ಭಾರತೀಯ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಳ: ಎನ್.ಚಲುವರಾಯಸ್ವಾಮಿ (N.Chaluvaraya Swamy)

ಬೆಂಗಳೂರು: ಭವಿಷ್ಯದ ದೃಷ್ಟಯಿಂದ ಸ್ಟಾರ್ಟ್ ಅಪ್ ಗಳ ಬೆಳವಣಿಗೆಯನ್ನು ಮತ್ತಷ್ಟು ವೇಗಗೊಳಿಸಲು ಇಂತಹ ಕಾರ‍್ಯಕ್ರಮಗಳನ್ನು ಆಯೋಜಿಸುತ್ತಿರುವುದು ನಿಜಕ್ಕೂ ಉತ್ತಮ ಬೆಳವಣಿಗೆ.
ಈ ನಮ್ಮ ಪರಿಸರದ ವ್ಯವಸ್ಥೆಯೊಳಗೆ ಸ್ಟಾರ್ಟ್ ಅಪ್ ಕಾನ್ಕ್ಲೇವ್ ಕೃಷಿಯಲ್ಲಿ ನಾವೀನ್ಯತೆಯ ಸಹಯೋಗ ಮತ್ತು ಸ್ಟಾರ್ಟ್ ಅಪ್ ಗಳ ವೇಗವರ್ಧನೆ ಮಾಡುವ ಗುರಿಯನ್ನು ಈ ಕಾನ್ಕ್ಲೇವ್ ಹೊಂದಿದೆ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ (N.Chaluvaraya Swamy) ಅಭಿಪ್ರಾಯ ವ್ಯಕ್ತಪಡಿಸಿದರು.

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕೃಷಿ ನಾವೀನ್ಯತೆ ಮತ್ತು ಉದ್ಯಮ ಶೀಲತೆಯನ್ನು ಉತ್ತೇಸುವ ಸಲುವಾಗಿ ಅಗ್ರಿ ಸ್ಟಾರ್ಟ್ ಅಪ್ ಕಾನ್ ಕ್ಲೇವ್ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಈ ಸ್ಟಾರ್ಟ್ ಅಪ್ ಕಾನ್ಕ್ಲೇವ್ ಜ್ಞಾನ ವಿನಿಮಯಕ್ಕೆ ವೇದಿಕೆಯನ್ನು ಸೃಷ್ಟಿಸುತ್ತದೆ. ಅಲ್ಲದೇ ಬೆಂಗಳೂರು ಸ್ಟಾರ್ಟ್ ಅಪ್ ಗಳ ಹಬ್ ಎಂದು ತಿಳಿಸಿದರು.

ಇಂತಹ ಸಮ್ಮೇಳದ ಮೂಲಕ ಕೃಷಿಯನ್ನು ಮರು ರೂಪಿಸುವುದಲ್ಲದೇ ಅತ್ಯಾಧುನಿಕ ಕೃಷಿ ತಂತ್ರಜ್ಞಾನಕ್ಕೆ ಪರಿಹಾರ ಸೂಚಿಸುವಲ್ಲಿಯೂ ಪ್ರಮುಖ ಪಾತ್ರವಹಿಸುತ್ತದೆ ಎಂದು ತಿಳಿಸಿದ ಸಚಿವರು, ಸ್ಟಾರ‍್ಟ್ಅಪ್ ಗಳು ಹೂಡಿಕೆದಾರರ, ಕಾರ್ಪೋರೇಟ್ ಗಳ ಮತ್ತು ನೀತಿ-ನಿರೂಪಕರ ನಡುವೆ ಸೇತುವೆ ಸಂಪರ್ಕವಾಗಿದೆ ಎಂದು ತಿಳಿಸಿದರು.

ಮುಂದಿನ ಪೀಳಿಗೆಗೆ ಕೃಷಿ ಹಾಗೂ ಕೃಷಿ ಉದ್ಯಮಿಗಳನ್ನು ಪ್ರೇರೇಪಿಸುವ ಯಶಸ್ಸಿನ ಕಥೆಗಳನ್ನು ಹಂಚಿಕೊಳ್ಳುವ ಮೂಲಕ ಇಂತಹ ಸಮಾವೇಶ ಪ್ರೇರಣೀಯ. ಇತ್ತಿಚಿನ ದಿನಗಳಲ್ಲಿ ಪ್ರಕೃತಿ ಹಾಗೂ ಹವಾಮಾನದಲ್ಲಿ ಆಗುತ್ತಿರುವ ಬದಲಾವಣೆಯಂತ ವಿಚಾರಗಳನ್ನು ಚರ್ಚಿಸುವುದಕ್ಕೆ ಈ ವೇದಿಕೆ ಸೂಕ್ತವಾಗಿದೆ ಎಂದು ಕೃಷಿ ಸಚಿವರು ಹೇಳಿದರು..

ಡಿಸೆಂಬರ್ 31, 2023 ರ ಹೊತ್ತಿಗೆ 1,17,254 ಮನ್ನಣೆ ಪಡೆದ ಸ್ಟಾರ‍್ಟ್ಅಪ್ ಗಳೊಂದಿಗೆ 3 ನೇ ಅತಿದೊಡ್ಡ ಸ್ಥಾನವನ್ನು ಪಡೆದುಕೊಂಡಿರುವ ಭಾರತವು ಸ್ಟಾರ‍್ಟ್ಅಪ್ ನವ ಜಾಗತಿಕ ನಾಯಕನಾಗಿ ಹೊರಹೊಮ್ಮಿದೆ. ಅಲ್ಲದೇ
ಈ ಸ್ಟಾರ‍್ಟ್ಅಪ್ ಗಳು 56 ವೈವಿಧ್ಯಮಯ ಕೈಗಾರಿಕಾ ವಲಯಗಳಲ್ಲಿ ವ್ಯಾಪಿಸಿದ್ದು 12.42 ಲಕ್ಷ ನೇರ ಉದ್ಯೋಗಗಳನ್ನು ಸೃಷ್ಟಿ ಮಾಡಿದೆ ರೂ.349.37 ಬಿಲಿಯನ್ ಮೊತ್ತದ ಕೃಷಿ ಸ್ಟಾರ‍್ಟ್ ಅಪ್ ಗಳು ಶೇ 5% ರಷ್ಟಿದ್ದು, ಕೃಷಿ ಮತ್ತು ಆಹಾರ ವ್ಯವಸ್ಥೆಗಳಲ್ಲಿ ನಿರ್ಣಾಯಕ ಸವಾಲುಗಳಿಗೆ ಇದು ಪರಿಹಾರವಾಗಿದೆ ಎಂದು ತಿಳಿಸಿದರು.

ಪ್ರಸ್ತುತ, ಭಾರತವು 2,800 ಮಾನ್ಯತೆ ಪಡೆದ ಅಗ್ರಿ-ಟೆಕ್ ಸ್ಟಾರ‍್ಟ್ಅಪ್ ಗಳಿಗೆ ನೆಲೆಯಾಗಿದೆ, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳು ಕೃಷಿ ಆವಿಷ್ಕಾರದ ಕೇಂದ್ರಗಳಾಗಿದ್ದು, ಈ ಸ್ಟಾರ್ಟ್ ಅಪ್ ಗಳಲ್ಲಿ ಸುಮಾರು 60% ರಷ್ಟು ಶ್ರೇಣಿ-1 ಮತ್ತು ಶ್ರೇಣಿ-2 ನಗರಗಳಲ್ಲಿ ಕೇಂದ್ರೀಕೃತವಾಗಿವೆ ಎಂದು ಸಚಿವರು ತಿಳಿಸಿದರು..

ಕೃಷಿ-ತಂತ್ರಜ್ಞಾನದ ಬೆಳವಣಿಗೆಗೆ ಸ್ಟಾರ್ಟ್ ಅಪ್ ಗಳು ಪ್ರೇರಕವಾಗಿದ್ದು,
ಸರ್ಕಾರದ ಮೂಲಕ PM KISAN ಮತ್ತು ಅಗ್ರಿ-ಇನ್ಫ್ರಾ ಫಂಡ್ ನಂತಹ ಕಾರ‍್ಯಕ್ರಮಗಳು ಕೃಷಿಯಲ್ಲಿ ತಂತ್ರಜ್ಞಾನದ ಏಕೀಕರಣವನ್ನು ಪ್ರೋತ್ಸಾಹಿಸುತ್ತಿದ್ದು, ಹೂಡಿಕೆದಾರರ ಆಸಕ್ತಿಯಿಂದ ಆಹಾರ ಭದ್ರತೆ ಮತ್ತು ಸುಸ್ಥಿರ ಅಭ್ಯಾಸಗಳ ಮೇಲೆ ಜಾಗತಿಕ ಗಮನ ಹರಿಸುವಿಕೆಯಿಂದ ಈ ವಲಯವು ಹೂಡಿಕೆಯಲ್ಲಿ ತೀವ್ರ ಏರಿಕೆಯನ್ನು ಕಂಡಿದೆ.

ತಾಂತ್ರಿಕ ಪ್ರಗತಿಯಿಂದ AI ತಂತ್ರಜ್ಞಾನ ಕಲಿಕೆ ಮತ್ತು ಕೃಷಿಯಲ್ಲಿ IOT ಅಪ್ಲಿಕೇಷನ್ ಗಳ ಅಸಮರ್ಥತೆಗಳನ್ನು ಪರಿಹರಿಸಲು ಸಹಾಯ ಮಾಡುತ್ತಿದ್ದು,
ರಫ್ತು ಅವಕಾಶಗಳಿಂದ ಜಾಗತಿಕವಾಗಿ ಭಾರತೀಯ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಉತ್ಪಾದನೆ ಮತ್ತು ಪೂರೈಕೆಯಲ್ಲಿ ಸ್ಟಾರ್ಟ್ ಅಪ್ ಗಳಿಗೆ ಪ್ರೋತ್ಸಾಹ ಸಿಗುತ್ತದೆ ಎಂದು ಸಚಿವರು ತಿಳಿಸಿದರು..

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಅಭಿವೃದ್ಧಿಪಡಿಸಿದ 50 ಕ್ಕೂ ಹೆಚ್ಚು ಸ್ಟಾರ್ಟ್ ಅಪ್ ಗಳ ವಸ್ತು ಪ್ರದರ್ಶನವನ್ನು ಸಚಿವರು ಇದೇ ವೇಳೆ ವೀಕ್ಷಿಸಿ ಮಾಹಿತಿ ಪಡೆದುಕೊಂಡರು

ಕಾರ್ಯಕ್ರಮದಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿ ಸುರೇಶ್, ಕೃಷಿ ವಿವಿಯ ನಿರ್ದೇಶಕರುಗಳು ಸೇರಿದಂತೆ ಇತರ ಗಣ್ಯರು ಭಾಗವಹಿಸಿದ್ದರು..

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!