Break the secret discussion.. Gram Panchayat meeting live broadcast

ಮನೆ ಕಟ್ಟುವವರಿಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ…!| state government

ಬೆಂಗಳೂರು: ರಾಜ್ಯ ಸರ್ಕಾರವು (state government) ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರಗಳಲ್ಲಿ ಮರಳು ಸಿಗಲಿ ಎಂಬ ಉದ್ದೇಶದಿಂದ ಮರಳು ನೀತಿ ಜಾರಿಗೊಳಿಸಿದ್ದು, ಆಯವ್ಯಯದಲ್ಲಿ ಘೋಷಿಸಿರುವಂತೆ ಈ ಸಮಗ್ರ ಮರಳು ನೀತಿಯನ್ನು ಗಣಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್‌.ಮಲ್ಲಿಕಾರ್ಜುನ್‌ ತಿಳಿಸಿದ್ದಾರೆ.

ಈ ಸಂಬಂಧ ಮಾದ್ಯಮ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಅವರು, ರಾಜ್ಯ ಸರ್ಕಾರದ ಮರಳು ನೀತಿಯಂತೆ ಈಗಾಗಲೇ ಸಾರ್ವಜನಿಕ ಹಾಗೂ ಸ್ಥಳೀಯ ಸರ್ಕಾರಿ ಕಾಮಗಾರಿಗಳಿಗೆ ನಿಗದಿತ ಕಡಿಮೆ ಬೆಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮರಳು ಪೂರೈಸಲು I, II ಮತ್ತು III ನೇ ಶ್ರೇಣಿಯ ಹಳ್ಳ ಪಾತ್ರಗಳಲ್ಲಿ ಲಭ್ಯವಿರುವ ಮರಳನ್ನು ತೆಗೆದು ವಿಲೇವಾರಿ ಮಾಡುವ ಜವಬ್ದಾರಿಯನ್ನು ಆಯಾ ಗ್ರಾಮ ಪಂಚಾಯಿತಿಗಳಿಗೆ ವಹಿಸಿದೆ.

ಪ್ರತಿ ಮೆ.ಟನ್‌ ಮರಳಿನ ಮಾರಾಟ ಬೆಲೆಯನ್ನು ರೂ.300/-ಗಳನ್ನು ನಿಗದಿಪಡಿಸಲಾಗಿದೆ. ಮತ್ತು ಸದರಿ ವ್ಯವಸ್ಥೆಯು ಪ್ರಸ್ತುತ ಜಾರಿಯಲ್ಲಿರುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

IV, V ಮತ್ತು ಉನ್ನತ ಶ್ರೇಣಿಗಳ ಹಳ್ಳ / ನದಿಗಳ ಪಾತ್ರಗಳಲ್ಲಿ ಲಭ್ಯವಿರುವ ಮರಳು ಬ್ಲಾಕ್‌ ಗಳನ್ನು ಸರ್ಕಾರದಿಂದ ಅಧಿಸೂಚಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ ಸರ್ಕಾರಿ ಇಲಾಖೆಗಳಿಗೆ ಮರಳು ಗಣಿಗಾರಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಇದೆ ರೀತಿ ಸಾರ್ವಜನಿಕ/ ಖಾಸಗಿ ಸಂಸ್ಥೆಗಳಿಗೆ ಟೆಂಡರ್ ಮೂಲಕ ಮರಳು ಬ್ಲಾಕ್‌ಗಳನ್ನು ವಿಲೇಪಡಿಸುವ ನಿಯಮದಲ್ಲಿ ತಿದ್ದುಪಡಿ ಮಾಡಲಾಗಿದೆ ಎಂದಿದ್ದಾರೆ.

ಈ ನೂತನ ನೀತಿಯಂತೆ ಮರಳು ಬ್ಲಾಕ್‌ಗಳ ಟೆಂಡರ್‌ನ್ನು ಆಯಾ ಜಿಲ್ಲಾ ಮರಳು ಸಮಿತಿಯಿಂದ ನಡೆಸಲಾಗುವುದು. ಜಿಲ್ಲಾವಾರು ಗುರುತಿಸಲಾಗುವ ಮರಳು ಬ್ಲಾಕ್‌ಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಇತರೆ ಸಾಮಾನ್ಯ ವರ್ಗದವರಿಗೆ ರೋಸ್ಟರ್‌ ಪದ್ಧತಿಯಡಿಯಲ್ಲಿ ಮೀಸಲಾತಿ ಕಲ್ಪಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯಾದ್ಯಂತ ಪ್ರತಿ ಮೆ.ಟನ್‌ ಮರಳು ಏಕ ರೂಪ ಮಾರಾಟ ದರ ರೂ. 850/- ನ್ನು ನಿಗದಿಪಡಿಸಲಾಗಿದೆ. ಸರ್ಕಾರವು ನಿಗದಿಪಡಿಸುವ ಮಾರಾಟ ಬೆಲೆಯ ಮೊತ್ತದ ಶೇಕಡ 50 ರಷ್ಟುನ್ನು Ceiling price ಎಂದು ಹಾಗೂ Ceiling Price ನ ಶೇಕಡ 60ರಷ್ಟನ್ನು Cut-off Price ಎಂದು ನಿಗದಿಪಡಿಸಲಾಗಿರುತ್ತದೆ.

Ceiling Price ಮತ್ತು Cut-off Price ಗೆ ಸಮನಾದ ಅಥವಾ ನಡುವೆ ಸಲ್ಲಿಸುವ ಕಡಿಮೆ ಟೆಂಡರ್‌ ಮೊತ್ತವನ್ನು ನಮೂದಿಸಿದವರನ್ನು ಯಶಸ್ವಿ ಬಿಡ್ಡುದಾರರೆಂದು ಪರಿಗಣಿಸಲಾಗುವುದು. ಒಂದಕ್ಕಿಂತ ಹೆಚ್ಚು ಟೆಂಡರ್‌ದಾರರು ಏಕ ರೂಪ ಟೆಂಡರ್‌ ದರವನ್ನು ನಮೂದಿಸಿದಲ್ಲಿ ಲಾಟರಿ ಮೂಲಕ ಯಶಸ್ವಿ ಬಿಡ್ಡುದಾರನನ್ನು ಆಯ್ಕೆ ಮಾಡಲಾಗುವುದು.

ಟೆಂಡರ್‌ ಪ್ರಕ್ರಿಯೆಯನ್ನು e-Portal ನಲ್ಲಿ ನಡೆಸಲಾಗುತ್ತಿದ್ದು, ಸದರಿ Portal ಮೂಲಕ ಆಸಕ್ತ ವ್ಯಕ್ತಿ/ಖಾಸಗಿ ಕಂಪನಿ/ಸಂಸ್ಥೆಯವರು ಅರ್ಜಿ ಸಲ್ಲಿಸಲು ಜಿಲ್ಲಾವಾರು ಅಧಿಸೂಚನೆ ಜಾರಿ ಮಾಡಲಾಗುವುದು ಎಂದು ಸಚಿವರು ವಿವರಿಸಿದ್ದಾರೆ.

ಈ ಸಂಬಂಧ ಸರ್ಕಾರದಿಂದ ಮಾರ್ಗಸೂಚಿ ಮತ್ತು ಟೆಂಡರ್‌ ಡಾಕ್ಯುಮೆಂಟ್‌ ನ್ನು ಎಲ್ಲಾ ಜಿಲ್ಲಾ ಕಛೇರಿಗಳಿಗೆ ನೀಡಲಾಗಿದ್ದು, ಸರ್ಕಾರದಿಂದ ಜಾರಿ ಮಾಡಿರುವ ಮರಳು ನೀತಿಯನ್ನು ಪರಿಣಾಮಕಾರಿಯಾಗಿ ಯಶಸ್ವಿಗೊಳಿಸಲು ನಿರ್ದೇಶಿಸಲಾಗಿದೆ ಎಂದು ಗಣಿ ಸಚಿವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಮಹಾವೀರ್, ಉಪನಿರ್ದೇಶಕರು, ಗಣಿ ಇಲಾಖೆ : +919972111002 ಇವರನ್ನು ಸಂಪರ್ಕಿಸಬಹುದು.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!