ಕಷ್ಟ ಗೊತ್ತಿರುವ ಹಳ್ಳಿಗಾಡಿನ ಮಕ್ಕಳು ಕೂಡ ವೈದ್ಯರಾಗಬೇಕು: ಸಿಎಂ ಸಿದ್ದರಾಮಯ್ಯ| Cmsiddaramaiah

ಬೆಂಗಳೂರು: ಕಷ್ಟ ಗೊತ್ತಿರುವ ಹಳ್ಳಿಗಾಡಿನ ಮಕ್ಕಳು ಕೂಡ ವೈದ್ಯರಾಗಬೇಕು ಎಂಬಾ ಆಶಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ವ್ಯಕ್ತಪಡಿಸಿದರು.

ಅವರು ಇಂದು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಆವರಣದಲ್ಲಿ 500 ಹಾಸಿಗೆಗಳ ಸಾಮರ್ಥ್ಯವುಳ್ಳ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ವೈದ್ಯರು ಕಾಯಿಲೆ ವಾಸಿ ಮಾಡಿದರೆ ಜನ ಸದಾ ನೆನೆಯುತ್ತಾರೆ. ಯಾವುದೇ ಕಾರಣಕ್ಕೂ ವೈದ್ಯರು ರೋಗಿಗಳನ್ನು ನಿರ್ಲಕ್ಷ್ಯ ಮಾಡದೇ ಜಾಗರೂಕತೆಯಿಂದ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ವೈದ್ಯರಿಗೆ ಕರೆ ನೀಡಿದರು.

ಬೌರಿಂಗ್ ಆಸ್ಪತ್ರೆ ಸುದೀರ್ಘ ಇತಿಹಾಸವನ್ನು ಹೊಂದಿರುವ ಆಸ್ಪತ್ರೆ. ಸಾವಿರಾರು ಜನರಿಗೆ ಆರೋಗ್ಯ ಸೇವೆಯನ್ನು ಒದಗಿಸಿದೆ. ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬೆಂಗಳೂರಿಗೆ ಮತ್ತೊಂದು ವೈದ್ಯಕೀಯ ಕಾಲೇಜಿನ ಅಗತ್ಯವನ್ನು ಮನಗಂಡು ಮತ್ತೊಂದು ವೈದ್ಯಕೀಯ ಕಾಲೇಜನ್ನು ಮಂಜೂರು ಮಾಡಿದೆ ಎಂದರು.

ಬೆಂಗಳೂರು ವೇಗವಾಗಿ ಬೆಳೆಯುತ್ತಿದ್ದು ಮತ್ತೊಂದು ವೈದ್ಯಕೀಯ ಕಾಲೇಜು ಆದರೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯೂ ಆಗಿ, ಸಾಮಾನ್ಯ ಜನರಿಗೆ, ಬಡವರಿಗೆ, ದಲಿತರಿಗೆ ಬಹಳಷ್ಟು ಉಪಯೋಗವಾಗುತ್ತದೆ ಎಂದು ಮನಗಂಡು ವೈದ್ಯಕೀಯ ಕಾಲೇಜನ್ನು ಮಂಜೂರು ಮಾಡಿದೆ. ಈಗ ಸುಸಜ್ಜಿತವಾದ ವೈದ್ಯಕೀಯ ಕಾಲೇಜು ನಿರ್ಮಾಣವಾಗಿದೆ ಎಂದರು.

ಎಲ್ಲರಿಗೂ ಬದುಕುವ ಜೀವಿಸುವ ಹಕ್ಕನ್ನು ಸಂವಿಧಾನ ನೀಡಿದೆ

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಾಗಿ ಬರುವವರು ಶ್ರೀಮಂತ ವರ್ಗದವರಲ್ಲ. ಸಾಮಾನ್ಯವಾಗಿ ಬಡವರು, ಕೆಳವರ್ಗದವರು ಮಾತ್ರ ಸರ್ಕಾರಿ ಆಸ್ಪತ್ರೆಗೆ ಬರುತ್ತಾರೆ. ಬಡವರು ದುಬಾರಿ ವೆಚ್ಚವನ್ನು ಕೊಟ್ಟು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸಾಧ್ಯವಿಲ್ಲ. ಅದಕ್ಕಾಗಿಯೇ ಸರ್ಕಾರಿ ಆಸ್ಪತ್ರೆಗಳು ಅಗತ್ಯವಿದೆ. ನನ್ನನ್ನೂ ಒಳಗೊಂಡಂತೆ ಬಹುತೇಕ ರಾಜಕಾರಣಿಗಳು ಸರ್ಕಾರಿ ಆಸ್ಪತ್ರೆಗೆ ಹೋಗುವುದಿಲ್ಲ ಎಂದ ಮುಖ್ಯಮಂತ್ರಿಗಳು ಹಣವಿರುವವರು ಎಲ್ಲಿಗೆ ಬೇಕಾದರೂ ಹೋಗಿ ಚಿಕಿತ್ಸೆ ಪಡೆಯಬಹುದು. ಆದರೆ ಬಡವರು ಎಲ್ಲಿಗೆ ಹೋಗಲು ಸಾಧ್ಯ? ಸಂವಿಧಾನದಲ್ಲಿ ಎಲ್ಲರಿಗೂ ಬದುಕುವ ಜೀವಿಸುವ ಹಕ್ಕಿದೆ ಎಂದು ಸ್ಪಷ್ಟವಾಗಿ ತಿಳಸಲಾಗಿದೆ. ರಾಜ್ಯದ ಏಳು ಕೋಟಿ ಜನರೂ ಆರೋಗ್ಯವಾಗಿರಬೇಕು ಎಂದು ಮುಖ್ಯಮಂತ್ರಿಗಳು ಹೇಳಿದರು.

ವಿದ್ಯಾರ್ಥಿಗಳು ಕಡ್ಡಾಯವಾಗಿ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು

ಹಿಂದೆಲ್ಲಾ ಸಕ್ಕರೆ ಕಾಯಿಲೆ, ರಕ್ತದೊತ್ತಡ ಶ್ರೀಮಂತರ ಕಾಯಿಲೆ ಎನ್ನುತ್ತಿದ್ದರು. ಈಗ ಬಡವರಿಗೆ ಹಾಗೂ ಸಣ್ಣ ವಯಸ್ಸನವರಿಗೂ ಬರಲು ಶುರುವಾಗಿದೆ. ಊಟದ ಕ್ರಮದಲ್ಲಿ ಬದಲಾವಣೆಯಾಗಿದ್ದು ದೈಹಿಕ ವ್ಯಾಯಾಮ ಕೂಡ ಇಲ್ಲವಾಗಿದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಕ್ರೀಡೆಗಳಲ್ಲಿ ಇರಲೇಬೆಕು. ಕ್ರೀಡಾಪಟುಗಳಿಗೂ ಸಾಮಾನ್ಯ ಜನರಿಗೂ ವ್ಯತ್ಯಾಸವನ್ನು ಸುಲಭವಾಗಿ ಗುರುತಿಸಬಹುದು. ಆರೋಗ್ಯ ಬಹಳ ಮುಖ್ಯ. ವಯಸ್ಸಿಗೆ ಎಂದು ವ್ಯಾಯಾಮವಿಲ್ಲದೇ, ಆಹಾರ ಪದ್ದತಿಯನ್ನು ಉತ್ತಮವಾಗಿಟ್ಟುಕೊಳ್ಳದೇ ಅನೇಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದೇವೆ ಎಂದರು.

ನನ್ನನ್ನು ವೈದ್ಯನಾಗಿ ನೋಡಬೇಕೆಂದು ನನ್ನ ತಂದೆಗೆ ಆಸೆಯಿತ್ತು. ಆದರೆ ನನಗೆ ಉತ್ತಮ ಅಂಕಗಳು ಬರದ ಕಾರಣ ನಾನು ವಕೀಲನಾದೆ. ನನಗೆ ವೈದ್ಯಕೀಯ ಸೀಟು ಸಿಕ್ಕಿದ್ದಿದ್ದರೆ ನಾನು ಮುಖ್ಯಮಂತ್ರಿಯೇ ಆಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಎಲ್ಲಾ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸ್ಥಾಪನೆಯ ಗುರಿ

ಹಿಂದೆ ಹಣಕಾಸು ಮಂತ್ರಿಯಾಗಿದ್ದಾಗ ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸ್ಥಾಪಿಸುವ ತೀರ್ಮಾನ ಮಾಡಲಾಗಿತ್ತು. ಈಗ ಪ್ರಸ್ತುತ 22 ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳನ್ನು ಸ್ಥಾಪಿಸಲಾಗಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯಿರುವುದರಿಂದ ಹಾಗೂ ಎಲ್ಲ ಸಮುದಾಯದವರಿಗೂ ಪ್ರಾತಿನಿಧ್ಯ ದೊರಕಲು ಇಂತಹ ಆಸ್ಪತ್ರೆಗಳಲ್ಲಿ ವೈದ್ಯರು ಕಾರ್ಯನಿರ್ವಹಿಸಲು ಮೀಸಲಾತಿ ವ್ಯವಸ್ಥೆಯಾಗುತ್ತದೆ. ಸೂಕ್ತ ಅವಕಾಶ ದೊರೆತರೆ, ಎಲ್ಲರೂ ಜೀವನದಲ್ಲಿ ಅಭಿವೃದ್ಧಿ ಹೊಂದಬಹುದಾಗಿದೆ. ಸಮಾಜದಲ್ಲಿ ಅಶಕ್ತರಿಗೆ ಬದುಕುವ ಅವಕಾಶವನ್ನು ಸರ್ಕಾರ ಕಲ್ಪಿಸುತ್ತಿದೆ ಎಂದರು.

ಆಸ್ಪತ್ರೆಯಲ್ಲಿ ಉತ್ತಮ ಆರೋಗ್ಯ ಸೇವೆ ದೊರೆಯಬೇಕು

300 ಕೋಟಿ ರೂ. ವೆಚ್ಚದಲ್ಲಿ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯನ್ನು ಶಂಕುಸ್ಥಾಪನೆ ಮಾಡಿ, ನಮ್ಮ ಅವಧಿಯಲ್ಲಿಯೇ ಉದ್ಘಾಟನೆಯನ್ನೂ ನೆರವೇರಿಸಲಾಗುವುದು. ಉತ್ತಮ ಜೀವನ ಶೈಲಿ ಹಾಗೂ ಆಹಾರ ಪದ್ಧತಿ ಪಾಲಿಸುವುದರಿಂದ ಸದೃಢ ಆರೋಗ್ಯವನ್ನು ಪಡೆಯಬಹುದಾಗಿದೆ.

ಕ್ಯಾನ್ಸರ್ ರೋಗಕ್ಕೆ ಆರಂಭಿಕ ಹಂತದಲ್ಲಿದ್ದರೆ ಗುಣಪಡಿಸಬಹುದಾಗಿದೆ. ವೈಜ್ಞಾನಿಕ ಸಂಶೋಧನೆಗಳಿಂದ ಅನೇಕ ಕಾಯಿಲೆಗಳಿಗೆ ಔಷಧಿ ಕಂಡುಹಿಡಿಯಲಾಗುತ್ತಿದೆ. ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ನಿರ್ವಹಣೆ, ಸ್ವಚ್ಛತೆ ಉತ್ತಮವಾಗಿರಬೇಕು, ಉತ್ತಮ ಆರೋಗ್ಯ ಸೇವೆ ದೊರೆಯುವಂತಾಗಬೇಕು.

ಉತ್ತಮ ಜನಸಂಪರ್ಕ ಹೊಂದುವುದರಿಂದ ಆಸ್ಪತ್ರೆಗೆ ಸಾರ್ವಜನಿಕರಿಂದ ದೇಣಿಗೆಯೂ ದೊರೆತಾಗ, ಗುಣಮಟ್ಟದ ಸೇವೆಗಳನ್ನು ಆಸ್ಪತ್ರೆ ನೀಡಲು ಸಹಾಯವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಜಸೀರ್ ಅಹ್ಮದ್, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಮೊಹಮ್ಮದ್ ಮೊಹಶೀನ್,ರಾಜೀವ್ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದ ಕುಲಪತಿ ರಮೇಶ್, ನಿರ್ದೇಶಕರಾದ ಮನೋಜ್ ಮೊದಲಾದವರು ಉಪಸ್ಥಿತರಿದ್ದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]