ದೊಡ್ಡಬಳ್ಳಾಪುರ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ Doddaballapura ತಾಲೂಕಿನ ಕೆಸ್ತೂರು ಗೇಟ್ ಬಳಿ ಸಂಭವಿಸಿದೆ.
ಮೃತ ದುರ್ದೈವಿಯನ್ನು ಕೆಸ್ತೂರು ನಿವಾಸಿ 50 ವರ್ಷದ ನರಸಿಂಹಮೂರ್ತಿ ಎನ್ನಲಾಗುತ್ತಿದೆ.
ಇಂದು (ಡಿ.05) ಬೆಳಗ್ಗೆ ವಾಕಿಂಗ್ ಎಂದು ನರಸಿಂಹಮೂರ್ತಿ ಬರುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ.
ಬುಧವಾರ ಬೆಳಗ್ಗೆಯಿಂದೀಚೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸಂಭವಿಸಿದ ಮೂರನೇ ಅಪಘಾತ ಇದಾಗಿದ್ದು, ಮೂವರು ಸಾವನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ.