು ನಿಖಿಲ್ ಅವರು ಹೇಳಿದ್ದಾರೆ.

ನೆರೆ ರಾಜ್ಯಗಳಲ್ಲಿ ತಂಬಾಕು ಬೆಳೆಗಾರಿಗೆ ಉತ್ತಮ ದರ ಸಿಗುತ್ತಿದೆ. ಕರ್ನಾಟಕದ ಬೆಳೆಗಾರರಿಗೆ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ತಾವು ಗಮನ ಹರಿಸಿ ಬೆಳೆಗಾರರಿಗೆ ಉತ್ತಮ ಬೆಲೆ ಸಿಗುವಂತೆ ಮಾಡಬೇಕು. ಆಂಧ್ರ ಪ್ರದೇಶದಲ್ಲಿ ತಂಬಾಕಿನ ಬೆಲೆ ಪ್ರತಿ ಕೆಜಿಗೆ ಸರಾಸರಿ ರೂ.320 ಇದೆ. ಕರ್ನಾಟಕದಲ್ಲಿ ಪ್ರತಿ ಕೆಜಿಗೆ ರೂ.265 ಇದೆ. ಕಡಿಮೆ ಬೆಳೆಯಿಂದಗಾಗಿ ಬಡ ಹಾಗೂ ಮಧ್ಯಮ ಗಾತ್ರದ ಬೆಳೆಗಾರರಿಗೆ ಬಹಳ ನಷ್ಟವಾಗುತ್ತಿದೆ ಎಂಬ ಅಂಶವನ್ನು ಗೋಯಲ್ ಅವರ ಗಮನಕ್ಕೆ ತರಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಂಬಾಕು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತಂದರೆ ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಗಾತ್ರದ ಬೆಳೆಗಾರರಿಗೆ ಸಹಾಯ ಆಗುತ್ತದೆ ಹಾಗೂ ತಂಬಾಕು ಬೆಳೆಗೂ ಬೆಂಬಲ ಬೆಲೆ ನೀಡಿದರೆ ಬಡ ಕುಟುಂಬಗಳಿಗೆ ಆರ್ಥಿಕವಾಗಿ ಶಕ್ತಿ ತುಂಬಿದಂತೆ ಆಗುತ್ತದೆ. ಐಟಿಸಿಯಂತಹ ಬೃಹತ್ ಕಂಪನಿಗಳು ಇಂತಹ ಬೆಳೆಗಾರರಿಂದ ನೇರವಾಗಿ ತಂಬಾಕು ಖರೀದಿಸುವಂತೆ ಸೂಚನೆ ಕೊಡಬೇಕು ಎಂದು ಪಿಯೂಷ್ ಗೋಯಲ್ ಅವರಲ್ಲಿಅನಾವಿ ಮಾಡಲಾಗಿದೆ ಎಂದು ನಿಖಿಲ್ ಅವರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಅತ್ಯಂತ ಸಕಾರಾತ್ಮಕವಾಗಿ ಸಚಿವರು ಸ್ಪಂದಿಸಿ, ಅಧಿಕಾರಿಗಳಿಗೆ ಕೆಲ ಆದೇಶಗಳನ್ನು ನೀಡಿದ್ದಾರೆ. ಮತ್ತೊಮ್ಮೆ ಅಧಿಕಾರಿಗಳನ್ನು ಭೇಟಿ ಮಾಡಿ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಆಮೂಲಾಗ್ರವಾಗಿ ಚರ್ಚೆ ಮಾಡುವಂತೆ ಹೇಳಿದರು. ಅದರಂತೆ ನಾವು ಅವರ ಇಲಾಖೆಯ ಅಧಿಕಾರಿಗಳನ್ನು ಭೇಟಿಯಾಗಿ ಮಾಹಿತಿ ಕೊಡಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಮಾಜಿ ಸಚಿವರಾದ ಸಾ.ರಾ.ಮಹೇಶ್, ಹುಣಸೂರು ಶಾಸಕರಾದ ಜಿ.ಟಿ.ಹರೀಶ್ ಗೌಡ, ಕೋಲಾರ ಸಂಸದರಾದ ಮಲ್ಲೇಶ್ ಬಾಬು ಹಾಗೂ ತಂಬಾಕು ಬೆಳೆಗಾರರು ನಿಯೋಗದಲ್ಲಿ ಇದ್ದರು.

ಇದಕ್ಕೂ ಮುನ್ನ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ನಿಯೋಗವು, ಇದೇ ವಿಷಯಕ್ಕೆ ಸಂಬಂಧಿಸಿ ಮನವಿ ಸಲ್ಲಿಸಿತು.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!