Covid Scam: ಸದ್ದಿಲ್ಲದೆ ಬಿಜೆಪಿಗೆ ಶಾಕ್ ಕೊಟ್ಟ ಕಾಂಗ್ರೆಸ್ ಸರ್ಕಾರ..!

ಬೆಂಗಳೂರು: “ಕೋವಿಡ್ ಅಕ್ರಮದಲ್ಲಿ ಕುನ್ಹಾ ಅವರ ಸಮಿತಿ ಶಿಫಾರಸ್ಸಿನಂತೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೋವಿಡ್ ಹಣ ತಿಂದವರನ್ನು ಬಿಡುವುದಿಲ್ಲ” (Covid Scam) ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.

ನ್ಯಾಯಮೂರ್ತಿ ಮೈಖಲ್ ಕುನ್ಹ ವಿಚಾರಣೆ ಆಯೋಗದ ಶಿಫಾರಸ್ಸು ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಉಸ್ತುವಾರಿ ಹಾಗೂ ಅಧಿಕಾರಿಗಳ ಸಮಿತಿ ವರದಿ ಪರಾಮರ್ಶೆ ಹಾಗೂ ಶಿಫಾರಸ್ಸು ಕುರಿತು ವಿಧಾನಸೌಧದಲ್ಲಿ ಉಪಸಮಿತಿಯು ಶನಿವಾರ ಸಭೆ ನಡೆಸಿತು. ನಂತರ ಸಮಿತಿಯ ಮುಖ್ಯಸ್ಥರಾದ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.

“ನಮ್ಮ ಸರ್ಕಾರ ಕೋವಿಡ್ ಅವಧಿಯಲ್ಲಿನ ಅಕ್ರಮದ ಕುರಿತ ನ್ಯಾ.ಜಾನ್ ಮೈಕಲ್ ಕುನ್ಹಾ ಅವರ ವರದಿಯನ್ನು ಸ್ವೀಕರಿಸಿದ್ದೇವೆ. ಈ ವರದಿಯ ಪರಿಶೀಲನೆಯನ್ನು ಮಾತ್ರ ನಾವು ಮಾಡುತ್ತಿದ್ದೇವೆ. ಉಳಿದಂತೆ ಸಮಿತಿ ವರದಿಯ ಶಿಫಾರಸ್ಸಿನಂತೆ ಕಾನೂನು ಚೌಕಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ.

ಮತ್ತೊಂದು ಕಡೆ ಇಲಾಖೆಯಲ್ಲಿ ಅಧಿಕಾರಿಗಳ ವಿರುದ್ಧವೂ ವಿಚಾರಣೆ ನಡೆಯಲಿದೆ. ಕೆಲವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ. ಹೀಗಾಗಿ ಎಷ್ಟು ಪ್ರಕರಣ ದಾಖಲಾಗುತ್ತವೋ ಗೊತ್ತಿಲ್ಲ.

ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ತಪ್ಪು ನಡೆದಿಲ್ಲ ಎಂದು ವರದಿ ನೀಡಿದ್ದನ್ನು ನಮ್ಮ ಸರ್ಕಾರ ಒಪ್ಪುವುದಿಲ್ಲ. ಹೀಗಾಗಿ ಈ ಪ್ರಕರಣದ ಬಗ್ಗೆ ಮತ್ತೆ ತನಿಖೆಯಾಗಬೇಕು. ನಾನು ಹಾಗೂ ಸಿದ್ದರಾಮಯ್ಯ ಅವರೇ ಆ ಆಸ್ಪತ್ರೆಗೆ ಹೋಗಿ ಅಲ್ಲಿನ ಪರಿಸ್ಥಿತಿ ಅಲೋಕನ ಮಾಡಿದ್ದೆವು. 36 ಜನ ಸತ್ತರೆ, ಆಗಿನ ಸಚಿವರು ಕೇವಲ ಮೂರು ಮಂದಿ ಸತ್ತಿದ್ದರು ಎಂದು ಹೇಳಿದ್ದರು. ನಾನು ಮೃತಪಟ್ಟ 36 ಮಂದಿಯ ಮನೆಗಳಿಗೆ ಭೇಟಿ ನೀಡಿದ್ದೇನೆ.

ಈ ವಿಚಾರವಾಗಿ ಬೆಳಗಾವಿಯಲ್ಲಿ ಸಭೆ ಮಾಡಿ ಈ ವಿಚಾರಣೆ ಪ್ರಕ್ರಿಯೆ ಪರಿಶೀಲಿಸುತ್ತೇವೆ. ಈ ಸಮಿತಿಯು ಅಧಿಕಾರಿಗಳ ವಿಚಾರಣೆ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನಿಷ್ಪಕ್ಷಪಾತವಾಗಿ ತನಿಖೆ ಮಾಡುವಂತೆ ಅಧಿಕಾರಿಗಳಿಗೆ ಸ್ವಾತಂತ್ರ್ಯ ನೀಡಲಾಗಿದೆ.

ಬೆಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಆರ್ ಟಿಪಿಸಿಆರ್ ಪರೀಕ್ಷೆ ಮಾಡಲಾಗಿದ್ದು, 84 ಲಕ್ಷ ಪರೀಕ್ಷೆ ಮಾಡಲಾಗಿದೆ ಎಂದು ಹೇಳಿ 502 ಕೋಟಿ ಬಿಲ್ ಮಾಡಿದ್ದಾರೆ. 400 ಕೋಟಿ ಪಾವತಿ ಮಾಡಲಾಗಿದೆ. 84 ಲಕ್ಷ ಎಂದರೆ ಬೆಂಗಳೂರಿನಲ್ಲಿರುವ ಪ್ರತಿ ಮನೆಗೆ ಇಬ್ಬರಿಗೆ ಪರೀಕ್ಷೆ ಮಾಡಿರಬೇಕು.

ಕಿದ್ವಾಯಿ ಸಂಸ್ಥೆಯೊಂದರಲ್ಲೇ 24 ಲಕ್ಷ ಪರೀಕ್ಷೆ ಮಾಡಲಾಗಿದೆ ಎಂದು ಹೇಳಿದ್ದಾರೆ. ತಾಂತ್ರಿಕವಾಗಿ ಸಮರ್ಥವಿಲ್ಲದೆ, ಐಸಿಎಂಆರ್ ಅನುಮತಿ ಇಲ್ಲದೆ ಪರೀಕ್ಷೆ ನಡೆಸಲಾಗಿದೆ. 146 ಕೋಟಿ ಬಿಲ್ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 24 ಲಕ್ಷ ಜನರಿಗೆ ಒಂದೇ ಕಡೆ ಪರೀಕ್ಷೆ ಎಂದರೆ ಅಲ್ಲಿ ಎಷ್ಟು ಜನದಟ್ಟಣೆ, ಸರದಿ ಸಾಲು ಇರಬೇಕು.

ಹೀಗಾಗಿ ಈ ವಿಚಾರದಲ್ಲಿ ವಿಧಾನಸೌಧದಿಂದ ಕೆಳ ಹಂತದವರೆಗೂ ಯಾವ ರೀತಿ ಪ್ರಕ್ರಿಯೆ ಮಾಡಿದ್ದಾರೆ. ಕಾನೂನು ಚೌಕಟ್ಟು ಮೀರಿ ಏನೆಲ್ಲಾ ತೀರ್ಮಾನ ಮಾಡಿದ್ದಾರೆ ಎಂಬುದರ ಬಗ್ಗೆ ಅಧಿಕಾರಿಗಳು ವರದಿ ನೀಡಿದ್ದಾರೆ. ಈ ವರದಿಯನ್ನು ನಾವು ಪರಿಶೀಲನೆ ಮಾಡುತ್ತೇವೆ.” ಎಂದು ತಿಳಿಸಿದರು.

ನಿವೃತ್ತ ಅಧಿಕಾರಿಗಳ ಸಮಿತಿಯಿಂದ ಮಾರ್ಗದರ್ಶನ

ಈ ವರದಿಗಳನ್ನು ಪರಿಶೀಲಿಸಿ, ನಮಗೆ ಮಾರ್ಗದರ್ಶನ ನೀಡಲು ನಿವೃತ್ತ ಅಧಿಕಾರಿಗಳನ್ನೊಳಗೊಂಡ ಅಧಿಕಾರಿಗಳ ಮಟ್ಟದ ಸಮಿತಿ ರಚಿಸಲಾಗುವುದು. ಈ ಪ್ರಕರಣದಲ್ಲಿ ನಾವು ಯಾರಿಗೂ ಅನಗತ್ಯವಾಗಿ ತೊಂದರೆ ಮಾಡಬಾರದು ಎಂದು ಈ ನಿರ್ಧಾರ ಮಾಡಿದ್ದೇವೆ. ಈ ಸಮಿತಿಯು ರಚಿಸಿದ್ದೇವೆ.

ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಳ್ಳುವುದೇಕೆ

ಇದು ರಾಜಕೀಯ ಪಿತೂರಿ ಎಂದು ಮಾಜಿ ಆರೋಗ್ಯ ಸಚಿವರ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ಕಡೆ ಒಂದು ಮಾತಿದೆ. ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡರಂತೆ. ನಾನು ಅವರ ಸುದ್ದಿಯನ್ನೇ ಮಾತನಾಡಿಲ್ಲ. ಅವರೇಕೆ ಮಾತನಾಡುತ್ತಿದ್ದಾರೆ. ನಾವು ವರದಿಯ ಪ್ರಮುಖ ಅಂಶಗಳನ್ನು ಮಾಧ್ಯಮಗಳ ಮುಂದೆ ಪ್ರಸ್ತಾಪ ಮಾಡಿದ್ದೇನೆ ಅಷ್ಟೇ. ಈ ವರದಿಯಲ್ಲಿ ಮೇಲಿಂದ ಕೆಳಗಿನವರೆಗೂ ಅಕ್ರಮದಲ್ಲಿ ಭಾಗಿಯಾಗಿರುವ ಆಯುಕ್ತರು, ಅಧಿಕಾರಿಗಳು, ರಾಜಕಾರಣಿಗಳು, ಖಾಸಗಿ ಆಸ್ಪತ್ರೆಗಳು, ಪ್ರಯೋಗಾಲಯಗಳ ವಿರುದ್ಧ ಸೆಕ್ಷನ್ 71 ಹಾಗೂ ಸೆಕ್ಷನ್ 11ರ ಅಡಿಯಲ್ಲಿ ಸಾರ್ವಜನಿಕ ಸೇವೆ ಅವಧಿಯಲ್ಲಿ ಭ್ರಷ್ಟಾಚಾರ ತಡೆಯುವ ಕಾಯ್ದೆ ಅನ್ವಯ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ವರದಿಯಲ್ಲಿ ತಿಳಿಸಲಾಗಿದೆ” ಎಂದು ತಿಳಿಸಿದರು.

ವಿಧಾನಸಭೆಯಲ್ಲಿ ಮಧ್ಯಂತರ ವರದಿ ಮಂಡನೆ ಮಾಡುತ್ತೀರಾ ಎಂದು ಕೇಳಿದಾಗ, “ಈ ವಿಚಾರವಾಗಿ ಮುಂದೆ ಮಾತನಾಡುತ್ತೇವೆ” ಎಂದು ತಿಳಿಸಿದರು.

ಕುನ್ಹಾ ಅವರ ವರದಿ ಆಧಾರದ ಮೇಲೆ ಎಸ್ಐಟಿ ರಚನೆಯಾಗಿದೆಯೇ ಎಂದು ಕೇಳಿದಾಗ, “ಇದರ ಪ್ರಕ್ರಿಯೆ ನಡೆಯುತ್ತಿದ್ದು, ಎಲ್ಲವೂ ಅಂತಿಮವಾದ ಬಳಿಕ ನಿಮಗೆ ಮಾಹಿತಿ ನೀಡುತ್ತೇವೆ. ಈ ವಿಚಾರವಾಗಿ ನಾವು ಬಿಜೆಪಿಯವರಿಗೆ ಉತ್ತರ ನೀಡುವ ಅವಶ್ಯಕತೆ ಇಲ್ಲ. ಸಮಿತಿ ಶಿಫಾರಸ್ಸು ಪರಿಶೀಲಿಸುತ್ತಿದ್ದು, ಅಧಿಕಾರಿಗಳಿಗೆ ವಿಚಾರಣೆಯ ನಡೆಸುವ ಸಂಪೂರ್ಣ ಅಧಿಕಾರ ನೀಡಿದ್ದೇವೆ” ಎಂದು ತಿಳಿಸಿದರು.

ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಯಾವಾಗ ಕೊಂಡೊಯ್ಯುತ್ತೀರಿ ಎಂದು ಕೇಳಿದಾಗ, “ಎಲ್ಲ ಪುಸ್ತಕವನ್ನು ಒಂದೇ ದಿನ ಓದಿ ಮುಗಿಸಲು ಆಗುವುದಿಲ್ಲ. ಹಂತ ಹಂತವಾಗಿ ಈ ಪ್ರಕರಣವನ್ನು ಪರಿಶೀಲಿಸುತ್ತೇವೆ. ಇದಕ್ಕೆ ಸಮಯಾವಕಾಶ ಬೇಕು. ಕಾನೂನು ತನ್ನ ಕಾರ್ಯ ನಿರ್ವಹಿಸಲಿದೆ” ಎಂದರು.

ಮೊದಲ ಸಭೆಯಲ್ಲಿ ಯಾರ ಮೇಲಾದರೂ ಎಫ್ಐಆರ್ ದಾಖಲಿಸುವ ಸೂಚನೆ ನೀಡಲಾಗಿದೆಯೇ ಎಂದು ಕೇಳಿದಾಗ, “ಈ ವಿಚಾರವಾಗಿ ಅಧಿಕಾರಿಗಳು ತಮ್ಮ ಕೆಲಸ ಮಾಡಲಿದ್ದಾರೆ. ಅಧಿಕಾರಿಗಳು ವಿಚಾರಣೆ ಮಾಡಿ ಕ್ರಮ ಕೈಗೊಳ್ಳುತ್ತಾರೆ. ಆ ಪ್ರಕ್ರಿಯೆಯಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ” ಎಂದರು.

ವಿರೋಧ ಪಕ್ಷದಲ್ಲಿದ್ದಾಗ ಕೋವಿಡ್ ಅವ್ಯವಹಾರದಲ್ಲಿ ಭಾಗಿಯಾದವರನ್ನು ಜೈಲಿಗೆ ಅಟ್ಟುವುದಾಗಿ ಹೇಳಿದ್ದಿರಿ ಎಂದು ಕೇಳಿದಾಗ, “ಬಿಜೆಪಿ ಸರ್ಕಾರ ಹೆಣದ ಮೇಲೆ ಹಣ ಮಾಡಿದೆ ಎಂದು ನಾವೇ ವಿಧಾನಸಭೆಯಲ್ಲಿ ಭಾಷಣ ಮಾಡಿದ್ದೇವೆ. ಜನ ಇವುಗಳನ್ನು ನೋಡಿ ರೋಸಿಹೋಗಿದ್ದಾರೆ. ಈಗ ನಾನು ನಿಮಗೆ ಕೇವಲ ಎರಡು ಉದಾಹರಣೆಯನ್ನಷ್ಟೇ ಮಾತ್ರ ಹೇಳಿದ್ದೇವೆ. ಕೋವಿಡ್ ಹಣ ತಿಂದವರನ್ನು ಬಿಡುವುದಿಲ್ಲ” ಎಂದು ತಿಳಿಸಿದರು.

ಪಿಪಿಇ ಕಿಟ್ ಹಾಗೂ ಯಂತ್ರೋಪಕರಣ ಖರೀದಿ ಹಗಱಣದಲ್ಲಿ ಹಣ ವಸೂಲಿ ಮಾಡಲಾಗಿದೆಯೇ ಎಂದು ಕೇಳಿದಾಗ, “ಅಧಿಕಾರಿಗಳು ಪ್ರಕ್ರಿಯೆ ನಡೆಸುತ್ತಿದ್ದಾರೆ. ಕೆಲವರಿಗೆ ನೋಟೀಸ್ ನೀಡಿದ್ದಾರೆ. ಈ ಪ್ರಕ್ರಿಯೆ ಮೇಲ್ವಿಚಾರಣೆ ನಾವು ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಒಪ್ಪಂದ ಸೂತ್ರದ ಬಗ್ಗೆ ಯಾರೂ ಚರ್ಚೆ ಮಾಡುವುದು ಬೇಡ

ಸಿಎಂ ವಿಚಾರವಾಗಿ ಒಪ್ಪಂದ ಆಗಿರುವುದು ನಿಜ ಎಂಬ ಮುನಿಯಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಒಪ್ಪಂದದ ವಿಚಾರವಾಗಿ ಯಾರೊಬ್ಬರು ಚರ್ಚೆ ಮಾಡಬಾರದು. ನಾವು ಮತ್ತು ಅವರು ರಾಜಕೀಯವಾಗಿ ಕೆಲವು ಸಹಾಕರದಲ್ಲಿ ಕೆಲಸ ಮಾಡುತ್ತಿದ್ದೇವೆ.

ನಾನು ಯಾವುದೇ ಸೂತ್ರವೂ ಇಲ್ಲ. ಮುಖ್ಯಮಂತ್ರಿಗಳಿಗೆ ಕೆಲವು ಜವಾಬ್ದಾರಿ ವಹಿಸಿದ್ದು, ನನಗೆ ಕೆಲವು ಜವಾಬ್ದಾರಿ ವಹಿಸಿದ್ದಾರೆ. ನಾವು ನಮ್ಮ ಕೆಲಸ ಮಾಡುತ್ತಿದ್ದು, ಈ ಒಪ್ಪಂದ ಸೂತ್ರದ ಬಗ್ಗೆ ಯಾರೂ ಮಾತನಾಡುವ ಅವಶ್ಯಕತೆ ಹಾಗೂ ಸಂದರ್ಭವಿಲ್ಲ. ಸಿಎಂ ಹೇಳಿದ್ದೆ ಅಂತಿಮ ಎಂದು ನಾನು ಹೇಳಿದ್ದೇನೆ” ಎಂದು ತಿಳಿಸಿದರು.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ (Accident) ತಾಲೂಕಿನ ತಪಸೀಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="111050"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!