ಬಸವಣ್ಣ, ಬುದ್ಧನ ನಂತರ ಸಮಾನತೆಗೆ ಹೋರಾಡಿದವರು ಅಂಬೇಡ್ಕರ್; ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

ಬೆಂಗಳೂರು: ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಧಾನಸೌಧ ದ ಮುಂಭಾಗ ಇರುವ ಸಂವಿಧಾನಶಿಲ್ಪಿ ಭಾರತ ರತ್ನ ಮಹಾ ಮಾನವತಾವಾದಿ ಬಾಬಾ ಸಾಹೇಬ್ ಡಾ ll ಬಿಆರ್ ಅಂಬೇಡ್ಕರ್ ರವರ 68ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನದಂದು ಪುಷ್ಪಾರ್ಚನೆ ಮೂಲಕ ಅವರನ್ನು ಗೌರವಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು 1956 ಡಿಸೆಂಬರ್ 6 ರಂದು ನಮ್ಮನ್ನೆಲ್ಲಾ ಅಗಲಿದರು. ಆ ದಿನವನ್ನೇ ಪರಿನಿರ್ವಾಣ ದಿನಾಚರಣೆ ಎಂದು ಆಚರಿಸಲಾಗುತ್ತದೆ ಎಂದರು

ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನ ನೀಡಿದ್ದಾರೆ

ಅವರು ತಮ್ಮ ಬದುಕನ್ನು ಸಾಮಾಜಿಕ ಹೋರಾಟದಲ್ಲಿ ಹಾಗೂ ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡರು. ಅಂಬೇಡ್ಕರ್ ಅವರು ಈ ದೇಶಕ್ಕೆ ಹಾಗೂ ನಮ್ಮ ಸಾಮಾಜಿಕ ಬದುಕಿಗೆ ಅಗತ್ಯವಾದಂತಹ ಸಂವಿಧಾನವನ್ನು ಕೊಟ್ಟಿದ್ದಾರೆ. ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನವೆಂದು ನಮ್ಮ ಸಂವಿಧಾನ ಖ್ಯಾತಿ ಪಡೆದಿದೆ. ಸಂವಿಧಾನದ ಶ್ರೇಷ್ಠತೆ ತಿಳಿಯಬೇಕಾದರೆ ಒಳ್ಳೆಯವರ ಕೈಯಲ್ಲಿ ಅನುಷ್ಟಾನವಾಗಬೇಕು. ಕೆಟ್ಟವರ ಕೈಗೆ ಹೋದರೆ ಕೆಟ್ಟದಾಗುತ್ತದೆ ಎಂದು ಅಂಬೇಡ್ಕರ್ ಅವರು ಸ್ಪಷ್ಟವಾಗಿ ಈ ದೇಶದ ಜನರಿಗೆ ಎಚ್ಚರಿಕೆಯನ್ನು ಕೊಟ್ಟಿದ್ದರು ಎಂದರು.

ಸಮಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು

ಕೇವಲ ದಲಿತರಿಗೆ ಎಲ್ಲರಿಗೂ ಸಾಮಾಜಿಕ ಅವಕಾಶಗಳನ್ನು ದೊರಕಿಸಲು ಅವರು ಶ್ರಮಿಸಿದರು.ಅವಕಾಶ ವಂಚಿತರು, ಶೋಷಣೆ, ಅನ್ಯಾಯಕ್ಕೆ, ಅವಮಾನಕ್ಕೆ, ದೌರ್ಜನ್ಯಕ್ಕೆ ಒಳಪಟ್ಟ ಎಲ್ಲಾ ಜನರ ಪರವಾಗಿ ಕೆಲಸ ಅವರು ಮಾಡಿದ್ದರು. ಸಮಾಜದಲ್ಲಿ ಸಮಾನತೆ ಬಯಸಿ ಅದನ್ನೇ ನಿರ್ಮಿಸಲು ಬಹಳ ಸ್ಪಷ್ಟವಾಗಿ ಹೇಳಿದ್ದರು. ಸಂವಿಧಾನದ ಧ್ಯೇಯೋದ್ದೇಶಗಳೂ ಅದನ್ನೇ ಹೇಳುತ್ತದೆ. ಸಂವಿಧಾನದಿಂದ ಅನುಕೂಲ ಪಡೆದವರು ಅವರ ಸೋದರ ಜನಾಂಗಗಳಿಗೆ ಸಹಾಯ ಮಾಡಬೇಕು. ಎಲ್ಲರೂ ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬೇಕೆಂದು ಬಯಸಿದ್ದರು ಎಂದರು.

ಮಾನವರು ಪರಸ್ಪರ ಪ್ರೀತಿಸಬೇಕೇ ಹೊರತು ದ್ವೇಷ ಸಲ್ಲದು

ಬಹಳ ಜನ ಸಂವಿಧಾನವನ್ನು ವಿರೋಧಿಸುತ್ತಾರೆ.ಭಾರತ ಬಹುಸಂಸ್ಕೃತಿಯ, ಬಹುತ್ವದ ದೇಶ. ಅನೇಕ ಜಾತಿ, ಧರ್ಮಗಳಿವೆ. ಅನೇಕ ಭಾಷೆಗಳೂ ಇವೆ. ಇದಕ್ಕೆ ಯೋಗ್ಯವಾದ ಸಂವಿಧಾನವನ್ನು ಕೊಟ್ಟವರು ಅಂಬೇಡ್ಕರ್. ಎಲ್ಲಾ ಧರ್ಮಗಳೂ, ಜಾರಿಗಳೂ ಸಮಾನವಾದುದು. ಮಾನವ ಧರ್ಮಕ್ಕೆ ಒತ್ತು ನೀಡಿದ್ದರು. ಮೂಲಭೂತವಾಗಿ ನಾವೆಲ್ಲಾ ಮನುಷ್ಯರು. ಮಾನವರು ಪರಸ್ಪರ ಪ್ರೀತಿಸಬೇಕೇ ಹೊರತು ದ್ವೇಷ ಸಲ್ಲದು. ಇದನ್ನು ಅಂಬೇಡ್ಕರ್ ಅವರು ತಮ್ಮ ಬದುಕಿನಲ್ಲಿ ಸಾರಿದ್ದರು.

ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ್ದ ನಾನು ಹಿಂದೂ ಆಗಿ ಹುಟ್ಟಿದ್ದು, ಹಿಂದೂ ಆಗಿ ಸಾಯುವುದಿಲ್ಲ ಎಂದು ತಮ್ಮ ಕಡೇ ದಿನಗಳಲ್ಲಿ ಬೌದ್ಧ ಧರ್ಮ ಸ್ವೀಕಾರ ಮಾಡಿದರು. ಸ್ವೀಕಾರ ಮಾಡಿದ ನಂತರ ಬಹಳ ದಿನಗಳ ಕಾಲ ಉಳಿಯಲಿಲ್ಲ . ಅವರು ಕೊಟ್ಟ ಸಂವಿಧಾನದ ಪ್ರಕಾರ ಮತ್ತು ಅವರ ಹೋರಾಟದ ದಾರಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುವುದೇ ಅವರಿಗೆ ನಾವು ಸಲ್ಲಿಸುವ ಗೌರವ ಎಂದರು. ಅದೇ ರೀತಿಯಲ್ಲಿ ಸಂವಿಧಾನ , ಪ್ರಜಾಪ್ರಭುತ್ವ, ಸಮಾನತೆ ತರುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದರು.

ಬಳ್ಳಾರಿಯಲ್ಲಿ ಬಾಣಂತಿ ಸಾವು

ಬಳ್ಳಾರಿಯಲ್ಲಿ ಮತ್ತೊಂದು ಬಾಣಂತಿಯ ಸಾವಿಗಿರುವ ಬಗ್ಗೆ ಮಾತನಾಡಿ, ಈ ಬಗ್ಗೆ ಈಗಾಗಲೇ ಸಭೆ ನಡೆಸಿ ಡ್ರಗ್ಸ್ ಕಂಟ್ರೋಲರ್ ಅವರನ್ನು ಅಮಾನತು ಮಾಡಲಾಗಿದೆ. ಈ ಪ್ರಕರಣದಲ್ಲಿ ಸಾವು ಏಕೆ ಸಂಭವಿಸಿದೆ ಎಂದು ಪರಿಶೀಲಿಸಲಾಗುವುದು ಎಂದರು.

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!