ಸುವರ್ಣಸೌಧದೊಳಗೆ “ಅನುಭವ ಮಂಟಪ”ದ ವೈಭವ..!| Suvarnasoudha

ಬೆಳಗಾವಿ: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರ ನೇತೃತ್ವದಲ್ಲಿ, ಜನಮಾನಸದಲ್ಲಿ ಸದಾ ಸ್ಮರಣೀಯವಾಗಿ ಉಳಿಯುವ ಮತ್ತೊಂದು ಐತಿಹಾಸಿಕ ಕ್ಷಣವು, ಬೆಳಗಾವಿಯ ಸುವರ್ಣ ಸೌಧದಲ್ಲಿ (Suvarnasoudha) ದಾಖಲಾಗಲಿದೆ.

ವಿಶ್ವಗುರು ಶ್ರೀ ಬಸವಣ್ಣನವರು ಸ್ಥಾಪಿಸಿದ, “ವಿಶ್ವದ ಮೊದಲ ಸಂಸತ್ತು” ಎಂಬ ಖ್ಯಾತಿಯ, “ಅನುಭವ ಮಂಟಪದ” ಬೃಹತ್ ತೈಲವರ್ಣ ಚಿತ್ರ ಅನಾವರಣವು ಯು. ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ, ಚಳಿಗಾಲ ಅಧಿವೇಶನದ ಮೊದಲ ದಿನದಂದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಲಿದ್ದಾರೆ.

ಇದು ಕೇವಲ ಒಂದು ತೈಲವರ್ಣ ಚಿತ್ರ ಅನಾವರಣ ಕಾರ್ಯಕ್ರಮವಲ್ಲ, ಬದಲಾಗಿ ನಮ್ಮ ಪ್ರಜಾಪ್ರಭುತ್ವದ ಮೂಲ ಆಶಯಗಳು, ಸಮಾನತೆ, ಮಾನವೀಯ ಸಂದೇಶಗಳನ್ನು ಜಗತ್ತಿಗೆ ಮತ್ತೊಮ್ಮೆ ಪರಿಚಯಿಸುವ ಹಾಗೂ ಶ್ರೀ ಮಹಾತ್ಮಾ ಗಾಂಧೀಜಿಯವರು ಅಧಿವೇಶನದಲ್ಲಿ ಪಾಲ್ಗೊಂಡ ಶತಮಾನೋತ್ಸವದ, ಸ್ಮರಣಾರ್ಥವಾಗಿ ನಡಯುವ ಒಂದು ಮಹತ್ವದ ಐತಿಹಾಸಿಕ ಕ್ಷಣವಾಗಿದೆ.

ಕ್ಯಾನ್ವಾಸ್ ಮೇಲೆ ತೈಲ ಮಾಧ್ಯಮದ ಮೂಲಕ ರಚಿಸಲ್ಪಟ್ಟ 20 ಅಡಿ ಉದ್ದ ಮತ್ತು 10 ಅಡಿ ಅಗಲದ ಈ ವಿಶೇಷ ಚಿತ್ರಕ್ಕೆ ಜೀವಂತಿಗೆ ಮತ್ತು ನೈಜತೆ ತುಂಬಿದವರು, ಬಿ.ಎಲ್. ಶಂಕರ್ ನೇತೃತ್ವದಲ್ಲಿ, ಪ್ರಖ್ಯಾತ ಕಲಾವಿದರಾದ – ಬೆಂಗಳೂರು ಚಿತ್ರಕಲಾ ಪರಿಷತ್ ನ ಸತೀಶ್ ರಾವ್ ಶಿವಮೊಗ್ಗ ಶ್ರೀಕಾಂತ್ ಹೆಗಡೆ ಸಿದ್ದಾಪುರ, ಶೇಷಾದ್ರಿಪುರಂ ಕೆನ್ ಸ್ಕೂಲ್ ಕಲಾಶಾಲೆಯ ಅಶೋಕ್ ಯು, ಜಗಳೂರು ರಾಜಾ ರವಿವರ್ಮ ಕಲಾಶಾಲೆಯ ರೂಪಾ ಎಂ.ಆರ್, ವೀರಣ್ಣ ಮಡಿವಾಳಪ್ಪ ಬಬ್ಲಿ, ಬೈಲಹೊಂಗಲ ಮತ್ತು ಮಹೇಶ ನಿಂಗಪ್ಪ, ದಫಲಾಪುರ, ಜಮಖಂಡಿ ಅವರು.

ಮೊದಲ ಸಭಾಧ್ಯಕ್ಷರಾದ ಅಲ್ಲಮಪ್ರಭು ಅವರ ಮುಂದಾಳುತ್ವದಲ್ಲಿ ಅಜರಾಮರ ಚಿಂತನೆಗಳನ್ನು ಮತ್ತು ಅನನ್ಯ ತತ್ತ್ವಜ್ಞಾನವನ್ನು ಪ್ರತಿಬಿಂಬಿಸಿದ ಈ ಪವಿತ್ರ ವೇದಿಕೆಯು, ಕೇವಲ ಶರಣ ಚಿಂತನೆಗಳ ಕೇಂದ್ರವಾಗಿರದೆ, ಸಮಸ್ತ ಮನುಕುಲದ ಏಳಿಗೆಗೆ ಶಾಶ್ವತ ಆದರ್ಶಗಳನ್ನು ನೀಡಿ, ಮಾನವೀಯತೆ ಮತ್ತು ಸಮಾನತೆಯ ಮಹಾನ್ ಸಂದೇಶವನ್ನು ಸಮಸ್ತ ವಿಶ್ವಕ್ಕೆ ತೋರಿಸಿಕೊಟ್ಟ ಶಕ್ತಿ ಕೇಂದ್ರವಾಗಿತ್ತು. ಇದು ಸರ್ವಜಾತಿ, ಧರ್ಮಗಳ ಶರಣರನ್ನು ಸ್ವೀಕರಿಸಿದ ಪವಿತ್ರ ತಾಣವಾಗಿದ್ದು, ಅಕ್ಕಮಹಾದೇವಿ, ಮಾದಾರ ಚೆನ್ನಯ್ಯ, ಅಂಬಿಗರ ಚೌಡಯ್ಯ, ಸಿದ್ದರಾಮೇಶ್ವರ, ಮಡಿವಾಳ ಮಾಚಿದೇವ, ದೋಹರ ಕಕ್ಕಯ್ಯ, ಮೇದಾರ ಕೇತಯ್ಯ, ಬಹುರೂಪಿ ಚೌಡಯ್ಯ, , ಕೇತಲದೇವಿ, ದುಗ್ಗಳೆ, ಕಾಳವ್ವ ಮೊದಲಾದ ಶರಣರ ದಿವ್ಯ ಚಿಂತನೆಯನ್ನು ಮತ್ತು ಅನುಭವಗಳನ್ನು ಜಗತ್ತಿಗೆ ಪರಿಚಯಿಸಿದ ಪುಣ್ಯ ಸ್ಥಳವಾಗಿದೆ.

ಬೆಳಗಾವಿ ಸುವರ್ಣಸೌಧದಲ್ಲಿ ಸೋಮವಾರ, ಡಿಸೆಂಬರ್ 9, 2024ರಂದು, ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯ ಅತಿಥಿಯಾಗಿರುವರು.

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ, ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಹಾಗೂ ವಿರೋಧಪಕ್ಷದ ನಾಯಕ ಆರ್. ಅಶೋಕ್ ಅವರು ಉಪಸ್ಥಿತರಿದ್ದು, ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!