ಶಾಲಾ ಮಕ್ಕಳಿಗೆ ನೀಡುವ ಚಿಕ್ಕಿಯಲ್ಲಿ ಮರಳಿನಂತಹ ಕಲ್ಲು..! ಅಧಿಕಾರಿಯ ಉತ್ತರ ಏನ್ ಗೊತ್ತಾ..!?| BRD

ಬೆಂಗಳೂರು ಗ್ರಾಮಾಂತರ ಜಿಲ್ಲೆ: (BRD) ಜಿಲ್ಲೆಯಾದ್ಯಂತ ನಿವೇಶನ ರಹಿತ ಮತ್ತು ವಸತಿ ರಹಿತ ಫಲಾನುಭವಿಗಳ ಪಟ್ಟಿ ಸಿದ್ಧ ಪಡಿಸಲಾಗದ್ದು ಹಂತ ಹಂತವಾಗಿ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 533.38 ಎಕರೆ ಆಶ್ರಯ ಯೋಜನೆಯಡಿ ಜಮೀನು ಗುರ್ತಿಸಲಾಗಿದ್ದು 480 ಎಕರೆ ನಿವೇಶನ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ವಸತಿ ನಿಗಮದಿಂದ 64.18 ಎಕರೆಯಲ್ಲಿ 1694 ನಿವೇಶನಗಳ ಅಭಿವೃದ್ಧಿಗೆ ಆನುದಾನ ಬಿಡುಗಡೆ ಆಗಿದ್ದು 292 ನಿವೇಶನಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಕ್ಯಾಬಿನೆಟ್ ಸಭೆಯಲ್ಲಿ ನಿವೇಶನಕ್ಕೆ ಸಂಬಂಧಿಸಿದಂತೆ ಚರ್ಚಿಸಿ ನಿವೇಶನ ಅಭಿವೃದ್ಧಿಗೆ ಸಂಬಂಧಿಸಿ ಆನುದಾನ ಬಿಡುಗಡೆಗೆ ಕ್ರಮ ವಹಿಸಲಾಗುವುದು ಎಂದರು.

ಜೆ.ಜೆ.ಎಂ.ಯೋಜನೆಯಡಿ ಮನೆ ಮನೆಗೂ ನಳ ಸಂಪರ್ಕ ಕಲ್ಪಿಸಲು ರಸ್ತೆ ಅಗೆದಿದ್ದು ಮುಚ್ಚದೇ ಹಾಗೆ ಬಿಟ್ಟಿರುವುದು, ನೀರು ಸರಬರಾಜು ಪೈಪ್ ಗಳ ಗುಣಮಟ್ಟ ಕಳಪೆ ಆಗಿದೆ ಎಂಬ ದೂರಿನ ಅನ್ವಯ, ಯಾವ ಯಾವ ಹಳ್ಳಿಗಳಲ್ಲಿ ಈ ರೀತಿಯ ಅವ್ಯವಸ್ಥೆ ಆಗಿದೆ ಎಂಬುದರ ಮಾಹಿತಿ ಪಡೆದೆ ಖದ್ದಾಗಿ ಅಧಿಕಾರಿಗಳು ಸ್ಥಳ ಪರಶೀಲನೆ ನಡೆಸಿ ಅವ್ಯವಸ್ಥೆಯನ್ನು ಸರಿಪಡಿಸಿ ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ದೃಷ್ಟಿಯಿಂದ ರಾಜ್ಯಾದ್ಯಂತ ಕೆ.ಪಿ.ಎಸ್ ಶಾಲೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಕೆ.ಪಿ.ಎಸ್ ಶಾಲೆಗಳಿಗೆ ಅವಶ್ಯವಿರುವ ಸೌಕರ್ಯಗಳ ಬಗ್ಗೆ ತಾಲ್ಲೂಕು ಬಿ.ಇ.ಒ ಗಳು ಶಾಲೆಗಳಿಗೆ ಖುದ್ದಾಗಿ ಭೇಟಿ ನೀಡಿ ಯೋಜನೆ ಸಿದ್ಧಪಡಿಸಿ. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ನೀಡಲು ಶಿಕ್ಷಕರು ಹೆಚ್ಚು ಶ್ರಮ ವಹಿಸಬೇಕಿದೆ. ಖಾಸಗಿ ಶಾಲೆಗಳಲ್ಲಿ ಸಿಗುವ ಎಲ್ಲ ಸೌಲಭ್ಯ ಸರ್ಕಾರಿ ಶಾಲೆಗಳಲ್ಲಿ ಸಿಗುವಂತೆ ಮಾಡಬೇಕು. ಸಿ.ಆರ್.ಪಿ./ ಬಿ.ಆರ್.ಪಿ. ಗಳು ಶಾಲೆಗಳಿಗೆ ಹೆಚ್ಚಿನ ಭೇಟಿ ನೀಡಿ ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕೆಂದರು.

ನೆಲಮಂಗಲ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕೆ ನೆಲಮಂಗಲ ಶಾಸಕರ ಒತ್ತಾಯ.

ನೆಲಮಂಗಲ ವ್ಯಾಪ್ತಿಯಲ್ಲಿ ಎರಡು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗಲಿದ್ದು ನೆಲಮಂಗಲ ತುಮಕೂರು ಹೈವೇ ಯಲ್ಲಿ ಪ್ರತಿ ದಿನ ಸಾಕಷ್ಟು ಅಪಘಾತಗಳು ಸಂಭವಿಸುತ್ತಿವೆ. ಇದಕ್ಕೆ ಮುಖ್ಯ ಕಾರಣ ಸರಿಯಾದ ಕೆಳ ಸೇತುವೆ(ಅಂಡರ್ ಪಾಸ್) ಇಲ್ಲದಿರುವುದು. ಸಾಕಷ್ಟು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದ್ದರು ಯಾವುದೇ ಪ್ರಯೋಜನವಾಗಿಲ್ಲ.

ಕಸದ ಸಮಸ್ಯೆ ಕೂಡ ಹೆಚ್ಚಾಗಿದ್ದು ಕಸ ತೆರವುಗೊಳಿಸಬೇಕು. ಅಪಘಾತಗಳನ್ನು ತಪ್ಪಿಸಲು ಅಂಡರ್ ಪಾಸ್ ನಿರ್ಮಿಸುವಂತೆ ಶಾಸಕರು ಸಚಿವರಲ್ಲಿ ಮನವಿ ಮಾಡಿದರು. ಸಚಿವರು ಮನವಿಗೆ ಸ್ಪಂದಿಸಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದರು.

ನೆಲಮಂಗಲ ಶಾಸಕರು ನಾನು ಚಿಕ್ಕಿ ತಿಂದಿದ್ದೇನೆ ಮರಳಿನಂತಹ ಕಲ್ಲುಗಳಿರುತ್ತವೆ ಎಂದಾಗ ಅಧಿಕಾರಿ ಪ್ರತಿಕ್ರಿಯಿಸಿ ಒಮ್ಮೊಮ್ಮೆ ಬೆಲ್ಲದಲ್ಲಿ ಕಲ್ಲುಗಳಿದ್ದಾಗ ಹಾಗೆ ಆಗಿದೆ ಎಂದರು.

ಅರಣ್ಯ ಇಲಾಖೆಯ ಅಧಿಕಾರಿ ಮಾತನಾಡಿ, ಜಿಲ್ಲೆಯ 18 ಕಿಮೀ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಿಡ ನೆಡಲಾಗುವುದೆಂದರು ಹಾಗೂ ಬೆಸ್ಕಾಂ ನವರು ವಿದ್ಯುತ್ ಕಂಬಗಳನ್ನು ಅರಣ್ಯ ಪ್ರದೇಶದ ಅಂಚಿನಲ್ಲಿ ನೆಡುತ್ತಾರೆ ಮತ್ತೆ ಅವುಗಳನ್ನು ತೆರವುಗೊಳಿಸಲು ನಾವೇ ಹಣ ಕಟ್ಟಬೇಕೆಂದರು.

ಪಿ.ಎಂ. ಪೋಷಣ್ ಯೋಜನೆಯಡಿ ಮಕ್ಕಳಿಗೆ 6 ದಿನ ಮೊಟ್ಟೆ ನೀಡಲಾಗುತಿದ್ದು, ಶೇ,81 ರಷ್ಟು ಮಕ್ಕಳಿಗೆ ಮೊಟ್ಟೆ, 21 ಶೇ ಮಕ್ಕಳಿಗೆ ಚಿಕ್ಕಿ ಬಾಳೆಹಣ್ಣು ವಿತರಿಸಲಾಗುತ್ತಿದೆ ಎಂದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್ ರವಿ, ಶಾಸಕ ಧೀರಜ್ ಮುನಿರಾಜು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿಸಿ ಜಾಫರ್, ಜಿಲ್ಲಾಧಿಕಾರಿ ಡಾ. ಶಿವಶಂಕರ್ ಎನ್ , ಜಿಪಂ ಸಿಇಒ ಡಾ.ಕೆ.ಎನ್ ಅನುರಾಧ, ಡಿಎಫ್ಒ ಸರೀನಾ , ಎಎಸ್ಪಿ ನಾಗರಾಜು, ಡಿವೈಎಸ್ಪಿ ರವಿ, ಎಸಿ ದುರ್ಗಾಶ್ರಿ , ಜಿಪಂ ಉಪ ಕಾರ್ಯದರ್ಶಿ ಟಿ.ಕೆ ರಮೇಶ್ ಸೇರಿದಂತೆ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ‌ ಸದಸ್ಯರು, ಕೆಡಿಪಿ ಸದಸ್ಯರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

LPG ವ್ಯತ್ಯಯ; ಬಾಯಿಬಿಡದ ಕೇಂದ್ರ ಸರ್ಕಾರ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

LPG ವ್ಯತ್ಯಯ; ಬಾಯಿಬಿಡದ ಕೇಂದ್ರ ಸರ್ಕಾರ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

"ಅನಿಲ ಸಿಲಿಂಡರ್ ಗಳು (LPG) ಸರಿಯಾಗಿ ದೊರೆಯದೆ ಹೋಟೆಲ್ ಉದ್ದಿಮೆ ಮುಚ್ಚುವ ಹಂತಕ್ಕೆ ಬಂದಿದೆ. ದೇಶದಲ್ಲಿ ಸಮಸ್ಯೆ ತಲೆದೋರಿದೆ. ಆದರೂ ಕೇಂದ್ರ ಸರ್ಕಾರ ಬಾಯಿಬಿಡುತ್ತಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು

[ccc_my_favorite_select_button post_id="120126"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!