ಗೃಹಲಕ್ಷ್ಮೀಯರ ಪಾಪ ಅವರನ್ನು ಸುಮ್ಮನೆ ಬಿಡುವುದಿಲ್ಲ; ಹೆಚ್.ಡಿ.ಕುಮಾರಸ್ವಾಮಿ| HD Kumaraswamy

ಬೆಂಗಳೂರು: ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸರಣಿ ಸಾವಿನ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು, ಈ ಬಗ್ಗೆ ಹೈಕೋರ್ಟ್ ನ ಹಾಲಿ ನ್ಯಾಯಮೂರ್ತಿಗಳಿಂದ ಸಮಗ್ರ ತನಿಖೆ ಮಾಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಳಪೆ ಔಷಧ ಪೂರೈಕೆ ವಿಷಯ ಸರ್ಕಾರದ ಗಮನಕ್ಕೆ ಬಂದಿರಲಿಲ್ಲವೇ? ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಈ ಮಾಹಿತಿ ಇರಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಇದೇನಾ ಮಹಿಳೆಯರ ಸಬಲೀಕರಣ?

ಪ್ರಗತಿಪರ ರಾಜ್ಯ ಕರ್ನಾಟಕದಲ್ಲಿ ಈ ವರ್ಷ 327 ಬಾಣಂತಿಯರು ಆಸ್ಪತ್ರೆಗಳಲ್ಲಿ ಸಾವನ್ನಪ್ಪಿದ್ದಾರೆ! ಸ್ವತಃ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೇ ನೀಡಿರುವ ಈ ಮಾಹಿತಿ ನನಗೆ ಆಘಾತವುಂಟು ಮಾಡಿದೆ. ವೈದ್ಯ ಕ್ಷೇತ್ರದಲ್ಲಿ ಅಗಾಧ ಮುನ್ನಡೆ ಸಾಧಿಸಿರುವ ಈ ಆಧುನಿಕ ಕಾಲದಲ್ಲಿಯೂ ಮಹಿಳೆಯರು ಆಸ್ಪತ್ರೆಗಳಲ್ಲಿಯೇ ಜೀವ ಚೆಲ್ಲುತ್ತಿರುವುದು ರಾಜ್ಯಕ್ಕೆ ಗೌರವ ತರುವ ವಿಚಾರವಲ್ಲ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಮಹಿಳೆಯರಿಗೆ ಗೃಹಲಕ್ಷ್ಮಿ ಗ್ಯಾರಂಟಿ ಕೊಟ್ಟು ಅವರನ್ನು ಆರ್ಥಿಕವಾಗಿ ಸಬಲೀಕರಣ ಮಾಡುತ್ತಿದ್ದೇವೆ ಎನ್ನುವ ರಾಜ್ಯ ಕಾಂಗ್ರೆಸ್ ಸರಕಾರ; ಆಸ್ಪತ್ರೆಗಳಲ್ಲಿ ಅದೇ ಗೃಹಲಕ್ಷ್ಮೀಯರ ಜೀವಹರಣ ಮಾಡುತ್ತಿದೆ. ಮಗುವಿಗೆ ಜನ್ಮ ನೀಡಲು ಸರಕಾರಿ ಆಸ್ಪತ್ರೆಗೆ ವಿಶ್ವಾಸದಿಂದ ತೆರಳುವ ಗೃಹಲಕ್ಷ್ಮಿಯರು ಜೀವಸಮೇತ ಮರಳಿ ಮನೆಗೆ ಬರುವ ಗ್ಯಾರಂಟಿಯೇ ಇಲ್ಲ!! ಇದೇನಾ ಮಹಿಳೆಯರ ಸಬಲೀಕರಣ? ಎಂದು ಅವರು ಪ್ರಶ್ನೆ ಮಾಡಿದ್ದಾರೆ.

IV ದ್ರಾವಣ ಪೂರೈಸಿದವರು ಯಾರು?

ರಾಜ್ಯದಲ್ಲಿ ಸರಕಾರಿ ಆರೋಗ್ಯ ವ್ಯವಸ್ಥೆ ಪೂರ್ಣ ಹದಗೆಟ್ಟಿದೆ. ಆಸ್ಪತ್ರೆಗಳು ಸಾವಿನ ಕೂಪಗಳಾಗಿವೆ. ಕಳಪೆ ಗ್ಲೂಕೋಸ್, ಔಷಧಗಳಿಂದ ಗೃಹಲಕ್ಷ್ಮೀಯರು ಬಲಿಯಾಗುತ್ತಿದ್ದಾರೆ. ಬಳ್ಳಾರಿ ಆಸ್ಪತ್ರೆಯಲ್ಲಿ IV ದ್ರಾವಣ, ಅಂದರೆ; ರಿಂಗರ್ ಲ್ಯಾಕ್ಟೇಟ್ ದ್ರಾವಣ (Ringer lactate infusion) ಪಡೆದ ಎರಡೇ ಗಂಟೆಯಲ್ಲಿ 9 ಬಾಣಂತಿಯರು ಅಸ್ವಸ್ಥರಾಗಿದ್ದರೆನ್ನುವುದು ಕಳವಳಕಾರಿ. ಹಾಗಾದರೆ, ಈ ದ್ರಾವಣ ಪೂರೈಸಿದ ಕಂಪನಿ ಯಾವುದು? ಅದು ಯಾರದ್ದು? ಎಂದು ಕುಮಾರಸ್ವಾಮಿ ಅವರು ಕೇಳಿದ್ದಾರೆ.

ಅನೇಕ ದಿನಗಳಿಂದ ಕಳಪೆ ಗ್ಲೂಕೋಸ್, ಔಷಧ ಪೂರೈಕೆ ಆಗುತ್ತಿದ್ದರೂ ಸರಕಾರ ಏನು ಮಾಡುತ್ತಿತ್ತು? ಇಷ್ಟು ಸೂಕ್ಷ್ಮ ವಿಚಾರವನ್ನು ಆರೋಗ್ಯ ಸಚಿವರು ಅಲಕ್ಷ್ಯ ಮಾಡಿದ್ದೇಕೆ? ಸಚಿವರಿಗೆ ಇಲಾಖೆಯಲ್ಲಿ ಏನೇನು ನಡೆಯುತ್ತಿದೆ ಎನ್ನುವುದು ಗೊತ್ತೇ ಇರಲಿಲ್ಲವೇ? ಎಂದು ಆರೋಗ್ಯ ಸಚಿವರನ್ನು ನೇರವಾಗಿ ಪ್ರಶ್ನೆ ಮಾಡಿದ್ದಾರೆ.

ಗೃಹಲಕ್ಷ್ಮೀಯರ ಪಾಪ ಅವರನ್ನು ಸುಮ್ಮನೆ ಬಿಡುವುದಿಲ್ಲ

ನನ್ನ ತಪ್ಪಿದ್ದರೆ ರಾಜೀನಾಮೆ ಕೊಡುವೆ ಎಂಬ ಸಚಿವರ ಹೇಳಿಕೆ ಅನಪೇಕ್ಷಿತ. ಜವಾಬ್ದಾರಿ ಕೊಟ್ಟಿರುವುದು ಕೈ ತೊಳೆದುಕೊಂಡು ಪಾರಾಗಲಿಕ್ಕಲ್ಲ. ಅಗತ್ಯವಿರುವುದು ರೋಗಗ್ರಸ್ತ ಆರೋಗ್ಯ ಇಲಾಖೆಗೆ ಸೂಕ್ತ ಚಿಕಿತ್ಸೆ. ಪಲಾಯನಕ್ಕಿಂತ ಪ್ರಾಯಶ್ಚಿತ್ತ ಮುಖ್ಯ. ಇಲಾಖೆಯನ್ನು ಸರಿ ಮಾಡುವುದು ಅವರ ಹೊಣೆ. ಗೃಹಲಕ್ಷ್ಮೀಯರ ಪಾಪ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮರಣಗಳಿಂದ ಸರಕಾರ ನುಣಚಿಕೊಳ್ಳಲು ಸಾಧ್ಯವಿಲ್ಲ. ಹೈಕೋರ್ಟ್’ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು. ಹದಗೆಟ್ಟ ಆರೋಗ್ಯ ವ್ಯವಸ್ಥೆಯನ್ನು ಹಳಿಗೆ ತರುವ ಕೆಲಸ ತುರ್ತಾಗಿ ಆಗಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ (Accident) ತಾಲೂಕಿನ ತಪಸೀಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="111050"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!