ದೊಡ್ಡಬಳ್ಳಾಪುರ: ಕೋಲಾರ ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೇಶನ್ ವತಿಯಿಂದ ಆಯೋಜಿಸಲಾಗಿದ್ದ 34ನೇ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾ ಪಟುಗಳಿಗೆ ಅಭಿನಂದನಾ ಸಮಾರಂಭವನ್ನು (honor) ಇಂದು ಆಯೋಜಿಸಲಾಗಿತ್ತು.
ಕೋಲಾರ ನಗರದ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಸಂಸದ ಎಂ.ಮಲ್ಲೇಶ್ ಬಾಬು ಉದ್ಘಾಟಿಸಿದರು.
ಈ ಕಾರ್ಯಕ್ರಮದಲ್ಲಿ 34ನೇ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ 5 ಮತ್ತು 10 ಕಿಲೋ ಮೀಟರ್ ಓಟದ. ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಡಾ.ವರುಣ್ ರಾಜ ಬಸವೇಶ್ವರ.ಕೆ.ಎಸ್ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕೋಲಾರ ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ವಿ.ಕೃಷ್ಣಾ ರೆಡ್ಡಿ, ಶಾಸಕರಾದ ಡಾ.ಕೊತ್ತನೂರು ಜಿ.ಮಂಜುನಾಥ್, ಇಂಚರ ಗೋವಿಂದ ರಾಜು, ಎಂ.ಎಲ್.ಅನಿಲ್ ಕುಮಾರ್ ಮತ್ತಿತರರಿದ್ದರು.