ದೊಡ್ಡಬಳ್ಳಾಪುರ (Doddaballapura): ಸಿಮೆಂಟ್ ಬಲ್ಕರ್ ಲಾರಿ ಹಾಗೂ ಸ್ಕೂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಓರ್ವ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ತಾಲೂಕಿನ ರಾಜ್ಯ ಹೆದ್ದಾರಿ ಗುಂಡಮಗೆರೆ ಕ್ರಾಸ್ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.
ಗೌರಿಬಿದನೂರು ಕಡೆಯಿಂದ ಇಬ್ಬರು ಸ್ಕೂಟರ್ ಸವಾರರು ಬರುತ್ತಿದ್ದ ವೇಳೆ ಸಿಮೆಂಟ್ ಬಲ್ಕರ್ ಮುಖಾಮುಖಿ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ 25 ವರ್ಷದ ಓರ್ವ ಸ್ಥಳದಲ್ಲಿಯೇ ಸಾವನಪ್ಪಿದ್ದು, ಮತ್ತೋರ್ವನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇವರನ್ನು ಬೆಟ್ಟ ಅಲಸೂರು ಗ್ರಾಮದವರು ಎನ್ನಲಾಗುತ್ತಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.