ದೊಡ್ಡಬಳ್ಳಾಪುರ (Doddaballapura): ಚಿರತೆಯೊಂದು ಗ್ರಾಮಕ್ಕೆ ನುಗ್ಗಿ ಕರುವೊಂದನ್ನು ಕೊಂದು ಹಾಕಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಮಾಡೇಶ್ವರ ಗ್ರಾಮಕ್ಕೆ ನುಗ್ಗಿರುವ ಚಿರತೆ, ರೈತ ಕೆಂಪಣ್ಣ ಎಂಬುವವರು ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಕರುವನ್ನು ಕೊಂದುಹಾಕಿದೆ.
ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಕ್ಕೆ ನುಗ್ಗಿ ಪದೇ ಪದೇ ಸಾಕುಪ್ರಾಣಿಗಳನ್ನು ಕೊಲ್ಲುತ್ತಿರುವ ಚಿರತೆಯನ್ನು ಸೆರೆಹಿಡಿಯಲು ಗ್ರಾಮಸ್ಥರ ಆಗ್ರಹಿಸಿದ್ದಾರೆ.
ತಾಲೂಕಿನಲ್ಲಿ ಚಿರತೆಗಳ ಹಾವಳಿ ಮತ್ತೆ ವ್ಯಾಪಕವಾಗಿ ಕೇಳಿಬರುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಬೋನ್ ಅಳವಡಿಸಿ ಚಿರತೆಗಳನ್ನು ಸೆರೆ ಹಿಡಿಯುತ್ತಲೇ ಇದ್ದಾರೆ. ಆದಾಗ್ಯೂ ಮತ್ತೆ ಮತ್ತೆ ಚಿರತೆ ದಾಳಿ ಪ್ರಕರಣಗಳು ಸಂಭವಿಸುತ್ತಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)