ಹಾಸನ: ಕಾಂಗ್ರೆಸ್ ಸರ್ಕಾರದ ಜನಕಲ್ಯಾಣ ಸಮಾವೇಶಕ್ಕೆ ತೆರಳುತ್ತಿದ್ದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರ ಕಾರು ಅಪಘಾತಕ್ಕೀಡಾಗಿದೆ (Accident). ಹೆಚ್ಚಿನ ಅನಾಹುತ ಆಗಿಲ್ಲ ಎಂಬುದಾಗಿ ವರದಿಯಾಗಿದೆ.
ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಮುನಿಯಪ್ಪ ಅವರಿದ್ದ ಕಾರಿಗೆ ಹಿಂಭಾಗ ಡ್ಯಾಮೇಜ್ ಆಗಿದೆ.
ಹಿಂದೆಯಿಂದ ಬಂದ ಕಾರು ಸಚಿವರಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯ ಆಗಿಲ್ಲ.
ಕೆ.ಹೆಚ್ ಮುನಿಯಪ್ಪ ಅವರು ಬೇರೆ ವಾಹನದಲ್ಲಿ ಹಾಸನ ಸಮಾವೇಶಕ್ಕೆ ತೆರಳಿದ್ದಾರೆ ಎಂದು ತಿಳಿದು ಬಂದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.