ತುಮಕೂರು: ಪ್ರೀತಿಸಿದ ಹುಡುಗಿಯನ್ನು ಮದುವೆ ಮಾಡಿಕೊಡಲು ಅವರ ಮನೆಯವರು ನಿರಾಕರಿಸಿದ್ದಕ್ಕಾಗಿ ಯುಕವನೊಬ್ಬ, ಹುಡುಗಿಯ ಮನೆಯ ಮುಂದೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡರುವ ಘಟನೆ ಜಯನಗರ ಬಳಿಯ ಚನ್ನಪ್ಪನಪಾಳ್ಯದಲ್ಲಿ ನಡೆದಿದೆ.
ಮೃತನನ್ನು 32 ವರ್ಷದ ಮಂಜುನಾಥ್ ಎಂದು ಗುರುತಿಸಲಾಗಿದ್ದು, ಈತ ಟಿಟಿ ವಾಹನದ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಮಂಜುನಾಥ್ ಮನೆ ಪಕ್ಕದ ಮನೆಯಲ್ಲಿ ವಾಸವಾಗಿದ್ದ ಅಪ್ರಾಪ್ತ ಬಾಕಿಯನ್ನು ಪ್ರೀತಿಸುತ್ತಿದ್ದನಂತೆ. ಆದರೆ ಹುಡುಗಿ ಅಪ್ರಾಪ್ತಯೆಂಬ ಕಾರಣಕ್ಕೆ ಆಕೆಯ ಮನೆಯವರು ಮದುವೆಗೆ ಒಪ್ಪಿಗೆ ನೀಡಿರಲಿಲ್ಲವಂತೆ.
ಇದರಿಂದ ಮನನೊಂದ ಮಂಜುನಾಥ್ ತಡರಾತ್ರಿ ಯುವತಿ ಮನೆ ಮುಂದೆಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.
ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.