ಕರ್ನಾಟಕದ ಸೆಮಿಕಂಡಕ್ಟರ್‌ ಕ್ಷೇತ್ರದಲ್ಲಿ ಎನ್‌ಎಕ್ಸ್‌ಪಿ ರೂ.8,400 ಕೋಟಿ ಹೂಡಿಕೆ; ಸಚಿವ ಎಂ.ಬಿ.ಪಾಟೀಲ| Karnataka 2025

ಹೇಗ್‌ (ನೆದರ್‌ಲ್ಯಾಂಡ್ಸ್‌): ʼಕರ್ನಾಟಕದ (Karnataka 2025) ಸೆಮಿಕಂಡಕ್ಟರ್‌ ವಲಯದಲ್ಲಿ ಮುಂದಿನ ಐದು ವರ್ಷಗಳಲ್ಲಿ ₹ 8,400 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವುದಾಗಿ ಸೆಮಿಕಂಡಕ್ಟರ್‌ ತಯಾರಿಸುವ ಜಾಗತಿಕ ಪ್ರಮುಖ ಕಂಪನಿಗಳಲ್ಲಿ ಒಂದಾಗಿರುವ ನೆದರ್‌ಲ್ಯಾಂಡ್ಸ್‌ನ ಎನ್‌ಎಕ್ಸ್‌ಪಿ ವಾಗ್ದಾನ ಮಾಡಿದೆʼ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಹೇಳಿದ್ದಾರೆ.

ಇನ್ವೆಸ್ಟ್‌ ಕರ್ನಾಟಕ-2025ಕ್ಕೆ ಹೂಡಿಕೆದಾರರನ್ನು ಆಕರ್ಷಿಸಲು ಯುರೋಪ್‌ ಪ್ರವಾಸದಲ್ಲಿ ಇರುವ ಸಚಿವರ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗದ ಜೊತೆಗಿನ ಭೇಟಿ ಸಂದರ್ಭದಲ್ಲಿ ಈ ಭರವಸೆ ದೊರೆತಿದೆ.

ʼಸೆಮಿಕಂಡಕ್ಟರ್‌ ಕ್ಷೇತ್ರದಲ್ಲಿನ ಸಂಶೋಧನೆ ಹಾಗೂ ಅಭಿವೃದ್ಧಿಗೆ (ಆರ್‌ಆ್ಯಂಡ್‌ಡಿ) ಕಂಪನಿಯು ಬೆಂಗಳೂರಿನಲ್ಲಿ ₹ 8,400 ಕೋಟಿ ಹೂಡಿಕೆ ಮಾಡುವುದಾಗಿ ಎನ್‌ಎಕ್ಸ್‌ಪಿ-ಯ ಕಾರ್ಯನಿರ್ವಾಹಕ ನಿರ್ದೇಶಕ ಮೌರಿಸ್‌ ಗೆರೆಟ್ಸ್‌ ಅವರು ಭರವಸೆ ನೀಡಿದ್ದಾರೆ.

ನವೋದ್ಯಮ ಹಾಗೂ ಮಾನವ ಸಂಪನ್ಮೂಲದ ಕೌಶಲ ವೃದ್ಧಿ ಕ್ಷೇತ್ರದಲ್ಲಿ ಪಾಲುದಾರಿಕೆ ಮಾಡಿಕೊಳ್ಳುವುದಕ್ಕೂ ಉತ್ಸುಕತೆ ತೋರಿಸಿದ್ದಾರೆʼ ಎಂದು ಸಚಿವ ಪಾಟೀಲ ತಿಳಿಸಿದ್ದಾರೆ.

ಜಾಗತಿಕ ವಾಣಿಜ್ಯ ಬಾಂಧವ್ಯ ವೃದ್ಧಿ ನಿಟ್ಟಿನಲ್ಲಿ ರಾಜ್ಯದ ನಿಯೋಗವು ಫಿಲಿಪ್ಸ್‌ ಕಂಪನಿ ಜೊತೆಗೂ ಸಮಾಲೋಚನೆ ನಡೆಸಿತು. ಬೆಂಗಳೂರಿನ ಕ್ಯಾಂಪಸ್‌ನಲ್ಲಿ 2023ರಲ್ಲಿ ₹445 ಕೋಟಿ ಹೂಡಿಕೆ ಮಾಡಿರುವ ಈ ಕಂಪನಿಯು ರಾಜ್ಯದಲ್ಲಿ ತಯಾರಿಕಾ ಘಟಕ ಸ್ಥಾಪಿಸಲು ಮುಂದೆ ಬಂದರೆ ಅಗತ್ಯ ನೆರವು ಕಲ್ಪಿಸುವುದಾಗಿ ನಿಯೋಗವು ಭರವಸೆ ನೀಡಿತು.

ರಾಜ್ಯದ ನಿಯೋಗವು ದೀಪ / ಬೆಳಕಿನ ಉತ್ಪನ್ನಗಳ ಜಾಗತಿಕ ಪ್ರಮುಖ ಕಂಪನಿ ಸಿಗ್ನಿಫಿ (ಈ ಹಿಂದಿನ ಫಿಲಿಪ್ಸ್‌ ಲೈಟಿಂಗ್‌) ಪ್ರಮುಖರನ್ನು ಭೇಟಿಯಾಗಿ ದೇಶಿ ಮತ್ತು ರಫ್ತು ಮಾರುಕಟ್ಟೆ ಉದ್ದೇಶಕ್ಕೆ ರಾಜ್ಯದಲ್ಲಿ ತಯಾರಿಕಾ ಘಟಕ ಸ್ಥಾಪಿಸುವುದರ ಪ್ರಯೋಜನಗಳನ್ನು ಮನದಟ್ಟು ಮಾಡಿಕೊಟ್ಟಿತು.

ಹೈನೆಕೆನ್‌ ಜೊತೆಗಿನ ಭೇಟಿಯಲ್ಲಿ ಕರ್ನಾಟಕದಲ್ಲಿ ತಯಾರಿಕೆಗೆ ಸಂಬಂಧಿಸಿದ ಹೂಡಿಕೆ ಮಾಡುವುದರ ಪ್ರಯೋಜನಗಳನ್ನು ವಿವರಿಸಲಾಗಿದೆ.
ನೆದರಲ್ಯಾಂಡ್ಸ್‌ನಲ್ಲಿ ನಡೆದ ʼಇನ್ವೆಸ್ಟ್‌ ಕರ್ನಾಟಕʼದ ರೋಡ್‌ಷೋದಲ್ಲಿ ನಾವೀನ್ಯತೆ, ಸೆಮಿಕಂಡಕ್ಟರ್ಸ್‌, ನವೀಕರಿಸಬಹುದಾದ ಇಂಧನ ಮತ್ತು ತಯಾರಿಕಾ ವಲಯದಲ್ಲಿನ ಕರ್ನಾಟಕದಲ್ಲಿ ಇರುವ ಸದವಕಾಶಗಳನ್ನು ಸ್ಥಳೀಯ ಉದ್ಯಮಿಗಳಿಗೆ ಪರಿಚಯಿಸಲಾಯಿತು.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್.ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಭಾಗವಹಿಸಿದ್ದರು.

ರಾಜಕೀಯ

ಸುಪ್ರೀಂ ಕೋರ್ಟ್ ಆದೇಶಕ್ಕೆ ಮಣಿದ ಚುನಾವಣೆ ಆಯೋಗ: ಡಿಲೀಟ್ ಆಗಿದ್ದ 65 ಲಕ್ಷ ಮತದಾರರ ವಿವರ ಪ್ರಕಟ

ಸುಪ್ರೀಂ ಕೋರ್ಟ್ ಆದೇಶಕ್ಕೆ ಮಣಿದ ಚುನಾವಣೆ ಆಯೋಗ: ಡಿಲೀಟ್ ಆಗಿದ್ದ 65 ಲಕ್ಷ

ಸುಪ್ರೀಂ ಕೋರ್ಟ್ (Supreme Court) ಕಟ್ಟುನಿಟ್ಟಾದ ಆದೇಶದ ನಂತರ ಬಿಹಾರದಲ್ಲಿ ಕರಡು ಪಟ್ಟಿಯಿಂದ ತೆಗೆದುಹಾಕಲಾದ 65 ಲಕ್ಷ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ (Election Commission) ಬಿಡುಗಡೆ ಮಾಡಿದೆ.

[ccc_my_favorite_select_button post_id="112766"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!