Winter session: ವಿಧಾನ ಪರಿಷತ್ ಸಭಾಪತಿ‌ ಬಸವರಾಜ ಹೊರಟ್ಟಿ ಸುದ್ದಿಗೋಷ್ಠಿ

ಬೆಳಗಾವಿ: ಬೆಳಗಾವಿಯಲ್ಲಿ ಡಿ.9 ರಿಂದ ನಡೆಯಲಿರುವ ಚಳಿಗಾಲ ಅಧಿವೇಶನ (Winter session) ಯಶಸ್ವಿಗೆ ಹಾಗೂ ಕಲಾಪವನ್ನು ರಚನಾತ್ಮಕವಾಗಿ ನಡೆಸಲು ಪರಿಷತ್ ಸದಸ್ಯರಿಗೆ ಅನೇಕ ಸಲಹೆಗಳನ್ನು ನೀಡಲಾಗಿದೆ. ಮಂಗಳವಾರ ಮತ್ತು ಬುಧವಾರ ಪ್ರಶ್ನೋತ್ತರ ವೇಳೆ‌ಯ ನಂತರ ಸಂಪೂರ್ಣ ಕಿತ್ತೂರ ಕಲ್ಯಾಣ ಪ್ರಾಂತ್ಯಗಳ ಅಭಿವೃದ್ಧಿ ಕುರಿತು ಚಿಂತನೆ ನಡೆಸಲು ಸದಸ್ಯರಿಗೆ ಸಲಹೆ ನೀಡಲಾಗಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಅಧಿವೇಶನ ಹಿನ್ನೆಲೆಯಲ್ಲಿ ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಶನಿವಾರ (ಡಿ.7) ಜರುಗಿದ‌ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಬೆಳಗಾವಿ ಅಧಿವೇಶನ ಯಶಸ್ವಿಗೆ ಹಾಗೂ ಪರಿಷತ್ ಕಲಾಪವನ್ನು ರಚನಾತ್ಮಕವಾಗಿ ನಡೆಸಲು ವಿಧಾನ ಪರಿಷತ್ ಸದಸ್ಯರಿಗೆ ಈಗಾಗಲೇ ಅನೇಕ ಸಲಹೆಗಳನ್ನು ನೀಡಲಾಗಿದೆ.

ಈ ಬಾರಿ ಪರಿಷತ್ತಿನಲ್ಲಿ ಒಟ್ಟು 1397 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಅದರಲ್ಲಿ 150 ಚುಕ್ಕೆ ಗುರುತಿನ ಪ್ರಶ್ನೆಗಳು ಹಾಗೂ 81 ಗಮನ ಸೆಳೆಯುವ ಸೂಚನೆಗಳು ಬಂದಿರುತ್ತವೆ ಎಂದರು.

ಮೊದಲ ವಾರ ಮಂಗಳವಾರ ಹಾಗೂ ಬುಧವಾರಗಳಂದು ಯುಕೆಪಿ, ಮಹಾದಾಯಿ, ರೈತರ ಸಮಸ್ಯೆ, ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತ‌ ಚರ್ಚೆಗಳಿಗೆ ಒತ್ತು‌ ನೀಡಲಾಗುವದು.

ಅಧಿವೇಶನದ ಮಂಗಳವಾರ ಮತ್ತು ಬುಧವಾರ ಪ್ರಶ್ನೋತ್ತರ ವೇಳೆ‌ ನಂತರ ಸಂಪೂರ್ಣ ಕಿತ್ತೂರ ಕಲ್ಯಾಣ ಪ್ರಾಂತ್ಯಗಳ ಅಭಿವೃದ್ಧಿ ಚಿಂತನೆ ನಡೆಸಲು ಸಲಹೆ ನೀಡಲಾಗಿದೆ ಎಂದರು.

ಮಕ್ಕಳ ರಕ್ಷಣೆ ಕುರಿತು ಅರಿವು ಮೂಡಿಸಲು ಕ್ರಮ‌ವಹಿಸಲಾಗುತ್ತಿದ್ದು, ಪರಿಷತ್ ಸದಸ್ಯರ ವೇದಿಕೆ ಮಾಡಿ ಮಕ್ಕಳ ಹಕ್ಕುಗಳ ರಕ್ಷಣೆಗೆ ಸರಕಾರಕ್ಕೆ ಸಲಹೆ ನೀಡಲು ಕ್ರಮ ವಹಿಸಲಾಗುವದು.

ಸದನದಲ್ಲಿ ರಚನಾತ್ಮಕ ಚರ್ಚೆಗೆ ಪರಿಷತ್ ಸದಸ್ಯರ ಜತೆ ಈಗಾಗಲೇ ಚರ್ಚಿಸಲಾಗಿದ್ದು, ಸದನ ಸುಗಮವಾಗಿ ನಡೆಯಲು ಅಗತ್ಯ ಕ್ರಮಗಳನ್ನು ವಹಿಸಲಾಗಿದೆ.

ಶಾಸಕರ ಹಾಜರಾತಿ ಹೆಚ್ಚಳಕ್ಕೆ ಕೂಡ ಆದ್ಯತೆ ನೀಡಲಾಗುವುದು.ಬೆಳಗಾವಿ ಸುವರ್ಣ ವಿಧಾನಸೌಧ ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು.

ಅಧಿವೇಶನ ನಡೆಸಲು ಈ ಬಾರಿ 20 ಕೋಟಿ ಅಂದಾಜಿಸಲಾಗಿದೆ. ಶಾಸಕರ ಭವನ ನಿರ್ಮಿಸಲು ಕೆಲವು ಪ್ರಸ್ತಾವನೆಗಳು ಬಂದಿವೆ. ಇವುಗಳ ಬಗ್ಗೆ ಕೂಲಂಕುಷವಾಗಿ ಚರ್ಚಿಸಿ ನಿರ್ಧಾರ‌‌ ಕೈಗೊಳ್ಳಲಾಗುವದು.

ತಾಜ್ ಗ್ರುಪ್, ಕೆ.ಎಲ್.ಇ. ಹೀಗೆ ಅನೇಕ ಸಂಸ್ಥೆಗಳು ಶಾಸಕರ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಲಹೆಗಳನ್ನು ನೀಡಿದ್ದು ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಬೆಳಗಾವಿ ವಿಭಜನೆ ಸಾಧಕ-ಬಾಧಕಗಳ ಬಗ್ಗೆ ಸರಕಾರದ ಹಂತದಲ್ಲಿ ಚರ್ಚೆಯಾಗಬೇಕಿದೆ ಎಂದು ಬಸವರಾಜ ಹೊರಟ್ಟಿ ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ವಿಧಾನ‌ ಪರಿಷತ್ ಕಾರ್ಯದರ್ಶಿ ಕೆ.ಆರ್.‌ಮಹಾಲಕ್ಷ್ಮೀ, ಪೊಲೀಸ್ ಆಯುಕ್ತ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮತ್ತಿತರರು ಉಪಸ್ಥಿತರಿದ್ದರು.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ (Accident) ತಾಲೂಕಿನ ತಪಸೀಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="111050"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!